DV Sadananda Gowda: ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡಗೆ ಹೈಕಮಾಂಡ್‌ ಬುಲಾವ್‌! ಕಾರಣವೇನು?

ಬೆಂಗಳೂರು, ಅಕ್ಟೋಬರ್‌ 21: 2024 ರ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್‌ ಗೆ ಸೋಲಿನ ರುಚಿ ತೋರಿಸಲು ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಮಾಡಿಕೊಂಡಿದ್ದು, ಕಮಲ-ದಳ ನಾಯಕರಲ್ಲೇ ಮೈತ್ರಿ ಗೆ ವಿರೋಧಿಸಿ ಬಹಿರಂಗವಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದರಾದ ಡಿ ವಿ ಸದಾನಂದಗೌಡರು ಅಸಮಾಧಾನ ಹೊರಹಾಕಿದ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್‌ ಬುಲಾವ್‌ ನೀಡಿದೆ.

ಹೌದು, ಅಕ್ಟೋಬರ್‌ 25 ರಂದು ದೆಹಲಿ ಬಂದು ಭೇಟಿ ಮಾಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ದೆಹಲಿಗೆ ತೆರಳುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಡಿ ವಿ ಸದಾನಂದಗೌಡ ಅವರು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ.

BJP High Command Call To MP DV Sadanada Gowda

ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಬಿಜೆಪಿ ಸೋಲು ಕಂಡಿಒದ್ದು, ಲೋಕಸಭಾ ಚುನಾವಣೆಯಲ್ಲೂ ಹೆಚ್ಚು ಸ್ಥಾನವನ್ನು ಗೆಲ್ಲುವ ನಿಟ್ಟಿನಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ ಮೇರೆಗೆ ರಾಜ್ಯ ಕಾಂಗ್ರೆಸ್‌ ನಾಯಕರು ಭರ್ಜರಿಯಾಗಿ ತಂತ್ರಗಾರಿಕೆಯನ್ನ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಠಕ್ಕರ್‌ ನೀಡಲು ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರ ಮಾಡಿಕೊಂಡಿದ್ದು, ಜೆಡಿಎಸ್ ಜೊತೆಗಿನ ಮೈತ್ರಿ ಬಗ್ಗೆ ಅಸಮಾಧಾನ ಹೊರ ಹಾಕಿದ್ದ ಡಿವಿ ಸದಾನಂದ ಗೌಡರು, ಹೈಕಮಾಂಡ್ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಬಹಿರಂಗವಾಗಿಯೇ ಬೇಸರ ಹೊರ ಹಾಕಿದ್ದರು.

BJP High Command Call To MP DV Sadanada Gowda

ಈಗಾಗಲೇ ಜೆಡಿಎಸ್‌ ಜೊತೆಗಿನ ಮೈತ್ರಿಯಿಂದಾಗಿ ಹಲವು ನಾಯಕರು ಕಾಂಗ್ರೆಸ್‌ ಸೇರ್ಪಡೆಯಾಗಿದ್ದು, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಡಿ ವಿ ಸದಾನಂದಗೌಡ ಅವರು ಕಾಂಗ್ರೆಸ್‌ ಪಕ್ಷವನ್ನು ಸೇರ್ತಾರಾ ಎನ್ನುವ ಚರ್ಚೆ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು, ಈ ಚರ್ಚೆಯ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್‌ ಡಿ ವಿ ಸದಾನಂದಗೌಡ ಅವರ ಅಸಮಾಧಾನವನ್ನ ಶಮನಗೊಳಿಸುವ ನಿಟ್ಟಿನಲ್ಲಿ ದೆಹಲಿಗೆ ಬರುವಂತೆ ಬುಲಾವ್‌ ನೀಡಿದೆ.

ಇನ್ನೂ ಈ ಬಾರೀ ಬಿಜೆಪಿಯಲ್ಲಿ 12 ಜನ ಸಂಸದರಿಗೆ ಈ ಬಾರೀ ಟಿಕೆಟ್‌ ಕೈತಪ್ಪಲಿದೆ ಎಂಬ ವರದಿಯಾಗಿದ್ದು, ಆ 12 ಜನ ಸಂಸದರ ಪೈಕಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದರಾದ ಡಿ ವಿ ಸದಾನಂದಗೌಡ ಅವರಿಗೆ ಈ ಬಾರೀ ಟಿಕೆಟ್‌ ಕೈ ತಪ್ಪಲಿದೆ ಎನ್ನಲಾಗಿದೆ. ಇನ್ನೂಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಆಕ್ಟಿವ್ ಆಗಿರೋ ಸದಾನಂದ ಗೌಡರು ಬಿಜೆಪಿಯ ಪ್ರತಿಭಟನೆಗಳಲ್ಲಿ ಭಾಗಿಯಾಗುತ್ತಿದ್ದಾರೆ. ಅಲ್ಲದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ನಡೆಯುತ್ತಿರುವ ಸಾಲು ಸಾಲು ಪ್ರತಿಭಟನೆಯನ್ನು ಸದನಾಂದ ಗೌಡರು ಭಾಗಿಯಾಗಿದ್ದಾರೆ.

ಮೈತ್ರಿ ಕುರಿತು ಡಿ ವಿ ಸದಾನಂದಗೌಡರು ಹೇಳಿದ್ದೇನು?

ಹೌದು, 2024 ರ ಲೋಕಸಭಾ ಚುನಾವಣೆ ಹಿನ್ನೆಲೆ ಕರ್ನಾಟಕದ ಆಡಳಿತರೂಢ ಕಾಂಗ್ರೆಸ್‌ ಸೋಲಿನ ರುಚಿ ತೋರಿಸಲು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಜೆಡಿಎಸ್‌ ಪಕ್ಷದ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಮ್ಮ ಕರ್ನಾಟಕದ ಯಾವುದೇ ಬಿಜೆಪಿ ನಾಯಕರ ಜೊತೆಗೂ ವರಿಷ್ಠರು ಚರ್ಚೆ ಮಾಡಿಲ್ಲ. ನಮ್ಮನ್ನು ಹೊರಗಿಟ್ಟೇ ಅವರೇ ಜೆಡಿಎಸ್‌ ಜೊತೆಗಿನ ಮೈತ್ರಿ ಬಗ್ಗೆ ತೀರ್ಮಾನ ಮಾಡಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಸಂಸದರಾದ ಸದಾನಂದಗೌಡ ಅವರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+