ಗಣರಾಜ್ಯೋತ್ಸವ ಪರೇಡ್‌ನಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ: ಇದು ಕನ್ನಡಿಗರಿಗೆ ಅವಮಾನವೆಂದ ಸಿದ್ದರಾಮಯ್ಯ
ಬೆಂಗಳೂರು, ಜ. 08: ಕಳೆದ 13 ವರ್ಷಗಳಿಂದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದ ರಾಜ್ಯದ ಸ್ತಬ್ಧಚಿತ್ರಗಳ ಪ್ರದರ್ಶನಕ್ಕೆ ಈ ಬಾರಿ ಅವಕಾಶ ನಿರಾಕರಿಸಲಾಗಿದೆ. ರಾಜ್ಯದ ಸಂಸ್ಕೃತಿ ಹಾಗೂ ಪರಂಪರೆಯನ್ನು ಪ್ರದರ್ಶಿಸುವ ಅವಕಾಶ ರಾಜ್ಯಕ್ಕಿಲ್ಲ.
ಗಣರಾಜ್ಯೋತ್ಸವ ಪರೇಡ್‌ನಲ್ಲಿ ಅವಕಾಶ ನಿರಾಕರಿಸಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದು ಕೇಂದ್ರ ಬಿಜೆಪಿ ಸರ್ಕಾರ ಕನ್ನಡ, ಕನ್ನಡಿಗ ಮತ್ತು ಕರ್ನಾಟಕಕ್ಕೆ ಮಾಡಿರುವ ಅವಮಾನ ಎಂದು ಕಿಡಿಕಾರಿದ್ದಾರೆ.
ಈ ವರ್ಷದ ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಸ್ಥಬ್ದಚಿತ್ರಕ್ಕೆ @BJP4India ಸರ್ಕಾರ ಅವಕಾಶ ನಿರಾಕರಿಸಿರುವುದು ಕನ್ನಡ, ಕನ್ನಡಿಗ ಮತ್ತು ಕರ್ನಾಟಕಕ್ಕೆ ಮಾಡಿರುವ ಅವಮಾನ.
— Siddaramaiah (@siddaramaiah) January 7, 2023
ಕನ್ನಡಿಗರೆಲ್ಲರೂ ಇದನ್ನು ಒಕ್ಕೊರಲಿನಿಂದ ಖಂಡಿಸಬೇಕು. 1/4
ಸತತ 13 ಗಣರಾಜ್ಯೋತ್ಸವ ಪರೇಡ್‌ಗಳಲ್ಲಿ ಕರ್ನಾಟಕವು ತನ್ನ ಸಂಸ್ಕೃತಿ ಹಾಗೂ ಪರಂಪರೆಯನ್ನು ಪ್ರದರ್ಶಿಸಿತ್ತು. ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಸಿರಿಧಾನ್ಯಗಳ ವೈವಿಧ್ಯತೆಯನ್ನು ಪ್ರದರ್ಶಿಸುವ ರಾಜ್ಯದ ಪ್ರಸ್ತಾಪವನ್ನು ಕೇಂದ್ರವು ತಿರಸ್ಕರಿಸಿದೆ ಎಂದು ರಾಜ್ಯ ಸರ್ಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

"ಈ ವರ್ಷದ ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಸ್ಥಬ್ದಚಿತ್ರಕ್ಕೆ ಅವಕಾಶ ನಿರಾಕರಿಸಿರುವುದು ಕನ್ನಡ, ಕನ್ನಡಿಗ ಮತ್ತು ಕರ್ನಾಟಕಕ್ಕೆ ಮಾಡಿರುವ ಅವಮಾನ.
ಕನ್ನಡಿಗರೆಲ್ಲರೂ ಇದನ್ನು ಒಕ್ಕೊರಲಿನಿಂದ ಖಂಡಿಸಬೇಕು" ಎಂದು ಸಿದ್ದರಾಮಯ್ಯ ಸರಣಿ ಟ್ವಿಟ್‌ಗಳನ್ನು ಮಾಡಿದ್ದಾರೆ.
"ಸತತ ಹದಿಮೂರು ವರ್ಷಗಳ ಕಾಲ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ಥಬ್ದ ಚಿತ್ರಗಳು ನಮ್ಮ ಇತಿಹಾಸ, ಸಂಸ್ಕೃತಿ ಮತ್ತು ಪ್ರಕೃತಿಯ ಹಿರಿಮೆಗಳನ್ನು ಪ್ರದರ್ಶಿಸಿ ಇಡೀ ದೇಶದ ಶ್ಲಾಘನೆಗೆ ಪಾತ್ರವಾಗಿದೆ. ಇದೇ ಮೊದಲ ಬಾರಿ ಬಿಜೆಪಿ ಈ ಗೌರವಕ್ಕೆ ಧಕ್ಕೆ ತಂದಿದೆ" ಎಂದು ಆರೋಪಿಸಿದ್ದಾರೆ.
"ಕೇಂದ್ರ ಸರ್ಕಾರದ ಎದುರು ಮಾಂಡಲೀಕರಂತೆ ವರ್ತಿಸುತ್ತಿರುವ ಕರ್ನಾಟಕದ ಬಿಜೆಪಿ ನಾಯಕರು ರಾಜ್ಯದ ಘನತೆ-ಗೌರವಗಳನ್ನು ದೆಹಲಿ ನಾಯಕರಿಗೆ ಅಡ ಇಟ್ಟಿರುವುದು ದುರದೃಷ್ಟಕರ" ಎಂದು ರಾಜ್ಯದ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
"ಮಾತು ಮಾತಿಗೆ ಡಬಲ್ ಎಂಜಿನ್ ಸರ್ಕಾರ ಎಂದು ರಾಜ್ಯದ ಬಿಜೆಪಿ ನಾಯಕರು ಎದೆ ಬಡಿದುಕೊಳ್ಳುತ್ತಿದ್ದಾರೆ. ರಾಜ್ಯದ ಹಕ್ಕು ಮತ್ತು ಗೌರವದ ಪ್ರಶ್ನೆ ಎದುರಾದಾಗ ಮಾತ್ರ ಕರ್ನಾಟಕದ ಎಂಜಿನ್ ಗುಜರಿ ಆಗುತ್ತದೆ" ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ.
"ಈ ಬಾರಿ ರಾಜ್ಯವು ಸಿರಿಧಾನ್ಯಗಳ ವೈವಿಧ್ಯತೆಯನ್ನು ಪ್ರದರ್ಶಿಸುವ ಟ್ಯಾಬ್ಲೋ ಪ್ರಸ್ತಾಪವನ್ನು ಕಳುಹಿಸಿತ್ತು. ತಜ್ಞ ಸಮಿತಿಯ ಮೊದಲ ಕೆಲವು ಆರಂಭಿಕ ಸುತ್ತಿನ ಆಯ್ಕೆ ಪ್ರಕ್ರಿಯೆಯಲ್ಲಿ, ರಾಜ್ಯದ ವಿಷಯಾಧಾರಿತ ವಿನ್ಯಾಸ ಮತ್ತು ಸಂಗೀತವು ಮೆಚ್ಚಿತ್ತು. ಕೊನೆಯ ಸುತ್ತಿನಲ್ಲಿ, ನಾವು ಸೋತಿದ್ದೇವೆ' ಎಂದು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ತಿಳಿಸಿದೆ.












Click it and Unblock the Notifications