ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರಕ್ಕೆ ವಿರೋಧ: ರಾಜ್ಯಪಾಲರಿಗೆ ಬಿಜೆಪಿ ಮನವಿ
ಬೆಂಗಳೂರು, ಮಾರ್ಚ್04: ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರದ ವಿರುದ್ಧ ಬಿಜೆಪಿ ನಿಯೋಗವು ಸೋಮವಾರ ಗೌರವಾನ್ವಿತ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ. ವಿಧಾನಪರಿಷತ್ತಿನ ಸದಸ್ಯರಾದ ಎನ್.ರವಿಕುಮಾರ್, ಶಶೀಲ್ ನಮೋಶಿ, ಹನುಮಂತ ನಿರಾಣಿ, ಡಿ.ಎಸ್.ಅರುಣ್, ಶಿಕ್ಷಣ ಪ್ರಕೋಷ್ಠದ ರಾಜ್ಯ ಸಂಚಾಲಕ ಡಾ.ಸಿ.ಬಿ.ಶಶಿಧರ್, ರಾಜ್ಯ ಸಹ ಸಂಚಾಲಕರಾದ ಎಂ.ಜಿ.ಭಟ್, ಹರೀಶ್.ಕೆ, ಡಾ.ರಾಘವೇಂದ್ರ ಹಾಗೂ ಶ್ರೀಮತಿ ಅಶ್ವಿನಿ ಶಂಕರ್ ಅವರ ನಿಯೋಗವು ಈ ಮನವಿ ಸಲ್ಲಿಸಿತು.
9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರವು ಅವೈಜ್ಞಾನಿಕ, ಅಸಾಂವಿಧಾನಿಕ ಮಾತ್ರವಲ್ಲದೆ ಇದೊಂದು ಅನ್ಯಾಯದ ನಿರ್ಧಾರ ಎಂದು ಗಮನ ಸೆಳೆಯಲಾಯಿತು. ಅದರಿಂದ ಆಗುವ ದುಷ್ಪರಿಣಾಮಗಳ ಕುರಿತು ಗಮನಕ್ಕೆ ತರಲಾಯಿತು. ರಾಜ್ಯ ಸರಕಾರದ ಈ ಕ್ರಮವನ್ನು ತಕ್ಷಣ ಹಿಂಪಡೆದುಕೊಳ್ಳುವಂತೆ ಸೂಚಿಸಿ, ಸೂಕ್ತ ನಿರ್ಧಾರ ಕೈಗೊಂಡು ಲಕ್ಷಾಂತರ ಗ್ರಾಮೀಣ ಬಡ ವಿದ್ಯಾರ್ಥಿಗಳ ಭವಿಷ್ಯವನ್ನು ಕಾಪಾಡಬೇಕೆಂದು ಮನವಿ ವಿನಂತಿಸಿದೆ.

ಇನ್ನೂ ಈ ವೇಳೆವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮಾತನಾಡಿ, ಅಧಿವೇಶನದಲ್ಲಿ ಹಾಜರಾತಿ ಹೆಚ್ಚು ಮಾಡಿ, ಸರಕಾರದ ವೈಫಲ್ಯಗಳನ್ನು ತಿಳಿಸಿ, ಬಿಸಿ ಮುಟ್ಟಿಸುವ ಕೆಲಸ ಮಾಡಲಿದ್ದೇವೆ ಎಂದು ತಿಳಿಸಿದರು.ವಿಧಾನಸಭೆಯ ಹೊರಗಡೆ ಎಸ್‍ಸಿ ಎಸ್‍ಟಿ ಹಣ ದುರುಪಯೋಗ, ಬಗರ್ ಹುಕುಂ ಸಾಗುವಳಿ ಅರ್ಜಿಗಳ ರದ್ದತಿ, ವಿಶ್ವವಿದ್ಯಾಲಯಗಳ ರದ್ದು ಮಾಡುವ ಕ್ರಮದ ವಿರುದ್ಧ ಹೋರಾಟ ಮಾಡಲಿದ್ದೇವೆ ಎಂದು ವಿವರಿಸಿದರು.
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಇದೊಂದು ವಿಫಲ ಸರಕಾರ ಎಂದು ಟೀಕಿಸಿದರು. ಯಾವುದೇ ವಿಧದಲ್ಲೂ ಕೂಡ ಇವರ ಸಾಧನೆ ಶೂನ್ಯ ಎಂದು ದೂರಿದರು. ಸರಕಾರವನ್ನು ಮೇಲ್ಮನೆಯಲ್ಲಿ ಕಟ್ಟಿ ಹಾಕುವ ಕುರಿತು ಸಲಹೆಗಳನ್ನು ಪಡೆದುಕೊಂಡಿದ್ದೇವೆ ಎಂದು ಹೇಳಿದರು. ಇವರಿಗೆ ವಿದ್ಯೆ, ದಲಿತರ ಸಮಸ್ಯೆಗಳು ಆದ್ಯತಾ ವಿಷಯವಲ್ಲ, ಈಗಾಗಲೇ ದಲಿತರ- ಬಡವರ ಸಮಾಧಿ ಕಟ್ಟಿದ್ದಾರೆ. ಯಾವುದೇ ಕಾರಣಕ್ಕೂ ಕೂಡ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಬಿಡುವುದಿಲ್ಲ ಎಂದು ಪ್ರಕಟಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಮಾತನಾಡಿ, ಅಧಿವೇಶನದಲ್ಲಿ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಕಟ್ಟಿ ಹಾಕುವ ಕೆಲಸ ಮಾಡಬೇಕು. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯು ಇಂದು ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್ ನಲ್ಲಿ ನಡೆಯಿತು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮೆಲ್ಲ ಶಾಸಕರು ಅಧಿವೇಶನವನ್ನು ಹೆಚ್ಚು ಗಂಭೀರವಾಗಿ ಪರಿಗಣಿಸಬೇಕು. ರಾಜ್ಯದಲ್ಲಿ ಅಭಿವೃದ್ಧಿಶೂನ್ಯ- ಅಸಮರ್ಥ ಕಾಂಗ್ರೆಸ್ ಸರಕಾರ ಇದೆ. ಇದು ದಲಿತ, ಹಿಂದುಳಿದ ವರ್ಗಗಳ ವಿರೋಧಿ ಕಾಂಗ್ರೆಸ್ ಸರಕಾರ. ಕರ್ನಾಟಕದಲ್ಲಿ ಇರುವುದು ಬೆಲೆ ಏರಿಕೆಯ ಕಾಂಗ್ರೆಸ್ ಸರಕಾರ ಎಂದು ಟೀಕಿಸಿದರು.
