ಕಾಂಗ್ರೆಸ್‌ನಲ್ಲಿ ಬೇಲ್‌ ಪಡೆದು ಹೊರಗೆ ಓಡಾಡುತ್ತಿರುವ ಬೇಲಾಸುರರ ಪಟ್ಟಿ!

ಬೆಂಗಳೂರು, ಅಕ್ಟೋಬರ್‌ 28: ಕಾಂಗ್ರೆಸ್‌ನಲ್ಲಿ ಬೇಲ್‌ ಪಡೆದು ಹೊರಗೆ ಓಡಾಡುತ್ತಿರುವ ಬೇಲಾಸುರರ ಪಟ್ಟಿಯನ್ನ ಕರ್ನಾಟಕ ಬಿಜೆಪಿ ಮಾಡಿದೆ. ಕಾಂಗ್ರೆಸ್‌ ನ ಆರು ಜನ ನಾಯಕರ ಹೆಸರುಗಳ ಪಟ್ಟಿಯನ್ನ ಬಿಡುಗಡೆ ಮಾಡುವ ಮೂಲಕ ಕಾಂಗ್ರೆಸ್‌ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. ಇಷ್ಟು ಜನರಲ್ಲಿ ಜೈಲು ಸೇರುವ ಮೊದಲಿಗರು ಯಾರೆಂದು ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್‌ ಅವರೇ ಹೇಳಲಿ ಎಂದು ಬಿಜೆಪಿ ವ್ಯಂಗ್ಯವಾಡಿದೆ.

  • ಸೋನಿಯಾ ಗಾಂಧಿ
  • ರಾಹುಲ್‌ ಗಾಂಧಿ
  • ಮಲ್ಲಿಕಾರ್ಜುನ್‌ ಖರ್ಗೆ
  • ಡಿ. ಕೆ. ಶಿವಕುಮಾರ್
  • ವಿನಯ್‌ ಕುಲಕರ್ಣಿ
  • ಬಿ.ನಾಗೇಂದ್ರ

30 ಕ್ಕೆ ದೆಹಲಿಗೆ ಅಮೃತ ಕಳಸ: ಗೋವಿಂದ ಕಾರಜೋಳ

ಹುತಾತ್ಮರ ಗೌರವಾರ್ಥ ಕರ್ತವ್ಯಪಥದಲ್ಲಿ ನಿರ್ಮಾಣವಾಗುವ ಅಮೃತ ಉದ್ಯಾನ ಸ್ಥಳಕ್ಕೆ ನಮ್ಮ ರಾಜ್ಯದಿಂದ ಸಂಗ್ರಹಿಸಿದ ಅಮೃತ ಕಳಸವನ್ನು ದೆಹಲಿಗೆ ಇದೇ 30ಕ್ಕೆ ತಲುಪಿಸಲು ವ್ಯವಸ್ಥೆ ಮಾಡಿದ್ದೇವೆ ಎಂದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ತಿಳಿಸಿದರು.

BJP Has Released The List Of Congress Bailees

ಈ 'ನನ್ನ ಮಣ್ಣು ನನ್ನ ದೇಶ' ಅಭಿಯಾನಕ್ಕೆ ಪ್ರತಿ ಮನೆ, ಧಾರ್ಮಿಕ ಕೇಂದ್ರಗಳು, ವೀರ ಯೋಧರ ಮನೆ, ಸ್ವಾತಂತ್ರ್ಯ ಹೋರಾಟಗಾರರ ಮನೆ, ಮಹಾಪುರುಷರ ಸ್ಮಾರಕ ಸ್ಥಳ, ಸಾಧು ಸಂತರ ಮಠಗಳಿಂದ ಪುಣ್ಯ ಮಣ್ಣನ್ನು ಸಂಗ್ರಹಿಸಲಾಗಿದೆ. ಏಕ್ ಭಾರತ್, ಶ್ರೇಷ್ಠ್ ಭಾರತ್ ಕಲ್ಪನೆಯೊಂದಿಗೆ ಅಮೃತ್ ವನದಲ್ಲಿ ಮಣ್ಣನ್ನು ವಿಲೀನಗೊಳಿಸಲಾಗುವುದು ಎಂದು ತಿಳಿಸಿದರು.

