BJP Manifesto 2023: ಕಲ್ಯಾಣ ಕರ್ನಾಟಕಕ್ಕೆ ಬಿಜೆಪಿ ನೀಡಿದ ಭರವಸೆಗಳಿವು, ಇಲ್ಲಿದೆ ಮಾಹಿತಿ
ಬೆಂಗಳೂರು, ಮೇ, 01: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಸೋಮವಾರ (ಮೇ 01) ಬಿಡುಗಡೆ ಮಾಡಿದೆ. ಬೆಂಗಳೂರಿನ ಶಾಂಗ್ರಿಲಾ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಹಾಗಾದರೆ ಪ್ರಣಾಳಿಕೆಯಲ್ಲಿ ಕಲ್ಯಾಣ ಕರ್ನಾಟಕಕ್ಕೆ ಏನು ಭರವಸೆ ನೀಡಿದ್ದಾರೆ ಅನ್ನುವ ವಿವರವನ್ನು ಇಲ್ಲಿ ತಿಳಿಯಿರಿ.
1. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 7,500 ಕೋಟಿ ಅನುದಾನ ನೀಡುತ್ತೇವೆ
2. ಕೊಪ್ಪಳ ಮತ್ತು ಯಾದಗಿರಿಯಲ್ಲಿ ಏಮ್ಸ್ ಮಾದರಿಯಲ್ಲೇ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಸ್ಥಾಪನೆ ಮಾಡುತ್ತೇವೆ.

3. ಕೃಷ್ಣಾ ಮೇಲ್ದಂಡೆಯಂತಹ ಬಾಕಿ ಇರುವ ಪ್ರಮುಖ ನೀರಾವರಿ ಯೋಜನೆಗಳು ಮತ್ತು ಎಲ್ಲಾ ಏತ ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ಮೂಲಕ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸುತ್ತೇವೆ.
4.10 ಗಿಗಾ ವ್ಯಾಟ್ ಸಾಮರ್ಥ್ಯದ ವಿದ್ಯುತ್ ಉತ್ಪಾದಿಸಲು ಮೆಗಾ ಸೋಲಾರ್ ಪಾರ್ಕ್ ಅಭಿವೃದ್ಧಿಪಡಿಸುತ್ತೇವೆ.
5. ಇನ್ನು ಬೀದರ್‌ನಲ್ಲಿ ಅತ್ಯಾದುನಿಕ ಸೌಲಭ್ಯದ ಆಹಾರ ಸಂಸ್ಕರಣಾ ಪಾರ್ಕ್‌ಗಳನ್ನು ಸ್ಥಾಪಿಸಲು ಕೆ-ಅಗ್ರಿ ಫಂಡ್ ಬಳಸುತ್ತೇವೆ.
6. ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕವಾಗಿ ಶುದ್ಧ ಜಲ ಯೋಜನೆ ಜಾರಿಗೆ 1,000 ಕೋಟಿ ರೂ. ಅನುದಾನವನ್ನು ಮೀಸಲಿಡುತ್ತೇವೆ. ಈ ಮೂಲಕ ಈಗಿರುವ ನೀರಿನ ಸ್ಥಾವರಗಳ ಆಧುನೀಕರಣ ಮತ್ತು ನಿರ್ವಹಣೆಯನ್ನು ಕೈಗೆತ್ತಿಕೊಳ್ಳುತ್ತೇವೆ. ಅಲ್ಲದೆ ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರನ್ನು ಲಭ್ಯವಾಗಿಸಲು 2,500 ಶುದ್ಧ ಜನ ಸ್ಥಾವರಗಳನ್ನು ಸ್ಥಾಪಿಸುತ್ತೇವೆ.
7. ಹಾಗೆಯ "ಮಿಷನ್ ಕನೆಕ್ಟ್ ಕರ್ನಾಟಕ"ದ ಅಡಿಯಲ್ಲಿ ಪ್ರಾದೇಶಿಕ ವಾಯುಮಾನ ಸಂಪರ್ಕ ಮತ್ತು ಪ್ರವಾಸೋದ್ಯಮ ಕಲ್ಪಿಸಲು ಉಡಾನ್ ಯೋಜನೆಯಡಿ ಕೊಪ್ಪಳದಲ್ಲಿ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣವನ್ನು ಸ್ಥಾಪಿಸುತ್ತೇವೆ ಎನ್ನುವ ಭರವಸೆಯನ್ನು ನೀಡಿದ್ದಾರೆ. ಹೀಗೆ ಬಿಜೆಪಿಯು ಕಲ್ಯಾಣ ಕರ್ನಾಟಕಕ್ಕೆ ತನ್ನ ಪ್ರಣಾಳಿಕೆಯಲ್ಲಿ ಭರವಸೆಗಳನ್ನು ಘೋಷಣೆ ಮಾಡಿದೆ.
