ಶಾಸಕರಿಗೆ ಲೋಕಸಭೆ ಚುನಾವಣೆಯ ಗುರಿ ನೀಡಿದ ಬಿಜೆಪಿ: ವಿಪಕ್ಷ ನಾಯಕರ ಆಯ್ಕೆ ವಿಳಂಬ

ಬೆಂಗಳೂರು, ಜೂನ್ 08: ರಾಜ್ಯದಲ್ಲಿ 2024ರ ಲೋಕಸಭೆ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಬಿಜೆಪಿಯು ಶಾಸಕರಿಗೆ ಗುರಿ ನೀಡುವ ಕುರಿತು ಇಂದಿನ ಸಭೆಯಲ್ಲಿ ಚರ್ಚೆ ಮಾಡಲಾಯಿತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಗುರುವಾರ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ನಡೆದ ನೂತನ ಶಾಸಕರ ಅಭಿನಂದನಾ ಸಮಾರಂಭದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನೂತನ ಶಾಸಕರಿಗೆ ಅಭಿನಂದನೆ ಸಲ್ಲಿಸಲಾಗಿದೆ. ವಿಧಾನಾಸಭೆ ಚುನಾವಣಾ ಸಂದರ್ಭದಲ್ಲಿ ಏನೆಲ್ಲಾ ಮಾಡಬಹುದಿತ್ತು ಅನ್ನುವ ಬಗ್ಗೆಯೂ ನಾಯಕರೆಲ್ಲ ಕೂಡಿ ಚರ್ಚೆ ಮಾಡಿದ್ದೇವೆ.

BJP Discussed About To Lok Sabha Election 2024, May Delay Opposition Party Leader Choice

ಕೇಂದ್ರ ಸರ್ಕಾರ 9 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಕೇಂದ್ರ ಬಿಜೆಪಿಯ ಯೋಜನೆ ಜನರಿಗೆ ಹೇಗೆ ತಲುಪಿಸಲು?, ಮುಂದೆ ಏನೆಲ್ಲಾ ಮಾಡಬೇಕು, ಕಾರ್ಯ ತಂತ್ರ ರೂಪಿಸುವ ಕುರಿತಂತೆ ಚರ್ಚೆ ನಡಸಿದ್ದೇವೆ ಎಂದರು.

ಇನ್ನೂ ಚುನಾವಣೆ ಮುಗಿದ ಇಷ್ಟು ದಿವಸಗಳಾದರೂ ವಿಧಾನಸಭೆ ಪ್ರತಿಪಕ್ಷದ ನಾಯಕನ ಆಯ್ಕೆ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಬೊಮ್ಮಾಯಿ ಉತ್ತರಿಸಿದರು. ವಿಪಕ್ಷ ನಾಯಕರ ಆಯ್ಕೆ ಕುರಿತು ಈ ಸಭೆಯಲ್ಲಿ ಚರ್ಚೆಗೆ ಬಂದಿಲ್ಲ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಶಾಸಕರ ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ. ಕೋರ್ ಕಮಿಟಿ ಸಭೆಯನ್ನು ಪಕ್ಷದ ರಾಜ್ಯಾಧ್ಯಕ್ಷರು ಕರೆಯುತ್ತಾರೆ ಎಂದು ಅವರು ತಿಳಿಸಿದರು.

ಕರ್ನಾಟದ ರಾಜ್ಯ ವಿಧಾನಸಭಾ ಚುನಾವಣೆ 2023ರ ಫಲಿತಾಂಶ ಪ್ರಕಟಗೊಂಡ ಈ ಜೂನ್ 13ಕ್ಕೆ ಸರಿಯಾಗಿ ಒಂದು ತಿಂಗಳಾಗುತ್ತದೆ. ಇಷ್ಟು ದಿವಸ ಕಳೆದರೂ ಬಿಜೆಪಿಯಲ್ಲಿ ಇನ್ನೂ ಸಹ ವಿಪಕ್ಷ ನಾಯಕರು ಯಾರು ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಳ್ಳುವವರಿ ಇದುವರೆಗೂ ಅಂತಿಮಗೊಂಡಿಲ್ಲ.

BJP Discussed About To Lok Sabha Election 2024, May Delay Opposition Party Leader Choice

ವಿಪಕ್ಷ ನಾಯಕರ ಆಯ್ಕೆ ಮತ್ತೆ ವಿಳಂಬ

ಈ ಸಂಬಂಧ ಗುರುವಾರ ಬೆಂಗಳೂರಿನಲ್ಲಿ ನಡೆಯಲಿರುವ ನೂತನ ಶಾಸಕರ ಅಭಿನಂದನಾ ಮತ್ತು ಪರಾಭವಗೊಂಡ ಶಾಸಕ ಜೊತೆಗೆ ಆವಲೋಕನ ಕಾರ್ಯಕ್ರಮದಲ್ಲಿ ಚರ್ಚೆ ನಡೆಯಲಿದೆ. ಎಲ್ಲ ನಾಯಕರು ವಿರೋಧ ಪಕ್ಷದ ನಾಯಕರನ್ನು ಅಯ್ಕೆ ಮಾಡುತ್ತಾರೆ. ಹಾಗೆಯೇ ಬಿಜೆಪಿ ರಾಜ್ಯಾಧ್ಯಕ್ಷರು ಯಾರಾಗಬೇಕು ಎಂದು ಘೋಷಣೆ ಆಗುತ್ತದೆ ಎಂದು ಭಾವಿಸಲಾಗಿತ್ತು. ಆದರೆ ಸದ್ಯದ ಬಿಜೆಪಿ ನಡೆ ನೋಡಿದರೆ ಇನ್ನು ಕೆಲವು ದಿನ ವಿಳಂಬ ವಾಗುವ ಸಾಧ್ಯತೆ ಇದೆ.

ಇನ್ನೂ ಬಿಜೆಪಿ ವಿರೋಧ ಪಕ್ಷದ ಸ್ಥಾನವನ್ನು ಹಲವು ಮುಖಂಡರು ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ನೀಡಲು ಒಲವು ತೋರಿದ್ದಾರೆ. ಇತ್ತ ಕೆಲವರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೆ ಅರ್ಹರು ಎನ್ನುತ್ತಿದ್ದಾರೆ. ಇವರು ಸೇರಿದಂತೆ ಮಾಜಿ ಸಚಿವ ವಿ.ಸುನೀಲ್ ಕುಮಾರ್ ಅವರು ಸಹ ರೇಸ್‌ನಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+