ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧ ತೊಡೆ ತಟ್ಟಿದ ವಿಜಯೇಂದ್ರ, ಯಾವ ವಿಚಾರಕ್ಕೆ?

ಕಾಂಗ್ರೆಸ್‌ ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೊಡೆ ತಟ್ಟಿದ್ದಾರೆ. ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆಯವರ ಒತ್ತಡದಿಂದ ಖರ್ಗೆ ಕುಟುಂಬದ ವಿರುದ್ಧದ ದೂರನ್ನು ಈ ಸರ್ಕಾರ ಗಂಭೀರವಾಗಿ ತೆಗೆದುಕೊಂಡಂತೆ ಕಾಣುತ್ತಿಲ್ಲ ಎಂದು ವಿಜಯೇಂದ್ರ ದೂರಿದ್ದಾರೆ.

ಬಿಜೆಪಿ ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಪ್ರಿಯಾಂಕ್ ಖರ್ಗೆ ಅವರು ರಾಜೀನಾಮೆ ನೀಡುವವರೆಗೂ ಹೋರಾಟ ನಡೆಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಗುತ್ತಿಗೆದಾರ ಸಚಿನ್‌ ಪಾಂಚಾಳಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಸೇರಿದಂತೆ ಕಾಂಗ್ರೆಸ್‌ ನಾಯಕರ ಕೈವಾಡವಿದೆ ಎನ್ನುವ ಆರೋಪವಿದ್ದು, ಆರೋಪಿಗಳ ಬಂಧನ ಹಾಗೂ ಸಚಿವ ಪ್ರಿಯಾಂಕ್‌ ಖರ್ಗೆ ಅವರ ರಾಜೀನಾಮೆಗೆ ಒತ್ತಾಯಿಸಿ ಕಲಬುರಗಿಯಲ್ಲಿ ಇಂದು ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

BJP Demands Priyank Kharge Resignation Over Sachin Panchali Suicide Case BY Vijayendra

ಬಿಜೆಪಿ ನಾಯಕ ನಳಿನ್‌ಕುಮಾರ್‌ ಕಟೀಲ್‌ ಕೂಡ ಈ ಆತ್ಮಹತ್ಯೆಯನ್ನು ಖಂಡಿಸಿದ್ದಾರೆ. ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಸಚಿವ ಪ್ರಿಯಾಂಕ್ ಖರ್ಗೆಯವರ ಭ್ರಷ್ಟಾಚಾರದಿಂದ ಮತ್ತೊಬ್ಬ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಡೆತ್‌ನೋಟ್‌ನಲ್ಲಿ ಸಚಿವರ ಆಪ್ತನ ಹೆಸರು ಬರೆದಿರುವುದೇ ಸಾಕ್ಷಿ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯನವರ ಗುತ್ತಿಗೆದಾರರಿಗೆ ಆತ್ಮಹತ್ಯೆ ಗ್ಯಾರಂಟಿ ಯೋಜನೆಯಿಂದ ಬೀದರ್ ನ ಭಾಲ್ಕಿಯ ಗುತ್ತಿಗೆದಾರ ಸಚಿನ್ ಆತ್ಮಹತ್ಯೆಯ ನಂತರವೂ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡದಿರುವುದು ಇವರ ದುರಂಹಕಾರದ ಪರಮಾವಧಿ. ಸಚಿನ್ ಸಾವಿಗೆ ನ್ಯಾಯ ಸಿಗಬೇಕಾದರೆ ಅವರ ಆತ್ಮಹತ್ಯೆಗೆ ಕಾರಣರಾದವರಿಗೆ ಶಿಕ್ಷೆ ಆಗಲೇಬೇಕು ಎಂದು ಒತ್ತಾಯಿಸಿದ್ದಾರೆ.

BJP Demands Priyank Kharge Resignation Over Sachin Panchali Suicide Case BY Vijayendra

ಆರ್.ಅಶೋಕ್‌ ಕಿಡಿ: ಸಿದ್ದರಾಮಯ್ಯ ಅವರು ಸಿಎಂ ಆದಾಗಲೆಲ್ಲ, ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಲೆಲ್ಲ ಪ್ರಾಮಾಣಿಕ ಅಧಿಕಾರಿಗಳಿಗೆ ಕಿರುಕುಳ ಭಾಗ್ಯ, ಆತ್ಮಹತ್ಯೆ ಗ್ಯಾರಂಟಿ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಕೂಡ ಆರೋಪ ಮಾಡಿದ್ದಾರೆ.

ಗ್ರಾಮೀಣಾಭಿವೃದ್ಧಿ ಇಲಾಖೆಯ ಲಂಚಕೋರತನಕ್ಕೆ ಬೇಸತ್ತು ದಾವಣಗೆರೆಯ ಗುತ್ತಿಗೆದಾರ ಪಿ.ಸಿ.ಗೌಡರ್ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದ ತನಿಖೆ ಮುಗಿಯುವ ಮುನ್ನವೇ ಈಗ ಬೀದರ್ ಜಿಲ್ಲೆ ಭಾಲ್ಕಿ ತಾಲ್ಲೂಕಿನ ಕಟ್ಟಿತೂಗಾಂವ್‌ ಗ್ರಾಮದ ನಿವಾಸಿ ಸಿವಿಲ್‌ ಎಂಜಿನಿಯರ್‌ ಸಚಿನ್‌ ಮಾನಪ್ಪ ಪಾಂಚಾಳ್‌ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಆಪ್ತ, ಕಲಬುರಗಿ ಕಾಂಗ್ರೆಸ್‌ ಮುಖಂಡ ರಾಜು ಕಪನೂರ ಸೇರಿ ಎಂಟು ಮಂದಿ ಹಣಕ್ಕೆ ಬೇಡಿಕೆ ಇಟ್ಟು ಕೊಲೆ ಬೆದರಿಕೆ ಹಾಕಿದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಅವರು ಡೆತ್‌ನೋಟ್‌ ಬರೆದಿಟ್ಟಿದ್ದಾರೆ ಎಂದು ಅಶೋಕ್‌ ದೂರಿದ್ದಾರೆ.

ಎರಡು ಪ್ರಾಮಾಣಿಕ ಗುತ್ತಿಗೆದಾರರ ಆತ್ಮಹತ್ಯೆಗೆ ಕಾರಣವಾಗಿರುವ ಸಚಿವ ಪ್ರಿಯಾಂಕ್‌ ಖರ್ಗೆ ಈ ಸಾವುಗಳಿಗೆ ನೈತಿಕ ಹೊಣೆ ಹೊತ್ತು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು ಎಂದು ಆಗ್ರಹಿಸಿದ್ದಾರೆ. ಬಿಜೆಪಿ ನಾಯಕರು ಸದ್ಯ ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧ ತೊಡೆ ತಟ್ಟಿದ್ದು, ರಾಜೀನಾಮೆಗೆ ಪಟ್ಟು ಹಿಡಿದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+