ಬಿಜೆಪಿಯವರು ಸ್ಯಾಂಟ್ರೋ ರವಿಗೆ ಕೇಸರಿ ಶಾಲು ಹಾಕಿ ಅದರ ಪಾವಿತ್ರ್ಯತೆ ಹಾಳು ಮಾಡಿದ್ದಾರೆ: ಕುಮಾರಸ್ವಾಮಿ
ಕಲಬುರಗಿ, ಜನವರಿ 11: ಕೆಲ ದಿನಗಳಿಂದ ಸುದ್ದಿಯಲ್ಲಿರುವ ಸ್ಯಾಂಟ್ರೊ ರವಿ ಬಿಜೆಪಿ ಸಕ್ರೀಯ ಕಾರ್ಯಕರ್ತ ಎಂದು ಪೊಲೀಸ್ ಠಾಣೆಯಲ್ಲಿ ಮುಚ್ಚಳಿಕೆ ಬರೆದು ಕೊಟ್ಟಿದ್ದಾನೆ. ನೈತಿಕತೆ ಬಗ್ಗೆ ಯಾವ ಮುಖ ಇಟ್ಟುಕೊಂಡು ಜನರಿಗೆ ಭೋಧನೆ ಮಾಡುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.
ಸೇಡಂ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಪೊಲೀಸ್ ಪ್ರಕರಣ ಒಂದರಲ್ಲಿ ಸ್ಯಾಂಟ್ರೊ ರವಿ ವಿರುದ್ಧ ಜಗದೀಶ್ ಎಂಬುವವರು ಬೆಂಗಳೂರು ನಗರದ ರಾಜರಾಜೇಶ್ವರಿ ನಗರದ ಪೊಲೀಸ್ ಠಾಣೆಯಲ್ಲಿ ವರ್ಗಾವಣೆ ವಂಚನೆ ವಿಷಯಕ್ಕೆ ದೂರು ದಾಖಲಿಸಿದರು. ಅದಕ್ಕೆ ಪ್ರತಿಯಾಗಿ ಮುಚ್ಚಳಿಕೆ ಬರೆದುಕೊಟ್ಟಿರುವ ಸ್ಯಾಂಟ್ರೊ ರವಿ, ತಾನು ಬಿಜೆಪಿ ಸಕ್ರಿಯ ಕಾರ್ಯಕರ್ತ. ನನಗೆ ಆ ಪಕ್ಷದ ಎಲ್ಲ ನಾಯಕರು ಗೊತ್ತು. ಅನೇಕ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಿಸಿದ್ದೇನೆ ಎಂದು ತಿಳಿಸಿದ್ದಾನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.
ಇದೇ ವೇಳೆ ಅವರು ಸ್ಯಾಂಟ್ರೊ ರವಿ ಪೊಲೀಸರಿಗೆ ಬರೆದುಕೊಟ್ಟರುವ ಮುಚ್ಚಳಿಕೆಯನ್ನು ಪೊಲೀಸರ ಮುಂದೆ ಓದಿದ ಕುಮಾರಸ್ವಾಮಿ, ಇದು ಏನನ್ನು ಸೂಚಿಸುತ್ತದೆ, ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಈ ಬಗ್ಗೆ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದ ಅವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆಗೆ ಹಾಜರಾದ ಈತ ಇಂತಹ ಮುಚ್ಚಳಿಕೆ ಬರೆದುಕೊಟ್ಟಿರುವುದಲ್ಲಿ 3-4 ವರ್ಷದಿಂದ ಬಿಜೆಪಿ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ನಮ್ಮ ಪಕ್ಷದ ಶಾಸಕರು, ಸಚಿವರ ಜೊತೆ ನನಗೆ ಒಡನಾಟ ಇದೆ. ಹಾಗಾಗಿ ಹಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದೇನೆ. ಪೊಲೀಸರ ಮುಂದೆ ಹೇಳಿಕೆ ಕೊಟ್ಟಿದ್ದಾನೆ. ಅಷ್ಟೇ ಅಲ್ಲ ಆ ಮುಚ್ಚಳಿಕೆಯಲ್ಲಿ ವರ್ಗಾವಣೆ ಮಾಡಿಸಿದ ಅಧಿಕಾರಿಗಳ ಪಟ್ಟಿ ಬರೆದಿದ್ದಾನೆ. ಇವರಿಗೆ ನಾಚಿಕೆ ಆಗುವುದಿಲ್ಲವೇ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಇವರು ಪವಿತ್ರ ಕೇಸರಿ ಬಟ್ಟೆ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಸ್ಯಾಂಟ್ರೋ ರವಿ, ಸೈಲೆಂಟ್ ಸುನಿಲ್, ಫೈಟರ್ ರವಿ, ಅಂಥವರ ಹೆಗಲ ಮೇಲೆ ಕೇಸರಿ ಹಾಕಿದ್ದಾರೆ.
ಪವಿತ್ರ ಕೇಸರಿ ಬಟ್ಟೆ ಹಾಕಿ ಅದರ ಪಾವಿತ್ರ್ಯತೆಯನ್ನು ಬಿಜೆಪಿ ಅವರು ಹಾಳುಮಾಡಿದ್ದಾರೆ. ಇವರು ದೇಶಕ್ಕೆ ಉಪದೇಶ ಮಾಡುತ್ತಾರೆ ನಾಚಿಕೆಯಾಗಬೇಕು ಎಂದು ವಾಗ್ದಾಳಿ ನಡೆಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications