ಬಿಜೆಪಿ ಸರ್ಕಾರದ ತಪ್ಪು ನಿರ್ಧಾರ; ಹಿರಿಯರ ಕಡೆಗಣನೆಯಿಂದ ಹಿನ್ನಡೆ: ಬಿಜೆಪಿ ವಿರುದ್ದ ಎಂ.ಪಿ.ರೇಣುಕಾಚಾರ್ಯ ಮುನಿಸು
ದಾವಣಗೆರೆ, ಮೇ15: 2023 ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಗೆಲ್ಲುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿದ್ದ ರಾಜ್ಯ ಬಿಜೆಪಿ ನಾಯಕರಿಗೆ ಹೀನಾಯ ಸೋಲು ಉಂಟಾಗಿದೆ. ಮೂರು ವರ್ಷಗಳ ಕಾಲ ಅಧಿಕಾರ ನಡೆಸಿದ ಬಿಜೆಪಿಗೆ ಸೋಲಿಕೆ ಕಾರಣ ಏನು ಎನ್ನುವ ಲೆಕ್ಕಾಚಾರ ಶುರುವಾಗಿದ್ದು, ಬಿಜೆಪಿ ಸರ್ಕಾರದ ಕೆಲ ನಿರ್ಧಾರಗಳೇ ಬಿಜೆಪಿ ಸೋಲಿಗೆ ಕಾರಣ ಎಂದು ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ಹೇಳಿದ್ದಾರೆ.
ಈ ಕುರಿತು ಹೊನ್ನಾಳಿಯಲ್ಲಿ ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಆತ್ಮವಲೋಕನ ಮಾಡಿಕೊಳ್ಳ ಬೇಕಾಗಿದ್ದು, ಸೋಲೆ ಗೆಲುವಿನ ಮೆಟ್ಟಿಲು.ರಾಜ್ಯ ಸರ್ಕಾರದ ತಪ್ಪು ನಿರ್ಧಾರಗಳು ಹಾಗೂ ಮೀಸಲಾತಿ ಗೊಂದಲದಿಂದ ದೊಡ್ಡಪೆಟ್ಟು ಬಿದಿದ್ದೆ ಎಂದು ಬಿಜೆಪಿ ಸರ್ಕಾರದ ನಿರ್ಧಾರಗಳಿಗೆ ಬೇಸರ ವ್ಯಕ್ತಪಡಿಸಿದ್ದಾರೆ.

ನಮ್ಮ ಪ್ರಣಾಳಿಕ ಉತ್ತಮವಾಗಿದೆ. ಆದರೆ, ಪ್ರಣಾಳಿಕೆಯನ್ನ ತಡವಾಗಿ ಬಿಡುಗಡೆ ಮಾಡಲಾಯಿತು.ಕಾಂಗ್ರೇಸ್ ನವರು ಎರಡು ತಿಂಗಳು ಮುಂಚೆಯೇ ಪ್ರನಾಳಿಕೆ ಬಿಡುಗಡೆ ಮಾಡಿ, ಗ್ಯಾರಂಟಿಗಳನ್ನು ನೀಡಿದರು.ಇದರಿಂದ ನಮಗೆ ಹಿನ್ನಡೆಯಾಯ್ತು ಜೊತೆಗೆ ಎನ್ ಪಿ ಎಸ್, ಓಪಿಎಸ್ ನೌಕರರಿಂದ ಹಿನ್ನೆಡೆಯಾಗಿದೆ. ಹಿರಿಯ ಮುಖಂಡರಾದ ಯಡಿಯೂರಪ್ಪ, ಈಶ್ವರಪ್ಪ, ಜಗದೀಶ್ ಶೆಟ್ಟರ್ ಅವರನ್ನು ಕಡೆಗಣಿಸಿದ್ದರೆಂದು ತಪ್ಪು ಸಂದೇಶ ರವಾನಿಸಿ ಅದನ್ನು ಮತಗಳಾಗಿ ಪರಿವರ್ತನೆ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ನಡೆಗೆ ಬೇಸರ ವ್ಯಕ್ತಪಡಿಸಿದರು.