ಜನವಿರೋಧಿ, ಬಡವರ ವಿರೋಧಿ, ದಲಿತ- ಹಿಂದುಳಿದ ವಿರೋಧಿಗಳೆನಿಸಿದ ದುಷ್ಟ ಕಾಂಗ್ರೆಸ್ ಸರಕಾರಕ್ಕೆ ತಕ್ಕ ಪಾಠ ಕಲಿಸಬೇಕು ಎಂದರು. ಕಾಂಗ್ರೆಸ್ ಸರಕಾರವು ಹಿಂದಿನ ಬಿಜೆಪಿ ಸರಕಾರ ಆರಂಭಿಸಿದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಿ ಹಾಕುವ ಕೆಲಸ ಮಾಡಿದೆ. ಹಣದ ಕೊರತೆ, ಅಭಾವದಿಂದ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡಿದೆ ಎಂದು ಆಕ್ಷೇಪಿಸಿದರು. ಭಾಗ್ಯಲಕ್ಷ್ಮೀ ಯೋಜನೆಯನ್ನು ನಿಲ್ಲಿಸಿದ್ದಾರೆ. ಮಂಡ್ಯದಲ್ಲಿ ತೋಟಗಾರಿಕಾ ವಿವಿ ಆರಂಭಿಸುವುದಾಗಿ ಚಲುವರಾಯಸ್ವಾಮಿ ಹೇಳುತ್ತಾರೆ. ಬಾಗಲಕೋಟೆಯಲ್ಲಿ ತೋಟಗಾರಿಕಾ ವಿವಿ ಇದೆ. ಇದರ ಮೂಲಕ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡಲು ಕಾಂಗ್ರೆಸ್ ಹೊರಟಿದೆ ಎಂದು ಟೀಕಿಸಿದರು. ಅಲ್ಲಿನ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಿ ಇಲ್ಲಿಗೆ ತರುವ ಕೆಲಸ ನಡೆದಿದೆ ಎಂದು ಆರೋಪಿಸಿದರು.
ಉತ್ತರ ಕರ್ನಾಟಕಕ್ಕೆ ಕಾಂಗ್ರೆಸ್ ಪಕ್ಷ ನಿರಂತರ ಅನ್ಯಾಯ ಮಾಡುತ್ತಿದೆ. ವಿಶ್ವವಿದ್ಯಾಲಯಗಳನ್ನು ಮುಚ್ಚುವ ಮೂಲಕ ಬಡ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದ್ದಾರೆ. ಗ್ಯಾರಂಟಿ ಅನುಷ್ಠಾನದ ನೆಪದಲ್ಲಿ ಕೆಎಸ್‍ಆರ್‍ಟಿಸಿಗೆ 7 ಸಾವಿರ ಕೋಟಿ ಬಾಕಿ ಉಳಿಸಿಕೊಂಡಿದ್ದಾರೆ. ಪಿಡಬ್ಲ್ಯುಡಿ ಮತ್ತಿತರ ಇಲಾಖೆಗಳಿಗೆ ವಿದ್ಯುತ್ ಬಿಲ್ ಕಟ್ಟಲು ಸಾಧ್ಯ ಆಗುತ್ತಿಲ್ಲ. ಒಟ್ಟಾರೆಯಾಗಿ ಇಂಥ ಅಭಿವೃದ್ಧಿಶೂನ್ಯ ಸರಕಾರದ ಕಿವಿ ಹಿಂಡುವ ಕೆಲಸವನ್ನು ನಾವು ಮಾಡಬೇಕಿದೆ. ಈ ಸರಕಾರವನ್ನು ಬೆತ್ತಲೆಗೊಳಿಸುವ ಕೆಲಸವನ್ನು ಬಿಜೆಪಿ ಅಧಿವೇಶನದಲ್ಲಿ ಪರಿಣಾಮಕಾರಿಯಾಗಿ ಮಾಡಲಿದೆ ಎಂದು ಹೇಳಿದರು. ನುಡಿದಂತೆ ನಡೆದ ಸರಕಾರ ಇದಲ್ಲ. ಇದು ಎಡವಿ ಮುಗ್ಗರಿಸಿದ ಸರಕಾರ ಎಂದು ಅವರು ಪ್ರಶ್ನೆಗೆ ಉತ್ತರ ನೀಡಿದರು.
-
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್












Click it and Unblock the Notifications