Get Updates
Get notified of breaking news, exclusive insights, and must-see stories!

ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆ ಬಿಜೆಪಿ ಮಾಡಿಲ್ಲ: ಕಾಂಗ್ರೆಸ್ ಆರೋಪಕ್ಕೆ ಬೊಮ್ಮಾಯಿ‌ ಸ್ಪಷ್ಟನೆ

ಹುಬ್ಬಳ್ಳಿ, ಜೂನ್ 13: ರಾಜ್ಯದಲ್ಲಿ ಏಕಾಏಕಿ ವಿದ್ಯುತ್ ದರ ಏರಿಕೆ ಆಗಿದೆ. ಬಿಜೆಪಿ ಈ ವಿದ್ಯುತ್ ದರ ಏರಿಕೆ ಅನುಷ್ಠಾನ ತಂದಿಲ್ಲ. ವಿದ್ಯುತ್ ದರ ಏರಿಕೆ ನಮ್ಮ ಸರ್ಕಾರ‌ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.

ಮಂಗಳವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ವಿದ್ಯುತ್ ದರ ಏರಿಕೆ ವರದಿಯನ್ನು ನಾವು ಒಪ್ಪಿರಲಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ವಿದ್ಯುತ್ ದರ ಏರಿಕೆಯ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ. ಇದರಿಂದಾಗಿ ದರ ಜಾಸ್ತಿ ಆಗಿದೆ ಎಂದು ರಾಜ್ಯ ಸರ್ಕಾರದ ನಡೆಯ ವಿರುದ್ಧ ಮಾಜಿ‌ ಸಿಎಂ ಬಸವರಾಜ ಬೊಮ್ಮಾಯಿ ಅಸಮಾಧಾನ ಹೊರಹಾಕಿದರು.

BJP Govt Has Not Increased Electricity Tariff, Basavaraj Bommai Clarifies Of Congress Allegation

ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರ ಜವಾಬ್ದಾರಿ ಇಲ್ಲದ ಸರ್ಕಾರ. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದು ತಿಂಗಳು ಹತ್ತಿರ ಬಂದಿದೆ. ರಾಜ್ಯಕ್ಕೆ ನೈಸರ್ಗಿಕ ಆಪತ್ತು ಎದುರಾಗಲಿದೆ. ಮುಂಗಾರು ಮಳೆ ತಡವಾಗಿದ್ದು, ಮೋಡ ಬಿತ್ತನೆ ಕಾರ್ಯ ವಿಳಂಬವಾಗಿದೆ. ಕೂಡ ತಡವಾಗಿ ಆಗುತ್ತಿದೆ. ಮಾನ್ಸೂನ್ ಮಳೆ ಸಕಾಲಕ್ಕೆ ಬಾರದಿದ್ದರೆ ರೈತರಿಗೆ ಬಹಳಷ್ಟು ಕಷ್ಟವಾಗುತ್ತದೆ. ಮತ್ತೊಂದು ಕಡೆ ಭೀಕರ ಚಂಡಮಾರುತದ ಸೂಚನೆ ಸಹ ಬರುತ್ತಿವೆ. ಹೀಗಿದ್ದರೂ ಮುಖ್ಯಮಂತ್ರಿಗಳನ್ನು ಇವುಗಳನ್ನು ನಿಭಾಯಿಸಲು ಯಾವುದೇ ರೀತಿ ಸನ್ನದ್ಧವಾಗಿಲ್ಲ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ರಾಜ್ಯದಲ್ಲಿರುವ ಡ್ಯಾಂಗಳ ನೀರು ಅತ್ಯಂತ ಕೆಳಮಟ್ಟದಲ್ಲಿದೆ. ಆದರೆ ನಾನು ಇಷ್ಟು ಬೇಗ ರಾಜ್ಯದಲ್ಲಿ ಬರಗಾಲ ಬರಲಿದೆ ಎಂದು ಹೇಳುವುದಿಲ್ಲ. ಆದರೆ ರಾಜ್ಯ ಸರ್ಕಾರ ಸಮರ್ಪಕವಾಗಿ ಯೋಜನೆಗಳನ್ನು ಮಾಡಿಕೊಳ್ಳಬೇಕಿದೆ.