ಕಾಂಗ್ರೆಸ್ ನವರು ಹಸಿಸುಳ್ಳು ಹೇಳಿ, ಸುಳ್ಳು ಬರವಸೆ ಕೊಟ್ಟು ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ಯಾವ ರೀತಿ ಸರ್ಕಾರ ನಡೆಸುತ್ತಾರೆ ಕಾದು ನೋಡ ಬೇಕು. ಸೋಲಿನ ಬಗ್ಗೆ ಯಾರನ್ನು ದೂಷಿಸುವುದಿಲ್ಲ, ಅವಳಿ ತಾಲೂಕಿನ ಜನರು 75 ಸಾವಿರ ಮತ ಹಾಕಿದ್ದು ನಾನು ಅವರಿಗೆ ಚಿರ ಋಣಿ. ಕಾರ್ಯಕರ್ತರು ಯಾವುದೇ ಕಾರಣಕ್ಕೂ ಧೃತಿ ಗೆಡುವುದು ಬೇಡ, ಇದನ್ನು ಸವಾಲಾಗಿ ಸ್ವೀಕರಿಸಿ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರೋಣ ಎಂದ ರೇಣುಕಾಚಾರ್ಯ ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದರು.
ಹಿಂಸಾ ಗ್ಯಾರಂಟಿ ಸ್ಕೀಮ್ ಸಹಿಸುವುದಿಲ್ಲ: ನಳಿನ್ ಕುಮಾರ್ ಕಟೀಲ್
ಕಾಂಗ್ರೆಸ್ ಪಕ್ಷವು ಬಹುಮತ ಗಳಿಸಿದ ತಕ್ಷಣ ರಾಜ್ಯದ ವಿವಿಧ ಕಡೆಗಳಲ್ಲಿ "ಹಿಂಸಾ ಗ್ಯಾರಂಟಿ ಸ್ಕೀಮ್" ಅನ್ನು ಜಾರಿಗೆ ತಂದಿರುವುದನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹೊಸಕೋಟೆ ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಹೊಸಕೋಟೆಯಲ್ಲಿ ಒಬ್ಬ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದು ಇತರ ಇಬ್ಬರ ಮೇಲೆ ತೀವ್ರವಾಗಿ ಹಲ್ಲೆ ಮಾಡಲಾಗಿದೆ ಇದು ಅತ್ಯಂತ ಖಂಡನೀಯ ಎಂದು ಅವರು ತಿಳಿಸಿದ್ದಾರೆ.
ಕಾಂಗ್ರೆಸ್ ನಾಯಕರು ಇಂತಹ ಹಿಂಸಾಚಾರದ ಪ್ರವೃತ್ತಿಗೆ ಆಸ್ಪದ ಕೊಡಬಾರದು ಎಂದವರು ಎಚ್ಚರಿಸಿದ್ದಾರೆ. ರಾಜ್ಯದ ವಿವಿಧ ಕಡೆಗಳಲ್ಲಿ ದೇಶದ್ರೋಹಿ ಚಟುವಟಿಕೆಗಳು ಹೆಚ್ಚಾಗಿವೆ ಇದನ್ನು ತಡೆಯಬೇಕು. ಪಾಕಿಸ್ತಾನದ ಧ್ವಜ ಹಾರಿಸುವುದು ದೇಶದ್ರೋಹದ ಚಟುವಟಿಕೆಯಾಗಿದ್ದು ಇದನ್ನು ನಿಯಂತ್ರಿಸಬೇಕು ಯಾವುದೇ ಕಾರಣಕ್ಕೂ ಇಂತಹ ಹಿಂಸಾಚಾರದ ದೇಶದ್ರೋಹಿ ಚಟುವಟಿಕೆಗಳನ್ನು ಸಹಿಸಲು ಸಾಧ್ಯವಿಲ್ಲ ಎಂದವರು ತಿಳಿಸಿದ್ದಾರೆ.
ಕಾಂಗ್ರೆಸ್ ಮುಖಂಡರು ತಮ್ಮೊಳಗಿನ ಭಿನ್ನಮತವನ್ನು ಬದಿಗಿಟ್ಟು ತಾವು ಈಗಾಗಲೇ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸಲು ಮುಂದಾಗಬೇಕು. ಹಿಂಸೆಯನ್ನು ಪ್ರಚೋದಿಸುವವರು ಮತ್ತು ದೇಶದ್ರೋಹಿ ಚಟುವಟಿಕೆಗಳಿಗೆ ಬೆಂಬಲ ನೀಡುವವರನ್ನು ಬಂಧಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಬೇಕೆಂದು ಅವರು ಆಗ್ರಹಿಸಿದ್ದಾರೆ.












Click it and Unblock the Notifications