ಕಿತ್ತೂರು ಕರ್ನಾಟಕಕ್ಕೆ ಬಿಜೆಪಿಯ ಭರವಸೆಗಳು
1. ಬೆಳಗಾವಿಯನ್ನು ಮುಂಬೈ, ಬೆಂಗಳೂರು, ಚೆನ್ನೈ ಮತ್ತು ಇತರ ಪ್ರಮುಖ ಮೆಟ್ರೋಪಾಲಿಟಿನ್ ಪ್ರದೇಶಗಳೊಂದಿಗೆ ಸಂಪರ್ಕ ಕಲ್ಪಿಸುವ ಮೂಲಕ ಕಿತ್ತೂರು ಕರ್ನಾಟಕವನ್ನು "ಲಾಜಿಸ್ಟಿಕ್ ಮತ್ತು ಹಬ್" ಆಗಿ ರೂಪಿಸಲಾಗುತ್ತದೆ.
2. ಬ್ಯಾಡಗಿಯಲ್ಲಿ "ಸ್ಟೈಸ್ ಪಾರ್ಕ್" ಕಾರ್ಯವನ್ನು ತ್ವರಿತಗೊಳಿಸುತ್ತೇವೆ. ಹಾಗೆಯೆ ಈ ಪ್ರದೇಶದಲ್ಲಿ ಮಸಾಲೆ ಪದಾರ್ಥಗಳ ಮಾರುಕಟ್ಟೆ ಸೌಲಭ್ಯ ಸುಧಾರಿಸುತ್ತೇವೆ ಎನ್ನುವ ಭರವಸೆಯನ್ನು ನೀಡಿದ್ದಾರೆ.
3. ಇನ್ನು ಶಾಲಾ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವನ್ನು ಸುಧಾರಿಸಲು ವಲಯದ ಪ್ರತಿ ತಾಲೂಕಿನಲ್ಲೂ 2 "ಪಿಎಂ ಶ್ರೀ ಶಾಲೆಗಳನ್ನು ಸ್ಥಾಪಿಸಲಾಗುತ್ತದೆ.
4. ಬಬಲೇಶ್ವರ, ವಿಜಯಪುರ ಸೇರಿದಂತೆ ಈ ಭಾಗದ ಇನ್ನಿತರ ಪ್ರದೇಶಗಳಲ್ಲಿ ನೀರಾವರಿ ಮತ್ತು ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಉದ್ದೇಶಕ್ಕಾಗಿ "ಕೃತಕ ಕೆರೆ"ಗಳನ್ನು ನಿರ್ಮಿಸಲು 100 ಕೋಟಿ ರೂ. ಮಂಜೂರು ಮಾಡಲಾಗುತ್ತದೆ.
5. ಅಲ್ಲದೆ ಮಿಷನ್ ಕನೆಕ್ಟ್ ಕರ್ನಾಟಕದ ಅಡಿಯಲ್ಲಿ ಪ್ರಾದೇಶಿಕ ವಾಯುಮಾನ ಸಂಪರ್ಕವನ್ನು ಸುಧಾರಿಸಲು ಉಡಾನ್ ಯೋಜನೆಯಡಿ ಬಾಗಲಕೋಟೆಯಲ್ಲಿ "ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ"ವನ್ನು ಸ್ಥಾಪಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಇನ್ನು ಪ್ರಣಾಳಿಕೆ ಬಿಡುಗಡೆ ಸಮಯದಲ್ಲಿ ಮಾತನಾಡಿದ ಜೆ.ಪಿ.ನಡ್ಡಾ, ರಾಜ್ಯದ 224 ಕ್ಷೇತ್ರಗಳ ಜನತೆ, ತಜ್ಞರ ಅಭಿಪ್ರಾಯ ಪಡೆದ ಪ್ರಣಾಳಿಕೆಯನ್ನು ಸಿದ್ಧಪಡಿಸಲಾಗಿದೆ. ಬಿಜೆಪಿಯದ್ದು ಜನಪರ ಪ್ರಣಾಳಿಕೆ ಆಗಿದೆ. ಜನರಿಗೆ ಏನೆಲ್ಲಾ ಒಳ್ಳೆಯದನ್ನು ಮಾಡಲು ಸಾಧ್ಯವಿದೆ, ಅದನ್ನು ಮಾಡಲು ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications