ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಮ್ಮು ಕಾಶ್ಮೀರದಲ್ಲಿ ಬಿಜೆಪಿಗೆ ಭರ್ಜರಿ ಜಯ!

|
Google Oneindia Kannada News

ಬೆಂಗಳೂರು, ಡಿ. 23: ಜಮ್ಮು-ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಮಂಡಳಿಯ (ಡಿಡಿಸಿ) ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಅತಿ ಹೆಚ್ಚು ಸ್ಥಾನ ಗೆದ್ದ ಏಕೈಕ ಪಕ್ಷವಾಗಿ ಹೊರಹೊಮ್ಮಿದೆ. ಈ ಗೆಲುವಿನಿಂದ ದೇಶದಲ್ಲಿ ರೈತಪರ ಮತ್ತು ಅಭಿವೃದ್ಧಿ ಪರ ಇರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಲೆ ಇರುವುದು ಸಾಬೀತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್ ತಿಳಿಸಿದ್ದಾರೆ.

ಜಮ್ಮು -ಕಾಶ್ಮೀರದ ವಿಶೇಷ ಸ್ಥಾನಮಾನಕ್ಕೆ ಸಂಬಂಧಿಸಿದ ಸಂವಿಧಾನದ 370ನೇ ವಿಧಿ ರದ್ದು ಮಾಡಿದ ಕ್ರಮವನ್ನು ಅಲ್ಲಿನ ಜನರು ಸಮರ್ಥಿಸಿದ್ದಾರೆ ಎಂಬುದಕ್ಕೆ ಬಿಜೆಪಿ 75 ಸ್ಥಾನ ಗೆದ್ದುಕೊಂಡಿರುವುದೇ ಸಾಕ್ಷಿ ಎಂದಿದ್ದಾರೆ. ಜಮ್ಮು-ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಮಂಡಳಿಯ (ಡಿಡಿಸಿ) ಚುನಾವಣೆ ಕುರಿತು ತಮ್ಮ ಅಭಿಪ್ರಾಯವನ್ನು ಕಟೀಲ್ ತಿಳಿಸಿದ್ದಾರೆ.

 BJP emerged as single largest party in Jammu and Kashmir DDC election Nalin Kumar Kateel

ಜಮ್ಮು ಕಾಶ್ಮೀರದಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುತ್ತಿರುವ ಬಿಜೆಪಿ ಜಮ್ಮು ಕಾಶ್ಮೀರದಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುತ್ತಿರುವ ಬಿಜೆಪಿ

ಭಾರತೀಯ ಜನತಾ ಪಾರ್ಟಿಯು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಜನಪ್ರಿಯತೆ ಪಡೆದಿರುವುದಕ್ಕೆ ಇದು ಸ್ಪಷ್ಟ ಉದಾಹರಣೆಯಾಗಿದೆ. ಮುಂಬರುವ ಕೇರಳ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲೂ ಅತಿ ಹೆಚ್ಚು ಸ್ಥಾನ ಪಡೆಯಲಿರುವುದರ ಮುನ್ಸೂಚನೆ ಇದಾಗಿದೆ.

 BJP emerged as single largest party in Jammu and Kashmir DDC election Nalin Kumar Kateel

Recommended Video

ಅಭ್ಯಾಸ ಪಂದ್ಯದಲ್ಲಿ ಅಬ್ಬರದ ಶತಕ ಬಾರಿಸಿದ SuryaKumar Yadav | Oneindia Kannada

370ನೇ ವಿಧಿಯ ಮರುಸ್ಥಾಪನೆಯ ಉದ್ದೇಶದೊಂದಿಗೆ ಗುಪ್ಕಾರ್ ಮೈತ್ರಿಕೂಟ ರಚಿಸಿಕೊಂಡ ಪಕ್ಷಗಳು ಡಿಡಿಸಿ ಚುನಾವಣೆಯಲ್ಲಿ ಗಮನಾರ್ಹ ಸಾಧನೆಯನ್ನೇನೂ ಮಾಡಿಲ್ಲ. ಬಿಜೆಪಿ ಮತ್ತು ಪಕ್ಷೇತರರು ಒಟ್ಟು ಸೇರಿ ಶೇಕಡಾ 52ರಷ್ಟು ಪ್ರಮಾಣದ ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್‌ ಮತ್ತು ಮೆಹಬೂಬಾ ಮುಫ್ತಿ ಅವರ ಪಿಡಿಪಿ ಪಕ್ಷಗಳು ಪಕ್ಷೇತರರಿಗಿಂತ ಕಡಿಮೆ ಸ್ಥಾನ ಪಡೆದಿದ್ದು, ಈ ಪಕ್ಷಗಳನ್ನು ಜನರು ತಿರಸ್ಕರಿಸಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

English summary
Bharatiya Janata Party emerged as the single largest party in the Jammu and Kashmir District Development Council (DDC) election. BJP president Nalin Kumar Kateel said the victory was a testament to the agrarian and developmental prime minister Narendra Modi and the BJP wave. Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X