ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿವೈ ವಿಜಯೇಂದ್ರ ಎಂಎಲ್ಸಿ ಮಾಡಲು ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸಮ್ಮತಿ

|
Google Oneindia Kannada News

ಬೆಂಗಳೂರು, ಮೇ. 14: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರನ್ನು ವಿಧಾನ ಪರಿಷತ್ ಸ್ಥಾನಕ್ಕೆ ಶಿಫಾರಸು ಮಾಡಲು ಶನಿವಾರ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ವಿಜಯೇಂದ್ರ ನನ್ನು ವಿಧಾನ ಪರಿಷತ್ ಸದಸ್ಯನನ್ನು ಮಾಡುವಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಪ್ರಸ್ತಾಪ ಮಾಡಿದರು. ನಾವು ಹೆಸರನ್ನು ಕಳುಹಿಸುತ್ತೇವೆ. ಮೇಲಿನವರು ತೀರ್ಮಾನ ಮಾಡುತ್ತಾರೆ ಎಂಬ ಉತ್ತರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ವಿಧಾನ ಪರಿಷತ್ ಚುನಾವಣೆ, ರಾಜ್ಯ ಸಭೆ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುಣಾವಣೆ ಸೇರಿದಂತೆ ಕೆಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.

BJP core committee meeting: Vijayendra name finalized for MLC elections

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರ ಹೆಸರನ್ನು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಶಿಫಾರಸು ಮಾಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಕೋರ್ ಕಮಿಟಿ ಸಭೆ

ಕೋರ್ ಕಮಿಟಿ ಸಭೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರ ವಿಜಯೇಂದ್ರ ಅವರನ್ನು ವಿಧಾನ ಪರಿಷತ್ ಸದಸ್ಯ ಮಾಡುವ ವಿಚಾರವನ್ನು ಪ್ರಸ್ತಾಪಿಸಿದರು. ನಾವು ಹೆಸರು ಕಳುಹಿಸುತ್ತೇವೆ. ಮೇಲಿನವರು ತೀರ್ಮಾನ ಮಾಡುತ್ತಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

BJP core committee meeting: Vijayendra name finalized for MLC elections

1.5 (ಒಂದು ಸ್ಥಾನಕ್ಕೆ ಐದು ಹೆಸರು) ಆಧಾರದಲ್ಲಿ ಅಭ್ಯರ್ಥಿಗಳ ಹೆಸರು ಶಿಫಾರಸು ಮಾಡಲು ಬೊಮ್ಮಾಯಿ ಮತ್ತು ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕೋರ್ ಕಮಿಟಿ ಸಭೆ ಅಧಿಕಾರ ನೀಡಿದೆ. ಸಿಎಂ ಮತ್ತು ರಾಜ್ಯಾಧ್ಯಕ್ಷರ ಮಾತುಕತೆ ನಡೆಸಿ ಕೇಂದ್ರೀಯ ಚುನಾವಣೆ ಸಮಿತಿಗೆ ಹೆಸರು ರವಾನೆಯಾಗಿದೆ.

ಹೈಕಮಾಂಡ್ ಅಂಗೀಕರಿಸಿದ್ರೆ ವಿಜಯೇಂದ್ರ ಮಿನಿಸ್ಟರ್ :

ರಾಜ್ಯದಲ್ಲಿ ಸಂಪುಟ ವಿಸ್ತರಣೆ ಬಾಕಿ ಇದೆ. ಇದರ ನಡುವೆ ನಡೆದಿರುವ ಕೋರ್ ಕಮಿಟಿ ಸಭೆಯಲ್ಲಿ ವಿಜಯೇಂದ್ರ ಅವರನ್ನು ಎಂಎಲ್ ಸಿ ಮಾಡಲು ಶಿಫಾರಸು ಮಾಡಲು ಕೋರ್ ಕಮಿಟಿ ಸಭೆ ನಿರ್ಧರಿಸಿದೆ. ಹೈಕಮಾಂಡ್ ನಿರ್ಧರಿಸಿದರೆ ವಿಜಯೇಂದ್ರ ಎಂಎಲ್‌ಸಿ ಆಗುವುದು ಖಚಿತ. ಸದ್ಯಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಆಗಿರುವ ವಿಜಯೇಂದ್ರ ಅವರನ್ನು ಸಚಿವರನ್ನಾಗಿ ಮಾಡುವ ಉದ್ದೇಶದಿಂದಲೇ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಲು ಯಡಿಯೂರಪ್ಪ ಪ್ರಸ್ತಾಪ ಇಟ್ಟಿದ್ದಾರೆ. ಪರಿಷತ್ ನ ನಾಲ್ಕು ಸ್ಥಾನಗಳಿಗೆ ಐದು ಹೆಸರು ಕಳುಹಿಸುವಂತೆ ಬಿಜೆಪಿ ಕೋರ್ ಕಮಿಟಿ ಸಭೆಗೂ ಮುನ್ನ ಹಕಮಾಂಡ್ ಸೂಚಿಸಿತ್ತು. ಅದರಂತೆ ನಾಲ್ಕ ಸ್ಥಾನಗಳಿಗೆ 20 ಹೆಸರು ಕಳಹಿಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

BJP core committee meeting: Vijayendra name finalized for MLC elections

ನಿರ್ಮಲಾ ಸೀತಾರಾಮನ್ ಕರ್ನಾಟಕದಿಂದ ಆಯ್ಕೆ:

ಮೇಲ್ಮನೆ ಸದಸ್ಯರಾದ ನಿರ್ಮಲಾ ಸೀತಾರಾಮನ್ ಮತ್ತು ಕೆ.ಸಿ. ರಾಮಮೂರ್ತಿ ಅವರನ್ನು ರಾಜ್ಯದಿಂದ ಆಯ್ಕೆ ಮಾಡಲು ಬಿಜೆಪಿ ಕೋರ್ ಕಮಿಟಿ ಸಭೆ ನಿರ್ಧರಿಸಿದೆ. ರಾಜ್ಯಸಭೆಯ ಎರಡನೇ ಸ್ಥಾನಕ್ಕೆ ಹಾಲಿ ಸದಸ್ಯ ಕೆ.ಸಿ. ರಾಮಮೂರ್ತಿ, ನಿರ್ಮಲಾ ಸೀತಾರಾಮನ್, ನಿರ್ಮಲ್ ಕುಮಾರ್ ಸುರಾನಾ ಸೇರಿದಂತೆ ರಾಜ್ಯದಿಂದ ಐವರನ್ನು ಶಿಫಾರಸು ಮಾಡಲು ರಾಜ್ಯ ಬಿಜೆಪಿ ನಾಯಕರು ತೀರ್ಮಾನಿಸಿದ್ದಾರೆ.

Recommended Video

ಜನತೆ ಜೊತೆ ಕಾಂಗ್ರೆಸ್ ಕೊಂಡಿ ಕಳಚಿದೆ ಎಂದು ಒಪ್ಪಿಕೊಂಡ ರಾಹುಲ್ ಗಾಂಧಿ | Oneindia Kannada

English summary
Chief Minister Baavaraj Bommai statement after the core committee meeting:
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X