ಕಷ್ಟ ಕಾಲದಲ್ಲಿ ಸಹಾಯಕ್ಕೆ ಬಾರದ ಸರ್ಕಾರ ಇದು

ಮುಖ್ಯವಾಗಿ ತಾಲ್ಲೂಕು ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಿ ಅದರಲ್ಲಿ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳನ್ನು ಸೇರಿಸಿ, ಅವರಿಂದ ಸಹಕಾರ ಪಡೆಯಬೇಕು. ಈ ಕೂಡಲೇ 100 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಬೇಕು. NDRF ತಂಡಗಳನ್ನು ಚುರುಕುಗೊಳಸಬೇಕು. ನಗರ ಪ್ರದೇಶಗಳಲ್ಲಿಯೂ ಸಹ ಕುಡಿಯುವ ನೀರಿನ ಸಮಸ್ಯೆಯಿದೆ. ಈ ಸರ್ಕಾರ ಜನರಿಗೆ ಸಹಾಯಕ್ಕೆ ಬಾರದ ಸರ್ಕಾರವಾಗಿದೆ ಎಂದು ಹೇಳಿದರು.

BJP Govt Has Not Increased Electricity Tariff, Basavaraj Bommai Clarifies Of Congress Allegation

ಕಾಂಗ್ರೆಸ್‌ ಗ್ಯಾರಂಟಿಗಳ ಬಗ್ಗೆ ಕಾದು ನೋಡುತ್ತಿದ್ದೇವೆ. ಉಚಿತ ಬಸ್ ಪಾಸ್ ಆರಂಭದ ಶೂರತ್ವವನ್ನು ಸರ್ಕಾರ ತೋರಿಸುತ್ತಿದೆ. ಗ್ಯಾರಂಟಿ ರೂಪದಲ್ಲಿ ತಾಯಿಯಂದಿರಿಗೆ ಉಚಿತ ನೀಡುವ ಸಲುವಾಗಿ ಅವರಿಗೆ ಸಮರ್ಪಕ ಪ್ರಯಾಣ ಇಲ್ಲದಂತೆ ಆಗುತ್ತಿದೆ.

ರಾಜ್ಯದಲ್ಲಿ ಬಸ್ ಗಳ ಸಮಸ್ಯೆ ತಲೆದೂರಿದೆ. ಈಗಾಗಲೇ ನಾವು ಡೀಸೆಲ್‌ ಅನುದಾನ ಬಿಡುಗಡೆ ಮಾಡಿದ್ದೇವೆ. ಅದನ್ನು ಮುಂದುವರಿಕೆ ಮಾಡಬೇಕು. ಗ್ಯಾರಂಟಿಗಳಿಗೆ ಹಣಕಾಸಿನ ಹೊಂದಾಣಿಕೆ ಬಗ್ಗೆ ಸರ್ಕಾರ‌ ಸ್ಪಷ್ಟವಾಗಿ ಹೇಳುತ್ತಿಲ್ಲ. ಹಣಕಾಸಿನ ವಿಚಾರದಲ್ಲಿ ಜನರನ್ನು ಕತ್ತಲಲ್ಲಿ ಇಡಲು ಸರ್ಕಾರ ಮುಂದಾಗಿದೆ. ಗ್ಯಾರಂಟಿ ವಿಚಾರದಲ್ಲಿ ಹಣಕಾಸಿನ ಬಗ್ಗೆ ಮಾಹಿತಿ ಪಡೆಯುವುದು ಪ್ರತಿಯೊಂದು ಕನ್ನಡಿಗನ ಹಕ್ಕು. ಇದು ಒಂದು ಕೈಯಲ್ಲಿ ತೆಗೆದುಕೊಂಡು ಮತ್ತೊಂದು ಕೈಯಲ್ಲಿ ಕೂಡುವಂತಾಗಿದೆ ಎಂದರು.

