ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ; ಬಿಜೆಪಿ ಮಹತ್ವದ ಕೋರ್ ಕಮಿಟಿ ಸಭೆ!

|
Google Oneindia Kannada News

ಬೆಂಗಳೂರು, ಮಾ. 18: ರಾಜ್ಯದ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಹಾಗೂ ಬಿಜೆಪಿಗೆ ಮುಜುಗುರ ತಂದಿಟ್ಟಿರುವ ರಮೇಶ್ ಜಾರಕಿಹೊಳಿ 'ಸಿಡಿ' ಪ್ರಕರಣದ ಬೆಳವಣಿಗೆ ನಡುವೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮಾರ್ಚ್ 19 ರಂದು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.

ನಾಳೆ (ಮಾ.19) ಸಂಜೆ 6.30ಕ್ಕೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸುವ ಅರುಣ್ ಸಿಂಗ್ ಅವರು ಕುಮಾರಕೃಪಾ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡಲಿದ್ದು, ಮಾ. 20 ರಂದು ಬೆಳಗ್ಗೆ 8.30ಕ್ಕೆ ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಹತ್ವದ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಪ್ರಮುಖವಾಗಿ ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆ ಹಾಗೂ ಅಭ್ಯರ್ಥಿಗಳ ಆಯ್ಕೆ ಕುರಿತು ಸಭೆಯಲ್ಲಿ ಅಂತಿಮ ಹಂತದ ಚರ್ಚೆ ಆಗುವ ಸಾಧ್ಯತೆಯಿದೆ. ಬೆಳಗಾವಿ ಲೋಕಸಭೆ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನ ಸಭಾ ಕ್ಷೇತ್ರಗಳಿಗೆ ಏ. 17 ರಂದು ಮತದಾನ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಏ. 4 ಕೊನೆಯ ದಿನವಾಗಿದೆ.

BJP Core Committee Meeting to Select Candidates for 3 Constituencies

ಹೀಗಾಗಿ ಮಾ. 20 ರಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರ ನೇತೃತ್ವದಲ್ಲಿ ನಡೆಯಲಿರುವ ಕೋರ್ ಕಮಿಟಿ ಸಭೆಯಲ್ಲಿ ಮೂರು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ, ಬಿಜೆಪಿ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಲಾಗುತ್ತಿದೆ ಎಂಬ ಮಾಹಿತಿ ಇದೆ.

Recommended Video

ಸಿಎಂ ಭೇಟಿಯಾದ ಬಸವಕಲ್ಯಾಣ ಟಿಕೆಟ್‌ ಆಕಾಂಕ್ಷಿ ಪ್ರದೀಪ್ ವಾತಡೆ | Oneindia Kannada

ಜೊತೆ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣದಿಂದ ರಾಜ್ಯ ಬಿಜೆಪಿ ಹಾಗೂ ಬಿಜೆಪಿ ಸರ್ಕಾರದ ಮೇಲೆ ಆಗಿರುವ ಪರಿಣಾಮದ ಕುರಿತು ಚರ್ಚೆ ನಡೆಯಲಿದೆ ಎಂದು ತಿಳಿದು ಬಂದಿದೆ.

English summary
BJP Core Committee Meeting held today to Select Candidates for Maski, Basavakalyana Assembly by polls and Belagavi Lok sabha by poll.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X