ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅರೆಸ್ಟ್ : ಉಪ ಚುನಾವಣೆ ಬಿಜೆಪಿಗೆ ಸಿಕ್ತು ಹೊಸ ಅಸ್ತ್ರ
Congress mla Satish Sail arrest: ಕಾಂಗ್ರೆಸ್ ಸರ್ಕಾರಕ್ಕೆ ಇದೀಗ ಬಿಗ್ ಶಾಕ್ ಎದುರಾಗಿದೆ. ಉಪ ಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್‌ಗೆ ಶಾಕ್ ಮೇಲೆ ಶಾಕ್ ಎದುರಾಗಿದೆ. ಕಾಂಗ್ರೆಸ್‌ನ ಶಾಸಕ ಸತೀಶ್ ಸೈಲ್ ಅವರನ್ನು ಗುರುವಾರ ಸಿಬಿಐ ಅರೆಸ್ಟ್ ಮಾಡಿದೆ. ರಾಜ್ಯದಲ್ಲಿ ಉಪ ಚುನಾವಣೆಗೆ ಬೆರಳೆಣಿಕೆಯ ದಿನಗಳು ಬಾಕಿ ಉಳಿದಿರುವಾಗಲೇ ಮಹತ್ವದ ಬೆಳವಣಿಗೆ ನಡೆದಿದೆ. ಇದು ಸಹಜವಾಗಿಯೇ ಬಿಜೆಪಿಗೆ ಹೊಸ ಅಸ್ತ್ರಸಿಕ್ಕಂತಾಗಿದೆ.
ಕರ್ನಾಟಕದಲ್ಲಿ ನಡೆದ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರದ ಶಾಸಕ ಸತೀಶ್ ಸೈಲ್ ಆರೋಪಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶಿಸಿತ್ತು. ಅಲ್ಲದೇ ಕೂಡಲೇ ಶಾಸಕ ಸತೀಶ್ ಸೈಲ್ ಅವರನ್ನು ವಶಕ್ಕೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್‌ನಿಂದ ಸೂಚನೆ ನೀಡಲಾಗಿತ್ತು. ಇದೀಗ ಸತೀಶ್ ಅವರನ್ನು ಬಂಧಿಸಲಾಗಿದ್ದು, ವೈದ್ಯಕೀಯ ಪರೀಕ್ಷೆಗಳನ್ನು ಸಹ ನಡೆಸಲಾಗಿದೆ.

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಇದು ಬರೋಬ್ಬರಿ 14 ವರ್ಷಗಳ ಹಿಂದಿನ ಪ್ರಕರಣವಾಗಿದೆ. ಕರ್ನಾಟಕದಲ್ಲಿ ಭಾರೀ ಸದ್ದು ಮಾಡಿದ್ದ ಪ್ರಕರಣಗಳಲ್ಲಿ ಇದು ಸಹ ಒಂದಾಗಿದೆ.
ಉತ್ತರ ಕನ್ನಡದ ಬೇಲೇಕೇರಿ ಎನ್ನುವ ಬಂದರಿನಿಂದ ಕಬ್ಬಿಣದ ಅದಿರು ಕಳ್ಳತನ ಮತ್ತು ಅಕ್ರಮ ರಫ್ತು ಪ್ರಕರಣ ಇದಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರವಷ್ಟೇ ಶಾಸಕ ಸತೀಶ್ ಸೈಲ್ ವಶಕ್ಕೆ ಪಡೆಯುವಂತೆ ಕೋರ್ಟ್ ಸೂಚನೆ ನೀಡಿತ್ತು. ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ಶಾಸಕ ಸತೀಶ್ ಸೈಲ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.