ದೇಶವು ಸ್ವಾತಂತ್ರ್ಯ ಪಡೆದು 75 ವರ್ಷಗಳಾಗಿವೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಆದರಣೀಯ ಪ್ರಧಾನಿ ನರೇಂದ್ರ ಮೋದಿಜಿ ಅವರ ಮುಂದಾಲೋಚನೆಯೊಂದಿಗೆ 'ನನ್ನ ಮಣ್ಣು ನನ್ನ ದೇಶ' ಅಭಿಯಾನವನ್ನು ಸೆಪ್ಟೆಂಬರ್ 3ರಿಂದ ಪ್ರಾರಂಭಿಸಲಾಗಿದೆ. ಇದೇ 31ರವರೆಗೆ ಅಭಿಯಾನ ನಡೆಯುತ್ತಿದೆ. ದೆಹಲಿ ಕರ್ತವ್ಯಪಥದ ಕಾರ್ಯಕ್ರಮಕ್ಕೆ ಇದನ್ನು ಸಮರ್ಪಿಸಲಾಗುತ್ತಿದೆ ಎಂದು ವಿವರಿಸಿದರು.

ದೇಶದ 7500 ಪುಣ್ಯ ಕ್ಷೇತ್ರಗಳಿಂದ ಮಣ್ಣು ಸಂಗ್ರಹಿಸಲಾಗಿದೆ. ಕರ್ನಾಟಕದ 6 ಸಾವಿರಕ್ಕೂ ಹೆಚ್ಚು ಪಂಚಾಯಿತಿಗಳಿಂದ ಮಣ್ಣು ಸಂಗ್ರಹಿಸಲಾಗಿದೆ. ದೇಶದ 2 ಲಕ್ಷಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳಿಂದ ಮಣ್ಣು ಸಂಗ್ರಹ ಕಾರ್ಯ ನಡೆದಿದೆ ಎಂದು ತಿಳಿಸಿದರು.

ದೆಹಲಿಯಲ್ಲಿ ಇದೇ 31ರಂದು ಒಂದು ಲಕ್ಷಕ್ಕೂ ಹೆಚ್ಚು ಯುವಕರು ಸೇರಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಿದ್ದಾರೆ. ರಾಜ್ಯದ 580 ಯುವಕರು, ನೆಹರೂ ಯುವಕ ಕೇಂದ್ರದಿಂದ 1500 ಯುವಕರು ಸೇರಿ ಒಂದೇ ರೈಲಿನಲ್ಲಿ ದೆಹಲಿಗೆ ತೆರಳುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ರಾಜ್ಯ ಕಾರ್ಯದರ್ಶಿ ಜಗದೀಶ ಹಿರೇಮನಿ ಅವರು ಮಾತನಾಡಿ, 2 ತಿಂಗಳಿನಿಂದ ಪ್ರತಿ ಗ್ರಾಮದ ಪ್ರತಿ ಮನೆಯಿಂದ ಮಣ್ಣು ಸಂಗ್ರಹಿಸಲಾಗಿದೆ. ಗ್ರಾಮಗಳಲ್ಲಿ ಅಮೃತ ವನ ನಿರ್ಮಿಸಲು ಪ್ರಧಾನಿಯವರು ಸೂಚಿಸಿದ್ದು, 1250 ಅಮೃತ ವನಗಳನ್ನು ರಾಜ್ಯದಲ್ಲಿ ನಿರ್ಮಿಸಲಾಗಿದೆ ಎಂದು ತಿಳಿಸಿದರು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+