ಸಿದ್ಧಗಂಗಾ ಶ್ರೀಗಳ ಫೋಟೋ ಹೊರಕ್ಕೆ! ಕಾಂಗ್ರೆಸ್ ಸರಕಾರಕ್ಕೆ ಕೇಸರಿ ಎಂದರೆ ದ್ವೇಷ, ಶತ್ರುಭಾವ!: ಬಿಜೆಪಿ ಕಿಡಿ
ಬೆಂಗಳೂರು,ಜೂನ್01: ವಿಧಾನಸೌಧದ ಕೊಠಡಿಯಲ್ಲಿ ಅಳವಡಿಸಲಾಗಿದ್ದ ಡಾ| ಶಿವಕುಮಾರ ಸ್ವಾಮೀಜಿ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರ ಭಾವಚಿತ್ರವನ್ನು ತೆರವುಗೊಳಿಸಿ, ಪಡಸಾಲೆಯಲ್ಲಿ ರಾಶಿ ಹಾಕಿರುವುದನ್ನು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದೆ.
ಈ ಕುರಿತು ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿದ್ದು,ಅಹಂಕಾರದ ಪರಮಾವಧಿ. ಕಾಂಗ್ರೆಸ್ ಸರ್ಕಾರಕ್ಕೆ ಕೇಸರಿ ಎಂದರೆ ದ್ವೇಷ, ಶತ್ರುಭಾವ! ಇಂದು ನಡೆದಾಡುವ ದೇವರು, ಕಾಯಕಯೋಗಿ, ತ್ರಿವಿಧದಾಸೋಹಿ ಪರಮ ಪೂಜನೀಯ ಡಾ।। ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಭಾವಚಿತ್ರವನ್ನು ವಿಧಾನಸೌಧದ ಕೊಠಡಿಯಿಂದ ತೆರವುಗೊಳಿಸಿ ಪಡಸಾಲೆಯಲ್ಲಿ ಉರುಳಾಡುವಂತೆ ಮಾಡಿ ಅಪಮಾನಿಸಿರುವುದು ಅಕ್ಷಮ್ಯ ಅಪರಾಧ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ರಾಜ್ಯ ಘಟಕ ಟೀಕಿಸಿದೆ.

ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರು ಈ ಕೂಡಲೆ ರಾಜ್ಯದ ಜನತೆಯ ಕ್ಷಮೆ ಕೋರಿ ಪೂಜ್ಯ ಸ್ವಾಮೀಜಿಯವರ ಭಾವಚಿತ್ರವನ್ನು ಸಕಲ ಗೌರವಗಳೊಂದಿಗೆ ಪುನಃ ಲಗತ್ತಿಸಲು ಆಗ್ರಹಿಸುತ್ತೇವೆ ಎಂದು ಹೇಳಿದೆ.
ಬಿಜೆಪಿಗೆ ಟ್ವೀಟ್ ಗೆ ಟ್ವೀಟಿಗರು ಆಕ್ರೋಶ
ಇನ್ನೂ ಬಿಜೆಪಿಗೆ ಟ್ವೀಟ್ ಗೆ ಟ್ವೀಟಿಗರು ಬಿಜೆಪಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದು, ಅವನ್ಯಾವನೋ ಒಂದು ಫೋಟೋ ತೆಗೆದು ಹಾಕಿರುತ್ತಾನೆ. ಅದರ ಸತ್ಯಸತ್ಯತೆ ತಿಳಿಯದೇ ಹೀಗೆ ಟ್ವೀಟ್ ಮಾಡಿನೇ , ವಿರೋಧ ಪಕ್ಷ ಆಗುವ ಅರ್ಹತೆ ಕಳೆದುಕೊಳ್ಳುವ ಮಟ್ಟಕ್ಕೆ ಬಂದ್ದಿದೀರಾ. ಯಾಕೆ ಫೋಟೋವನ್ನ ತೆಗೆದಿದ್ದಾರೆ ಅಂತ ಪ್ರಶ್ನೆ ಮಾಡಬಹುದಿತ್ತು ಆದರೆ ನೀವು ಮಾಡಲ್ಲ ಯಾಕೆಂದರೆ ನಿಮಗೂ ಗೊತ್ತು ಕಾಂಗ್ರೆಸ್ ನಿಮ್ಮತರ ಕೀಳಮಟ್ಟದ ರಾಜಕಾರಣ ಮಾಡಲ್ಲ ಅಂತ ಎಂದು ಕಿಡಿಕಾರಿದ್ದಾರೆ.
ಮೊದಲು ವಿಪಕ್ಷ ನಾಯಕನನ್ನ ಆರಿಸಿ ಆಮೇಲೆ ಸೋಷಿಯಲ್ ಮಿಡಿಯಾದಲ್ಲಿ ನಿಮ್ಮ ಹೋರಾಟ ಮಾಡಿ ಎಂದು ಇನ್ನೊಬ್ಬ ಟ್ವೀಟಿಗರು ಟೀಕಿಸಿದ್ದು, ಕಾಮಾಲೆ ಕಣ್ಣಿಗೆ ಎಲ್ಲವೂ ಹಳದಿ. ಕೊಠಡಿಗೆ ಹೊಸ ಪೆಯಿಂಟಿಂಗ್ ಮಾಡಬೇಕು, ಭಾವಚಿತ್ರ ತೆಗೆದಿದ್ದಾರೆ ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಅಹಂಕಾರದ ಪರಮಾವಧಿ!@INCKarnataka ಸರಕಾರಕ್ಕೆ ಕೇಸರಿ ಎಂದರೆ ದ್ವೇಷ, ಶತ್ರುಭಾವ!
— BJP Karnataka (@BJP4Karnataka) June 1, 2023
ಇಂದು ನಡೆದಾಡುವ ದೇವರು, ಕಾಯಕಯೋಗಿ, ತ್ರಿವಿಧದಾಸೋಹಿ ಪರಮ ಪೂಜನೀಯ ಡಾ।। ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಭಾವಚಿತ್ರವನ್ನು ವಿಧಾನಸೌಧದ ಕೊಠಡಿಯಿಂದ ತೆರವುಗೊಳಿಸಿ ಪಡಸಾಲೆಯಲ್ಲಿ ಉರುಳಾಡುವಂತೆ ಮಾಡಿ ಅಪಮಾನಿಸಿರುವುದು ಅಕ್ಷಮ್ಯ ಅಪರಾಧ!… pic.twitter.com/mpr1MbGcZS












Click it and Unblock the Notifications