ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಸರ್ಕಾರ ಸ್ಥಗಿತಗೊಳಿಸುವ 'ಅನುಗ್ರಹ' ಯೋಜನೆ ಪುನರಾರಂಭಿಸಬೇಕು: ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಮೇ 16: ಕುರಿ, ಹಸು, ಎತ್ತುಗಳು ಸೇರಿದಂತೆ ಜಾನುವಾರುಗಳು ಅಸಹಜವಾಗಿ ಸಾವಿಗೀಡಾದಾಗ ಅದರ ಮಾಲೀಕನಿಗೆ ಆರ್ಥಿಕ ಪರಿಹಾರ ನೀಡುವ ಅನುಗ್ರಹ ಯೋಜನೆಯನ್ನು ಬಿಜೆಪಿ ಸರ್ಕಾರ ನಿಲ್ಲಿಸಿದ್ದು, ಕೂಡಲೇ ಅದು ಪುನಃ ಪ್ರಾರಂಭಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ತುಮಕೂರ್ಲಹಳ್ಳಿಯಲ್ಲಿ ಸಿಡಿಲ ಬಡಿತಕ್ಕೆ 150 ಕುರಿಗಳು ಇಂದು ಸಾವನ್ನಪ್ಪಿವೆ. ಪ್ರಾಕೃತಿಕ ವಿಕೋಪದಿಂದ ನಷ್ಟಕ್ಕೀಡಾದ ಕುರಿಗಾಹಿಯ ನೆರವಿಗೆ ಕೂಡಲೇ ರಾಜ್ಯ ಸರ್ಕಾರ ಧಾವಿಸಬೇಕು ಎಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಶಾಲಾ ಪ್ರಾರಂಭೋತ್ಸವಕ್ಕೆ ಎತ್ತಿನಗಾಡಿಯಲ್ಲಿ ಶಾಲೆಗೆ ಬಂದ ಮಕ್ಕಳು ಶಾಲಾ ಪ್ರಾರಂಭೋತ್ಸವಕ್ಕೆ ಎತ್ತಿನಗಾಡಿಯಲ್ಲಿ ಶಾಲೆಗೆ ಬಂದ ಮಕ್ಕಳು

ಇಂಥಾ ಸಂದರ್ಭದಲ್ಲಿ ರೈತರಿಗೆ ನೆರವಾಗಲೆಂದೇ ನಮ್ಮ ಸರ್ಕಾರ ಕುರಿ, ಹಸು, ಎತ್ತುಗಳು ಸೇರಿದಂತೆ ಜಾನುವಾರುಗಳು ಅಸಹಜವಾಗಿ ಸಾವಿಗೀಡಾದಾಗ ಅದರ ಮಾಲೀಕನಿಗೆ ಆರ್ಥಿಕ ಪರಿಹಾರ ನೀಡುವ ಅನುಗ್ರಹ ಯೋಜನೆಯನ್ನು ಜಾರಿಗೆ ತಂದಿತ್ತು. ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈ ಯೋಜನೆಯನ್ನು ನಿಲ್ಲಿಸಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸಿಡಿಲ ಬಡಿತಕ್ಕೆ ಕುರಿಗಳು ಸಾವನ್ನಪ್ಪಿದ ಘಟನೆಯಿಂದ ಕುರಿಗಾಹಿಗೆ ಕನಿಷ್ಠ ಹದಿನೈದು ಲಕ್ಷ ರೂಪಾಯಿಯಷ್ಟು ನಷ್ಟ ಸಂಭವಿಸಿದ್ದು, ಅವುಗಳನ್ನೇ ನಂಬಿ ಬದುಕು ಸಾಗಿಸುತ್ತಿದ್ದ ಆತನ ಭವಿಷ್ಯವೀಗ ಅತಂತ್ರವಾಗಿದೆ. ಸರ್ಕಾರ ಕೂಡಲೇ ಇವರ ನೆರವಿಗೆ ಧಾವಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

BJP government shuld resume to Anugraha scheme: Siddaramaiah

ಭಜರಂಗದಳ ನಾಯಕರ ಬಂಧನಕ್ಕೆ ಒತ್ತಾಯ:

ಮಡಿಕೇರಿಯ ಶಾಲೆಯಲ್ಲಿ ಭಜರಂಗದಳ ಯುವಜನರಿಗೆ ಶಸ್ತ್ರತರಬೇತಿ ನೀಡಿ ಕಾನೂನಿಗೆ ಬಹಿರಂಗ ಸವಾಲು ಹಾಕಿದೆ. ರಾಜ್ಯದಲ್ಲಿ ಗೃಹ ಮತ್ತು ಶಿಕ್ಷಣ ಖಾತೆಗೆ ಸಚಿವರಿದ್ದಾರೆಯೇ? ಸರ್ಕಾರ ಜೀವಂತವಾಗಿದೆಯೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಭಜರಂಗ ದಳ ನಡೆಸಿದ ಶೌರ್ಯ ಪ್ರಶಿಕ್ಷಣ ವರ್ಗದಲ್ಲಿ ಶಾಸಕರಾದ ಎಂ.ಎ. ಅಪ್ಪಚ್ಚು, ಕೆ.ಜಿ.ಬೋಪಯ್ಯ ಮತ್ತು ಸುಜ ಕುಶಾಲಪ್ಪ ಪಾಲ್ಗೊಂಡಿದ್ದಾರೆ. ಇವರ ಬದ್ಧತೆ ಸಂವಿಧಾನಕ್ಕೋ? ಭಜರಂಗ ದಳಕ್ಕೋ? ಶಸ್ತ್ರಾಸ್ತ್ರ ತರಬೇತಿ‌‌ ಸಂಪೂರ್ಣವಾಗಿ ಕಾನೂನು ವಿರೋಧಿ ಚಟುವಟಿಕೆಯಾಗಿದ್ದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಕ್ಷಣ ಭಜರಂಗ ದಳದ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾಜಸ್ಥಾನದಲ್ಲಿ ಎಐಸಿಸಿ ಚಿಂತನಾ ಶಿಬಿರ; ಆರ್ಥಿಕ ವಿಚಾರ ಮಂಡಿಸಿದ ಸಿದ್ದರಾಮಯ್ಯರಾಜಸ್ಥಾನದಲ್ಲಿ ಎಐಸಿಸಿ ಚಿಂತನಾ ಶಿಬಿರ; ಆರ್ಥಿಕ ವಿಚಾರ ಮಂಡಿಸಿದ ಸಿದ್ದರಾಮಯ್ಯ

ಶಾಲೆಯ ಆವರಣದಲ್ಲಿ ಇಂತಹ ಕಾನೂನು ವಿರೋಧಿ ಚಟುವಟಿಕೆಗಳಿಗೆ ಅವಕಾಶ ನೀಡಿರುವ ಶಾಲೆಯ ಆಡಳಿತ ಮಂಡಳಿ ವಿರುದ್ಧ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಕ್ರಮ‌ಕೈಗೊಳ್ಳಬೇಕು.

ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವ ಶ್ರೀರಾಮ ಸೇನೆ ಭಜರಂಗ ದಳ, ಹಿಂದೂ ಜಾಗರಣ ವೇದಿಕೆ ಮೊದಲಾದ ಸಂಘಟನೆಗಳ‌ ಜೊತೆ ತನ್ನ ಸಂಬಂಧ ಏನು ಎಂಬುದನ್ನು ಬಿಜೆಪಿ‌ ಮೊದಲು ಸ್ಪಷ್ಟಪಡಿಸಬೇಕು. ರಾಜ್ಯದಲ್ಲಿ ಶಾಂತಿ ಕದಡಿಸಲು, ಭೀತಿ ಹುಟ್ಟಿಸಲು, ರಾಜ್ಯದ ಬಿಜೆಪಿ ಸರ್ಕಾರ ಭಜರಂಗದಳ,‌ ಶ್ರೀರಾಮಸೇನೆಯಂತಹ ಕೋಮು‌ವಾದಿ ಸಂಘಟನೆಗಳಿಗೆ ವಿಶೇಷ ಅನುಮತಿ ನೀಡಿದೆಯೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

English summary
Siddaramaiah has demanded that the BJP government to resume the Anugraha scheme: Granting financial relief to farmers when cattle, Sheep and oxen are abnormally died.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X