ಬಿಜೆಪಿಯವರು RSS ನ ವಿವಿಧ ಟ್ರಸ್ಟ್‌ಗಳಿಗೆ ಎಕರೆಗಟ್ಟಲೆ ಭೂಮಿ ಮಂಜೂರು ಮಾಡಿದ್ದಾರೆ: ಸಿದ್ದರಾಮಯ್ಯ

ಬೆಂಗಳೂರು, ಆಗಸ್ಟ್‌ 29: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಅಕ್ರಮದ ಆರೋಪ ಹಾಗೂ ಪ್ರಾಸಿಕ್ಯೂಷನ್ ಬೆನ್ನಲ್ಲೇ ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೆಐಎಡಿಬಿ ಜಮೀನು ವಿವಾದ ಸುತ್ತುಕೊಂಡಿದೆ. ಈ ಸಂಬಂಧ ವಿಪಕ್ಷಗಳು ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು, ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯವರಿಗೆ ತಿರುಗೇಟು ನೀಡಿದ್ದಾರೆ.

ರಾಹುಲ್ ಖರ್ಗೆಯವರ ಟ್ರಸ್ಟ್ ಗೆ ಸಿಎ ನಿವೇಶನ ಹಂಚಿಕೆ ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಿ, ಟ್ರಸ್ಟ್ ಗೆ ಕಾನೂನಾತ್ಮಕವಾಗಿ ನಿವೇಶನ ನೀಡಲಾಗಿದೆ. ಕಾನೂನು ಪ್ರಕಾರ ನಿವೇಶನ ನೀಡಿರುವುದರಿಂದ ವಿವಾದ ಸೃಷ್ಟಿಸುವ ಅಗತ್ಯವಿಲ್ಲ. ಬಿಜೆಪಿಯವರ ಕಾಲದಲ್ಲಿ ಚಾಣಕ್ಯ ವಿವಿಗೆ ಹಾಗೂ ಆರ್ ಎಸ್ ಎಸ್ ನ ವಿವಿಧ ಟ್ರಸ್ಟ್ಗಳಿಗೆ ಎಕರೆಗಟ್ಟಲೆ ಭೂಮಿಯನ್ನು ಮಂಜೂರು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

BJP Has Allotted Acres Of Land To Various Trusts Of RSS Says Siddaramaiah

ಇಂದು(ಆಗಸ್ಟ್‌ 29) 16ನೇ ಕೇಂದ್ರ ಹಣಕಾಸಿನ ಆಯೋಗದವರೊಂದಿಗೆ ಸಭೆ ನಡೆಯಲಿದ್ದು, 15 ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವರೆಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

15ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯಗಳ ಬಗ್ಗೆ ವಿವರಿಸಲಾಗುವುದು. ಕರ್ನಾಟಕ, ಹೆಚ್ಚು ನಿರ್ಲಕ್ಷ್ಯಕ್ಕೆ ಒಳಗಾದ ರಾಜ್ಯ ಎಂದು ಮನದಟ್ಟು ಮಾಡಿ, ತೆರಿಗೆ ಹಂಚಿಕೆಯನ್ನು ಶೇ. 41 ರಿಂದ ಶೇ.50 ಕ್ಕೆ ಹೆಚ್ಚಿಸುವಂತೆ ಒತ್ತಾಯಿಸಲಾಗುವುದು. ಸೆಸ್ ಮತ್ತು ಸರ್ಚಾಜ್ ಗಳಲ್ಲಿ ರಾಜ್ಯಗಳಿಗೂ ಪಾಲು ನೀಡಬೇಕು. ಸೆಸ್ ಮತ್ತು ಸರ್ಚಾಜುಗಳು ಹೆಚ್ಚುತ್ತಿದ್ದು, ರಾಜ್ಯಕ್ಕೆ ತೆರಿಗೆ ಹಂಚಿಕೆ ಕಡಿಮೆಯಾಗುತ್ತಿರುವುದನ್ನು ಹಣಕಾಸು ಆಯೋಗದ ಅಧ್ಯಕ್ಷರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಸಿದ್ದರಾಮಯ್ಯ ಅವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+