ಎಬಿವಿಪಿ ಪ್ರತಿಭಟನೆಗೆ ಬಿಜೆಪಿ ಬೆಂಬಲ, ರಾಜಭವನ ಚಲೋ
ಬೆಂಗಳೂರು, ಆಗಸ್ಟ್ 22 : ಆಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಎಬಿವಿಪಿ ಕಾರ್ಯಕರ್ತರಿಗೆ ಬಿಜೆಪಿ ನಾಯಕರು ಬೆಂಬಲ ನೀಡಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಬೆಂಗಳೂರಿನ ಮೌರ್ಯ ಸರ್ಕಲ್ ಬಳಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು 48 ಗಂಟೆಗಳ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಆಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಈ ಪ್ರತಿಭಟನೆಗೆ ಬಿಜೆಪಿ ಬೆಂಬಲ ಕೊಟ್ಟಿದೆ.[Amnesty International India ಪರಿಚಯ]
ಸೋಮವಾರ ಬೆಳಗ್ಗೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ವಿಧಾನಪರಿಷತ್ ಸದಸ್ಯ ವಿ.ಸೋಮಣ್ಣ ಮುಂತಾದ ಬಿಜೆಪಿ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಬೆಂಬಲ ನೀಡಿದ್ದಾರೆ. ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು ಇಂದು ರಾಜಭವನ ಚಲೋ ನಡೆಸಲಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.[ಆಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಕಚೇರಿಗಳಿಗೆ ಬೀಗ!]
ಮಧ್ಯಾಹ್ನ 1 ಗಂಟೆಗೆ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ರಾಜಭವನ ಚಲೋ ನಡೆಯಲಿದ್ದು, ಮಧ್ಯಾಹ್ನ 3 ಗಂಟೆಗೆ ರಾಜ್ಯಪಾಲರನ್ನು ವಿದ್ಯಾರ್ಥಿಗಳ ನಿಯೋಗದ ಜೊತೆ ಯಡಿಯೂರಪ್ಪ ಭೇಟಿ ಮಾಡಲಿದ್ದಾರೆ....

ದೇಶವಿರೋಧಿ ಘೋಷಣೆ ವಿರುದ್ಧ ಪ್ರತಿಭಟನೆ
ಬೆಂಗಳೂರಿನ ಯುನೈಟೆಡ್ ಥಿಯಾಲಾಜಿಕಲ್ ಕಾಲೇಜಿನಲ್ಲಿ ಆಮ್ನೆಸ್ಟಿ ಇಂಟರ್‌ನ್ಯಾಷನಲ್ ಇಂಡಿಯಾ ಸಂಸ್ಥೆ ಆಗಸ್ಟ್ 13ರಂದು 'ಬ್ರೋಕನ್ ಫ್ಯಾಮಿಲೀಸ್' ಹೆಸರಿನಲ್ಲಿ ಕಾರ್ಯಕ್ರಮ ಆಯೋಜಿಸಿತ್ತು. ಇಲ್ಲಿ ದೇಶ ವಿರೋಧಿ ಘೋಷಣೆ ಕೂಗಲಾಗಿದೆ ಎಂಬುದು ಆರೋಪವಾಗಿದ್ದು, ಈ ಬಗ್ಗೆ ಜೆ.ಸಿ.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಎಬಿವಿಪಿಯಿಂದ ನಿರಂತರ ಹೋರಾಟ
ಆಗಸ್ಟ್ 13ರ ರಾತ್ರಿಯಿಂದಲೇ ದೇಶವಿರೋಧಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಎಬಿವಿಪಿ ನಿರಂತರವಾಗಿ ಹೋರಾಟ ನಡೆಸುತ್ತಿದೆ. ಬೆಂಗಳೂರಿನಲ್ಲಿ ಹೋರಾಟ ನಡೆಸುತ್ತಿದ್ದ ಕಾರ್ಯಕರ್ತರ ಮೇಲೆ ಎರಡು ಬಾರಿ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

ಪ್ರಮುಖ ಬೇಡಿಕೆಗಳು
* ರಾಷ್ಟ್ರ ವಿರೋಧಿ ಘೋಷಣೆ ಕೂಗಿದವರನ್ನು ತಕ್ಷಣ ಬಂಧಿಸಬೇಕು
* ಆಮ್ನೆಸ್ಟಿ ಇಂಟರ್‌ನ್ಯಾಷನಲ್ ಇಂಡಿಯಾ ಸಂಸ್ಥೆಯನ್ನು ದೇಶದಲ್ಲಿ ನಿಷೇಧಿಸಬೇಕು
* ಯುನೈಟೆಡ್ ಥಿಯಾಲಾಜಿಕಲ್ ಕಾಲೇಜಿನ ವಿರುದ್ಧ ಕ್ರಮ ಕೈಗೊಳ್ಳಬೇಕು

ಯಡಿಯೂರಪ್ಪ ಬೆಂಬಲ
ಬಿಜೆಪಿ ನಾಯಕರು ಎಬಿವಿಪಿ ಪ್ರತಿಭಟನೆಗೆ ಬೆಂಬಲ ಕೊಟ್ಟಿದ್ದಾರೆ. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಇಂದು ಮಧ್ಯಾಹ್ನ 1 ಗಂಟೆಗೆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಹಲವು ನಾಯಕರು ಪ್ರತಿಭಟನೆಯಲ್ಲಿ ಭಾಗಿ
ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಅನಂತ್ ಕುಮಾರ್, ವಿಧಾನಪರಿಷತ್ ಸದಸ್ಯ ವಿ.ಸೋಮಣ್ಣ, ಮಾಳವಿಕಾ ಅವಿನಾಶ್ ಮುಂತಾದವರು ಈಗಾಗಲೇ ಪ್ರತಿಭಟನೆಯಲ್ಲಿ ಪಾಲ್ಗೊಂಡು ಕಾರ್ಯಕರ್ತರಿಗೆ ಬೆಂಬಲ ನೀಡಿದ್ದಾರೆ.












Click it and Unblock the Notifications