ಅಧಿವೇಶನ ಹೊತ್ತಿಗೆ ವಿಪಕ್ಷ ನಾಯಕರ ಆಯ್ಕೆ

ನಾನು ವಿಪಕ್ಷ ಸ್ಥಾನದ ಆಕಾಂಕ್ಷಿಯ ಪ್ರಶ್ನೆಯೇ ಇಲ್ಲ. ಈ ಸ್ಥಿತಿಯಲ್ಲಿ ವಿಳಂಬ ಆಗುತ್ತಿಲ್ಲ. ಅಧಿವೇಶನ ಕರೆದ ಕೂಡಲೇ ವಿರೋಧ ಪಕ್ಷದ ನಾಯಕರ ಆಯ್ಕೆ ಮಾಡಲಾಗುತ್ತದೆ. ಇದು ಪ್ರತಿ ಬಾರಿ ನಡೆಯುವ ಸಂಪ್ರದಾಯ ಇದಾಗಿದೆ ಎಂದು ವಿಪಕ್ಷ ನಾಯಕರ ಆಯ್ಕೆ ವಿಳಂಬ ಕುರಿತ ಸುದ್ದಿಗಾರ ಪ್ರಶ್ನೆಗೆ ಅವರು ಉತ್ತರಿಸಿದರು.

ಚುನಾವಣೆಯಲ್ಲಿ ಬಿಜೆಪಿ ಸೋಲು: ಜನಾದೇಶ ಒಪ್ಪಿದ್ದೇವೆ

ಕರ್ನಾಟಕದಲ್ಲಿ ಬಿಜೆಪಿ ಸೋಲಿನ ಕುರಿತು ಹೈಕಮಾಂಡ್ ನಾಯಕರು ಬೇಸರ ಮಾಡಿಕೊಳ್ಳುವ ಪ್ರಶ್ನೆಯಿಲ್ಲ. ಜನ ಕೊಟ್ಟ ತೀರ್ಪು ನಾವು ಒಪ್ಪಿಕೊಂಡಿದ್ದೇವೆ. ನಾನೇ ಸೋಲಿನ ನೈತಿಕ ಹೊಣೆ ಹೊತ್ತಿದ್ದೇನೆ. ಲೋಕಸಭೆಯಲ್ಲಿ ಜೆಡಿಎಸ್ ಜೊತೆ ಕುರಿತು ಚರ್ಚೆಗಳು ನಡೆದಿಲ್ಲ. ಎಲ್ಲರ ಸೋಲಿಗೆ ನಾನೇ ಹೊಣೆ ಅಂದ ಮೇಲೆ ಶಾಸಕರ ಸೋಲಿನ ಆರೋಪದ ಬಗ್ಗೆ ಉತ್ತರಿಸುವ ಪ್ರಶ್ನೆಯಿಲ್ಲ.

ಇದೇ ವೇಳೆ ಜಗದೀಶ್ ಶೆಟ್ಟರ್ ಮರಳಿ ಬಿಜೆಪಿ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ, ಅವರೇ ಕಾಂಗ್ರೆಸ್ ಗೆ ಹೋಗಿದ್ದರಿಂದ ಸಂತೃಪ್ತಿ ಇದೆ ಅಂದಿದ್ದಾರೆ. ಹಾಗಿದ್ದಾಗ ಮತ್ತೆ ಬಿಜೆಪಿಗೆ ವಾಪಾಸ್ಸಾಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಪ್ರಹ್ಲಾದ್ ಜೋಶಿ ಗೆ ಟಿಕೆಟ್ ಕೊಡಬಾರದೆಂಬ ಅಭಿಯಾನ ಪ್ರತಿಬಾರಿ ಚುನಾವಣಾ ಪೂರ್ವದಲ್ಲಿ ಇಂತಹದ್ದು ನಡೆಯುತ್ತದೆ ಎಂದು ಕೆಲವು ಕುತೂಹಲಗಳಿಗೆ ಅವರು ತೆರೆ ಎಳೆದರು.

ವಿಧಾನಪರಿಷತ್ ಮೂರು ಸ್ಥಾನಕ್ಕೆ ನಾವು ಸ್ಪರ್ಧಿಸುತ್ತೇವೆ. ಮೂರು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲ್ಲೋದು ಖಚಿತ. ಆದರೂ ಪ್ರತಿಪಕ್ಷವಾಗಿ ಸ್ಪರ್ಧಿಸುತ್ತೇವೆ ಎಂದು ಬೊಮ್ಮಾಯಿ ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+