• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ನಟಿ ರಾಗಿಣಿ ದ್ವಿವೇದಿ ಬಿಜೆಪಿ ಸದಸ್ಯೆ ಅಲ್ಲ: ರಾಜ್ಯ ಬಿಜೆಪಿ ಸ್ಪಷ್ಟನೆ

|

ಬೆಂಗಳೂರು, ಸೆ. 06: ಡ್ರಗ್ಸ್ ಮಾಫಿಯಾ ಜೊತೆಗೆ ನಂಟು ಹಾಗೂ ಬದಲಾದ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಘಟಕ ಸ್ಟಾರ್ ನಟಿ ರಾಗಿಣಿ ಅವರಿಗು ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟನೆ ಕೊಟ್ಟಿದೆ.

   Sputnik V Vaccine ಎಲ್ಲಾ ಪ್ರಯೋಗಗಳಲ್ಲೂ ಯಶಸ್ಸು ,Russiaದ ಮತ್ತೊಂದು ಮೈಲುಗಲ್ಲು | Oneindia Kannada

   ಮದ್ಯ, ಮಾದಕ ವಸ್ತುಗಳು ಹಾನಿಕಾರಕ ಹೌದೋ? ಅಲ್ಲವೋ?

   ಕಳೆದ ವಿಧಾನಸಭಾ ಉಪ ಚುನಾವಣೆಯಲ್ಲಿ ನಟಿ ರಾಗಿಣಿ ಅವರು ಸ್ವಇಚ್ಛೆಯಿಂದ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದರು. ನಟಿ ರಾಗಿಣಿ ಅವರ ವೈಯಕ್ತಿಕ ಅಥವಾ ವೃತ್ತಿ ಜೀವನದ ಕಾರ್ಯ ಚಟುವಟಿಕೆಗಳಿಗೆ ಬಿಜೆಪಿ ಹೊಣೆಯಾಗುವುದಿಲ್ಲ. ರಾಗಿಣಿ ಸೇರಿದಂತೆ ಸಮಾಜಘಾತಕ ಚಟುವಟಿಕೆ ಮಾಡುವ ಯಾರಿಗೂ ಕೂಡ ನಮ್ಮ ಪಕ್ಷದ ಬೆಂಬಲವಿಲ್ಲ.

   ರಾಗಿಣಿ ದ್ವಿವೇದಿ ಆರೋಪಿ ನಂ.2, ರವಿಶಂಕರ್ ಹೆಸರು ನಾಪತ್ತೆ?

   ರಾಗಿಣಿ ಅವರ ವಿಚಾರದಲ್ಲಿ ಗೃಹ ಇಲಾಖೆ ಕೈಗೊಂಡಿರುವ ಕಾನೂನು ಕ್ರಮವನ್ನು ಬಿಜೆಪಿ ಸ್ವಾಗತಿಸುತ್ತದೆ. ಅಷ್ಟಕ್ಕೂ ರಾಗಿಣಿ ದ್ವಿವೇದಿ ಅವರು ಬಿಜೆಪಿ ಪಕ್ಷದ ಸದಸ್ಯೆ ಅಲ್ಲ ಎಂದು ರಾಜ್ಯ ಬಿಜೆಪಿ ವಕ್ತಾರ ಕ್ಯಾ. ಗಣೇಶ್ ಕಾರ್ಣಿಕ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆ ಮೂಲಕ ನಟಿ ರಾಗಿಣಿ ದ್ವಿವೇದಿ ಅವರಿಂದ ಉಂಟಾಗಿರುವ ಮುಜುಗರದಿಂದ ತಪ್ಪಿಸಿಕೊಳ್ಳಲು ರಾಜ್ಯ ಬಿಜೆಪಿ ಪ್ರಯತ್ನಿಸಿದೆ.

   ಕಳೆದ ವರ್ಷ ನಡೆದಿದ್ದ ವಿಧಾನಸಭಾ ಉಪ ಚುನಾವಣೆಯಲ್ಲಿ ನಟಿ ರಾಗಿಣಿ ಅವರು ಬಿಜೆಪಿಯ ಸ್ಟಾರ್ ಪ್ರಚಾರಕರಾಗಿ ಕೆಲಸ ಮಾಡಿದ್ದರು. ಜೊತೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೊಂದಿಗೆ ನಟಿ ರಾಗಿಣಿ ಬಿಜೆಪಿ ಪ್ರಚಾರದಲ್ಲಿ ತೊಡಗಿದ್ದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜೊತೆಗೆ ರಾಜ್ಯ ಬಿಜೆಪಿ ನಾಯಕರೊಂದಿಗೆ ರಾಗಿಣಿ ಅವರು ಲಾಕ್‌ಡೌನ್ ಸಂದರ್ಭದಲ್ಲಿ ಮಾದಕವಸ್ತು ನಿಯಂತ್ರಣದ ಕುರಿತು ಚರ್ಚೆ ನಡೆಸಿದ್ದರು. ಈ ಎಲ್ಲ ಬೆಳವಣಿಗೆಗಳಿಂದ ರಾಜ್ಯ ಬಿಜೆಪಿ ಘಟಕ ಮುಜುಗರಕ್ಕೆ ಈಡಾಗಿತ್ತು.

   English summary
   Hundreds of celebrities from different walks of life campaigned for bjp voluntarily during the 2019 by elections. Kannada cine actress Ragini Dwivedi may have been one of them. Ragini is not a member of the bjp. Hence bjp disdown Ragini Dwivedi for her involvement in the drug rocket says Karnataka BJP. Know more
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X