ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಬಿಜೆಪಿ ಸರ್ಕಾರ ಭಾಗಿ: ಪ್ರಿಯಾಂಕ್ ಖರ್ಗೆ
ಬೆಂಗಳೂರು, ಏಪ್ರಿಲ್ 27: ಪಿಎಸ್ಐ ನೇಮಕಾತಿಯಲ್ಲಿ ಭಾಗಿಯಾಗಿರುವ ಅಧಿಕಾರಿಗಳು ಅದೇ ಹುದ್ದೆಯಲ್ಲಿ ಮುಂದುವರಿಸಿದರೆ ನಿಷ್ಪಕ್ಷಪಾತ ತನಿಖೆ ನಡೆಯಲು ಹೇಗೆ ಸಾಧ್ಯ? ಆದರೆ ಅಧಿಕಾರಿಯನ್ನು ಬೇರೆಡೆಗೆ ವರ್ಗಾವಣೆ ಮಾಡಿ ತನಿಖೆ ನಡೆಸಬೇಕು, ಈ ಕೆಲಸ ಮಾಡಲು ಸರ್ಕಾರಕ್ಕೆ 15 ದಿನಗಳು ಬೇಕಾಯಿತೇ? ಇದನ್ನು ಗಮನಿಸಿದರೆ ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಬಿಜೆಪಿ ಸರ್ಕಾರ ಭಾಗಿಯಾಗಿದೆ ಎಂದು ಬಿಜೆಪಿ ವಿರುದ್ಧ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಗುಡುಗಿದ್ದಾರೆ.
ಬೆಂಗಳುರಿನ ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಮಾಧ್ಯಮ ಪ್ರತಿಕ್ರಿಯೆ ಅವರು ಇಂದು ಸರ್ಕಾರ ಏಕ ಆದೇಶ ಹೊರಡಿಸಲಾಗಿದೆ ಎಂಬ ಮಾಹಿತಿ ಬಂದಿದೆ. ಆ ಮೂಲಕ ಸರ್ಕಾರ ಎಲ್ಲೋ ಒಂದು ಕಡೆ ಈ ಹಗರಣ ನಡೆದಿದೆ, ಅಧಿಕಾರಿಗಳು ಭಾಗಿಯಾಗಿದ್ದಾರೆ, ಸರ್ಕಾರದ ಪಾಲುದಾರಿಕೆ ಇದೆ ಎಂದು ಒಪ್ಪಿಕೊಳ್ಳುತ್ತಿರುವಂತಿದೆ ಎಂದು ಅವರು ಆರೋಪಿಸಿದರು.
ದಿವ್ಯಾ ಹಾಗರಗಿ ಅವರು ಡಿ.ಕೆ. ಶಿವಕುಮಾರ್ ಅವರ ಜತೆಗಿರುವ ಫೋಟೋ ಬಿಡುಗಡೆ ಆಗಿತ್ತು, ಇಂದು ಬೇರೆ ಕಾಂಗ್ರೆಸ್ ನಾಯಕರ ಜತೆ ಇರುವ ಫೋಟೋ ಬಂದಿದೆ. ನಿನ್ನೆ ಪ್ರಧಾನಿ ಜತೆಗಿನ ಫೋಟೋ ಬಿಡುಗಡೆ ಆಗಿತ್ತು ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಿನ್ನೆ ಬಿಜೆಪಿ ಬಿಡುಗಡೆ ಮಾಡಿದ ಫೋಟೋ 2018ರಲ್ಲಿ ಹೈದರಾಬಾದ್ ಕರ್ನಾಟಕ ಭಾಗದ ನರ್ಸಿಂಗ್ ಕಾಲೇಜು ವಿಚಾರಕ್ಕೆ ಅಂದಿನ ಸಚಿವರಾದ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿರುವ ಬಗ್ಗೆ ಅವರೇ ಹಾಕಿಕೊಂಡಿದ್ದಾರೆ. ಬಿಜೆಪಿ ಐಟಿ ಸೆಲ್ ತಮಗೆ ಬೇಕಾದಷ್ಟು ವಿಚಾರ ಮಾತ್ರ ನೋಡುತ್ತಾರೆ ಎಂದರು.

ದಿವ್ಯಾ ಅವರು ಯಾರ ಜತೆ ಫೋಟೋ ತೆಗೆಸಿಕೊಂಡಿದ್ದಾರೆ ಎಂಬುದು ಬೇರೆ ವಿಚಾರ. ಅವರು ಬಿಜೆಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದು, ದಿಶಾ ಸಮಿತಿ ಸದಸ್ಯರಿಗೆ, ರಾಜ್ಯ ನರ್ಸಿಂಗ್ ಕೌನ್ಸಿಲ್ ಸದಸ್ಯರಾಗಿ ನಾಮನಿರ್ದೇಶನ ಮಾಡಿದ್ದರು. ಅವರು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಕ್ಕೆ ಸೇರಿದ್ದರಾ ಎಂಬುದು ಬೇರೆ ವಿಚಾರ. ಅವರಿಗೆ ನಿಜವಾಗಲೂ ಕಾಳಜಿ ಇದ್ದರೆ, ಅವರೊಬ್ಬರು ಆರೋಪಿ. ಪರೀಕ್ಷೆ ಬರೆದ 56 ಸಾವಿರ ಅಭ್ಯರ್ಥಿಗಳು ಕಂಗಾಲಾಗಿದ್ದಾರೆ ಎಂದರು.

ಆರೋಪಿಯನ್ನು ಬಂಧಿಸುವ ಬದಲು, ಇವರ ಜತೆ ಫೋಟೋ ಇದೆ ಎಂದು ಹೇಳುವುದರಲ್ಲಿ ಯಾವ ಅರ್ಥವಿದೆ. ಅವರ ಮಗನ ಮದುವೆಗೆ ಆಮಂತ್ರಣ ನೀಡಲು ಬಂದಿದ್ದರು. ನನ್ನ ಜತೆಗಿನ ಫೋಟೋ ಕೂಡ ಇರಬಹುದು. ಮೋದಿ ಅವರ ಜತೆಗೂ ಫೋಟೋ ಇರಬಹುದು. ಹಾಗೆಂದು ನೀವು ತನಿಖೆ ಮಾಡುವುದನ್ನು ನಿಲ್ಲಿಸುತ್ತೀರಾ? 57 ಸಾವಿರ ಜನರ ಭವಿಷ್ಯವನ್ನು ಕತ್ತಲಿಗೆ ದೂಡುತ್ತೀರಾ? ಸರ್ಕಾರ ಈ ವಿಚಾರದಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಬಿಜೆಪಿ ಐಟಿ ಸೆಲ್ ಹೇಳುವುದಕ್ಕೆಲ್ಲ ಉತ್ತರ ನೀಡುತ್ತಿದ್ದರೆ ನಮಗೆ ಅದೊಂದೆ ಕೆಲಸವಾಗುತ್ತದೆ' ಎಂದು ಉತ್ತರಿಸಿದರು.












Click it and Unblock the Notifications