ಬಿಜೆಪಿ ಬಣ ರಾಜಕೀಯ: ರಾಜ್ಯಾಧ್ಯಕ್ಷ ಚುನಾವಣೆಗೆ ಟ್ವಿಸ್ಟ್, ಹೈಕಮಾಂಡ್ ಮುಂದೆ ಯತ್ನಾಳ್ ಹೊಸ ಡಿಮ್ಯಾಂಡ್!
ಕರ್ನಾಟಕ ಬಿಜೆಪಿಯಲ್ಲಿ ಬಣ ರಾಜಕೀಯ ಚರ್ಚೆ ಜೋರಾಗಿದೆ. ಬಿಜೆಪಿಯಲ್ಲಿ ದಿನಕ್ಕೊಂದು ಬಣಗಳು ಸೃಷ್ಟಿಯಾಗುತ್ತಿದ್ದು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಬಿಜೆಪಿಯ ಘಟಾನುಘಟಿ ನಾಯಕರು ತಿರುಗಿ ಬಿದಿದ್ದಾರೆ. ಆದರೆ ಬಿಜೆಪಿ ಹೈಕಮಾಂಡ್‌ನ ಸಹಕಾರ ಇದಿದ್ದರಿಂದ ಇಷ್ಟು ದಿನಗಳ ಕಾಲ ಕರ್ನಾಟಕ ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಮುಂದುವರಿದಿದ್ದರು. ಆದರೆ ಈಚೆಗೆ ಕರ್ನಾಟಕದ ಮೂರು ವಿಧಾನಸಭೆ ಕ್ಷೇತ್ರಗಳಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಪಕ್ಷಕ್ಕೆ ಹಿನ್ನಡೆಯಾದ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಚರ್ಚೆ ಕಾವು ಪಡೆದುಕೊಂಡಿದೆ. ಮುಂದುವರಿದು ಬಿಜೆಪಿಯಲ್ಲಿ ಬಣ ರಾಜಕೀಯ ಹಾಗೂ ಬಿ.ವೈ ವಿಜಯೇಂದ್ರ ವಿರುದ್ಧ ಆರೋಪಗಳು, ವೈಮನಸ್ಸು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ಸಿದ್ಧತೆ ಶುರುವಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಬಹುತೇಕ ಫಿಕ್ಸ್ ಅಂತಲೇ ಹೇಳಲಾಗುತ್ತಿದ್ದು. ಕರ್ನಾಟಕ ಬಿಜೆಪಿಯಲ್ಲಿ ಬಣ ರಾಜಕೀಯ ದಿನದಿಂದ ದಿನಕ್ಕೆ ಹೆಚ್ಚಳವಾಗಿದ್ದು. ಬೀದಿ ಜಗಳಕ್ಕೆ ಬಂದು ನಿಂತಿದೆ. ಮೊದಲು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ಅವರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಮಾತ್ರ ತಿರುಗಿ ಬಿದಿದ್ದರು. ಆದರೆ ಇದೀಗ ವಿಜಯೇಂದ್ರ ಅವರ ವಿರುದ್ಧ ಹಲವರು ತಿರುಗಿ ಬಿದಿದ್ದಾರೆ.

ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯವನ್ನು ಮುಗಿಸುವ ಉದ್ದೇಶದಿಂದ ಬಿಜೆಪಿ ಹೈಕಮಾಂಡ್ ಅಲರ್ಟ್ ಆಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವುದಕ್ಕೆ ಬಿಜೆಪಿ ಹೈಕಮಾಂಡ್ ಮುಂದಾಗಿದೆ. ಎರಡು ದಿನಗಳ ಮುಂಚೆಯಷ್ಟೇ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಹೇಳಿದ್ದರು. ಇದರ ಬೆನ್ನಲ್ಲೇ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಚುನಾವಣೆಗೆ ಸಿದ್ಧತೆ ಜೋರಾಗಿದೆ. ಇನ್ನು ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿಯಾಗಿರುವ ರಾಧಾ ಮೋಹನ್ ದಾಸ್ ಅಗರವಾಲ್ ಅವರು ಮಂಗಳವಾರ ಕರ್ನಾಟಕಕ್ಕೆ ಭೇಟಿ ನೀಡಿದ್ದಾರೆ.
ಅವಶ್ಯವಿದ್ದರೆ ಮಾತ್ರ ಚುನಾವಣೆ: ಇನ್ನು ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಸಬೇಕೋ ಅಥವಾ ಬೇಡವೋ ಎನ್ನುವ ಬಗ್ಗೆ ಚರ್ಚೆ ನಡೆದಿದೆ. ಬಿಜೆಪಿಯ ಶಾಸಕರು ಹಾಗೂ ಮುಖಂಡರಿಂದ ಬಿಜೆಪಿ ಹೈಕಮಾಂಡ್ ಮಾಹಿತಿ ಸಂಗ್ರಹಿಸುತ್ತಿದೆ. ಈ ಮಾಹಿತಿಯ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವ ಬಗ್ಗೆ ನಿರ್ಧಾರವಾಗಲಿದೆ ಎಂದು ಹೇಳಲಾಗಿದೆ.
ನಾವು ಚುನಾವಣೆಗೆ ಸಿದ್ಧ: ಇನ್ನು ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆಗೆ ಸ್ಪರ್ಧೆ ಮಾಡುವುದಕ್ಕೆ ನಮ್ಮ ಬಣ ಸಿದ್ಧವಾಗಿದೆ ಎಂದೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಹೇಳಿದ್ದಾರೆ. ಶತಾಯಗತಾಯ ಬಿ.ವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಸಬೇಕು ಅಂತ ಯತ್ನಾಳ್ ಬಣ ಪ್ರಯತ್ನಿಸುತ್ತಿದ್ದರೆ. ಅದಕ್ಕೆ ರಮೇಶ್ ಜಾರಕಿಹೊಳಿ ಅವರು ಸಹ ಯತ್ನಾಳ್‌ಗೆ ಸಾಥ್ ಕೊಟ್ಟಿದ್ದಾರೆ. ರಮೇಶ್ ಜಾರಕಿಹೊಳಿ ಅವರು ಸಹ ಬಿಜೆಪಿಯಲ್ಲಿ ಬಂಡಾಯವೆದ್ದಿರುವುದು ಬಿಜೆಪಿ ಬಣರಾಜಕೀಯ ಬೀದಿಗೆ ಬಂದಂತಾಗಿದೆ.

ಗೌಪ್ಯ ಮತದಾನಕ್ಕೆ ಯತ್ನಾಳ್ ಬಣ ಒತ್ತಾಯ
ಇನ್ನು ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆದರೆ ಚುನಾವಣೆಯನ್ನು ಅತ್ಯಂತ ಗೌಪ್ಯವಾಗಿ ನಡೆಸುವಂತೆ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.












Click it and Unblock the Notifications