200 ಕೋಟಿ ಮೌಲ್ಯ: ಇನ್ನು ಈ ಪ್ರಕರಣವು ಬರೋಬ್ಬರಿ 200 ಕೋಟಿ ರೂಪಾಯಿಗೂ ಹೆಚ್ಚಿನದಾಗಿದೆ ಎಂದು ಹೇಳಲಾಗಿದೆ. 200 ಕೋಟಿ ಮೌಲ್ಯದ ಕಬ್ಬಿಣದ ಅದಿರನ್ನು ಅಕ್ರಮವಾಗಿ ರಫ್ತು ಮಾಡಿರುವುದಕ್ಕೆ ಸಂಬಂಧಿಸಿದ್ದಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರದ ಶಾಸಕ ಸತೀಶ್ ಸೈಲ್ ಇದೀಗ ಬಂಧನಕ್ಕೆ ಒಳಪಟ್ಟಿದ್ದಾರೆ.
ಪರಪ್ಪನ ಅಗ್ರಹಾರಕ್ಕೆ ಶಿಫ್ಟ್: ಕಾಂಗ್ರೆಸ್ ಶಾಸಕ ಸತೀಶ್ ಅವರನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ. ಅವರನ್ನು ಬೆಂಗಳೂರಿನ ಬೌರಿಂಗ್ ಹಾಗೂ ಲೇಡಿ ಸರ್ಜನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ನಂತರ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗಿದೆ.
ಇನ್ನು ಬೆಲೇಕೆರಿ ಅದಿರು ನಾಪತ್ತೆ ಕೇಸ್‌ಗೆ ಸಂಬಂಧಿಸಿದಂತೆ ಶಾಸಕ ಸತೀಶ್ ಸೈಲ್ ಆರೋಪಿ ಹೇಳಲಾಗಿದೆ. ಶುಕ್ರವಾರ ಅಂದರೆ ಅಕ್ಟೋಬರ್ 25ರಂದು ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ. ಈ ಕೇಸ್‌ನಲ್ಲಿ ಶಿಕ್ಷೆಯ ಪ್ರಮಾಣ ಅ.25ಕ್ಕೆ ಪ್ರಕಟವಾಗಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಸೇರಿದಂತೆ ಎಲ್ಲಾ ಅಪರಾಧಿಗಳಿಗೂ ಶಿಕ್ಷೆ ಪ್ರಮಾಣ ಪ್ರಕಟವಾಗಲಿದೆ. ಶುಕ್ರವಾರ ನ್ಯಾಯಾಧೀಶರ ಮುಂದೆ ಶಾಸಕ ಸತೀಶ್ ಸೈಲ್ ಹಾಜರುಪಡಿಸಲಾಗುವುದು ಎಂದು ಸಿಬಿಐನ ಅಧಿಕಾರಿಗಳು ಹೇಳಿದ್ದಾರೆ.
ಏನಿದು ಬೆಲೇಕೆರಿ ಅದಿರು ನಾಪತ್ತೆ ಪ್ರಕರಣ: ಬೆಲೇಕೆರಿಯಲ್ಲಿ ಅದಿರು ನಾಪತ್ತೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು. ಈಗಾಗಲೇ ಬೆಲೇಕೆರಿ ಅದಿರು ನಾಪತ್ತೆ ಕೇಸ್ ಸೇರಿದಂತೆ ಒಟ್ಟು 6 ಪ್ರಕರಣಗಳಲ್ಲಿ ಗುರುವಾರ ಅಂತಿಮ ಆದೇಶ ನೀಡಲಾಗಿದೆ. ಸಿಬಿಐನಿಂದ ಬೇಲೇಕೇರಿ ಅದಿರು ನಾಪತ್ತೆಗೆ ಸಂಬಂಧಿಸಿದಂತೆ 6 ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆದಿತ್ತು. ಅಲ್ಲದೇ ಈ ಪ್ರಕರಣಗಳಿಗೆ ಸಂಬಧಿಸಿದಂತೆ ಚಾರ್ಜ್‌ಶೀಟ್ ಸಲ್ಲಿಸಲಾಗಿತ್ತು.












Click it and Unblock the Notifications