BJP Candidates List :‌ ಬಿಜೆಪಿಯಲ್ಲಿ ಟಿಕೆಟ್ ಫೈಟ್- ಮೂರು ಕ್ಷೇತ್ರದಲ್ಲಿ ಅಭ್ಯರ್ಥಿ ಫೈನಲ್ ಮಾಡಿದ ಬಿಜೆಪಿ ಹೈಕಮಾಂಡ್?

ಬೆಂಗಳೂರು, ಮಾರ್ಚ್‌ 21: ಲೋಕಮರದಲ್ಲಿ ದಿನಗಣನೆ ಆರಂಭವಾಗಿದ್ದು, ಚುನಾವಣಾ ಕಾವು ದಿನದಿಂದಿ ದಿನಕ್ಕೆ ಹೆಚ್ಚಾಗುತ್ತಿದೆ. ಗೆಲ್ಲುವ ಕುದುರೆಯ ಹುಡುಕಾಟವನ್ನ ನಡೆಸುತ್ತಿರುವ ಬಿಜೆಪಿ ಹೈಕಮಾಂಡ್‌ ಎರಡನೇ ಪಟ್ಟಿ ಕರ್ನಾಟಕದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನ ಘೋಷಿಸಿದ್ದು, ಉಳಿದ ಕ್ಷೇತ್ರವೇ ಬಿಜೆಪಿಗೆ ದೊಡ್ಡ ತಲೆನೋವಾಗಿದೆ.

ಹೌದು, ಲೋಕಸಭಾ ಚುಣಾವಣೆ ಹಿನ್ನೆಲೆ ಆಡಳಿತರೂಢ ಕಾಂಗ್ರೆಸ್‌ ಗೆ ಸೋಲಿನ ರುಚಿ ತೋರಿಸಲು ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ದೋಸ್ತಿ ಮಾಡಿಕೊಂಡಿದೆ. ಕರ್ನಾಟಕದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಬಿಜೆಪಿ ಹೈಕಮಾಂಡ್‌ ಘೋಷಣೆ ಮಾಡಿದೆ. ಹಲವು ಹಾಲಿ ಸಂಸದರಿಗೆ ಬಿಜೆಪಿ ಕೈ ತಪ್ಪಿದ ಹಿನ್ನಲೆ ಬಿಜೆಪಿಯಲ್ಲಿ ಬಂಡಾಯದ ಬಿಸಿ ಹೆಚ್ಚಾಗಿದೆ.

BJP High Command Finalize Lok Sabha Candidates 3 out of 5 Remaining Constituencies In Karnataka

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಫೈಕಿ 20 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನ ಬಿಜೆಪಿ ಘೋಷಿಸಿದೆ. ಬಿಜೆಪಿ ಹೈಕಮಾಂಡ್ ಜೆಡಿಎಸ್‌ಗೆ ಮಂಡ್ಯ, ಕೋಲಾರ ಹಾಗೂ ಹಾಸನ ಕ್ಷೇತ್ರವನ್ನ‌ ಬಿಟ್ಟು ಕೊಡಲು ನಿರ್ಧರಿಸಿದೆ. ಆದರೆ, ಇನ್ನೂ ಬಾಕಿ ಉಳಿದ ಐದು ಲೋಕಸಭಾ ಕ್ಷೇತ್ರಗಳಾದ ಚಿತ್ರದುರ್ಗ, ಬೆಳಗಾವಿ, ಉತ್ತರ ಕನ್ನಡ, ಚಿಕ್ಕಬಳ್ಳಾಪುರ ಹಾಗೂ ರಾಯಚೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆಯೇ ಬಿಜೆಪಿಯ ವರಿಷ್ಠರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಬಾಕಿ ಉಳಿದ ಐದು ಕ್ಷೇತ್ರಗಳಲ್ಲಿ 3 ಕ್ಷೇತ್ರದ ಟಿಕೆಟ್‌ ಫೈನಲ್!‌

ಬಾಕಿ ಉಳಿದ ಐದು ಲೋಕಸಭಾ ಕ್ಷೇತ್ರಗಳಾದ ಚಿತ್ರದುರ್ಗ, ಬೆಳಗಾವಿ, ಉತ್ತರ ಕನ್ನಡ, ಚಿಕ್ಕಬಳ್ಳಾಪುರ ಹಾಗೂ ರಾಯಚೂರು ಅಭ್ಯರ್ಥಿಗಳ ಆಯ್ಕೆ ಕುರಿತು ತೀವ್ರ ಫೈಪೋಟಿ ಏರ್ಪಟಿದೆ. ಈ ಐದು ಕ್ಷೇತ್ರಗಳ ಫೈಕಿ ಬಿಜೆಪಿ ಹೈಕಮಾಂಡ್‌ ಅಳೆದು ತೂಗಿ ಮೂರು ಕ್ಷೇತ್ರದ ಅಭ್ಯರ್ಥಿಯನ್ನ ಅಂತಿಮಗೊಳಿಸಿದೆ. ಕುಂದನಗರ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಂಗಳಾ ಅಂಗಡಿ, ಮಹಾಂತೇಶ್ ಕವಟಗಿಮಠ, ರಮೇಶ್ ಕತ್ತಿ ನಡುವೆ ತೀವ್ರ ಫೈಪೋಟಿ ಏರ್ಪಟ್ಟಿದ್ದು, ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಗೆ ಅವರಿಗೆ ಬಿಜೆಪಿ ಹೈಕಮಾಂಡ್‌ ಮಣೆ ಹಾಕಿದೆ.

ಬೆಳಗಾವಿಯಲ್ಲಿ ಟಿಕೆಟ್‌ ಗಾಗಿ ತೀವ್ರ ಫೈಪೋಟಿ ಏರ್ಪಟ್ಟಿದ್ದು, ಮತ್ತೆ ಕುಂದನಗರಿ ಬೆಳಗಾವಿಯಲ್ಲಿ ಕಮಲಕೋಟೆಯನ್ನ ಭದ್ರಗೊಳಿಸುವ ನಿಟ್ಟಿನಲ್ಲಿ ಸಾಕಷ್ಟು ಲೆಕ್ಕಾಚಾರ ಚರ್ಚೆಯ ಮೇರೆಗೆ ಬೆಳಗಾವಿಯಿಂದ ಮಾಜಿ ಮುಖ್ಯಮಂತ್ರಿ ಹಾಗೂ ಲಿಂಗಾಯತ ಹಿರಿಯ ನಾಯಕ ಜಗದೀಶ್‌ ಶೆಟ್ಟರ್‌ ಅವರಿಗೆ ಬಿಜೆಪಿ ಹೈಕಮಾಂಡ್‌ ಟಿಕೆಟ್‌ ನೀಡಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಹಿಂದುತ್ವದ ಭದ್ರಕೋಟೆಯಾದ ಉತ್ತರ ಕನ್ನಡ ಕ್ಷೇತ್ರದಲ್ಲಿ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಅವರಿಗೆ ಈ ಬಾರಿ ಟಿಕೆಟ್‌ ಸಿಗುವುದು ಅನುಮಾನ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟ್‌ ಗಾಗಿ ಹಾಲಿ ಸಂಸದ ಅನಂತಕುಮಾರ್ ಹೆಗಡೆ, ವಿಶ್ಚೇಶ್ವರ ಹೆಗಡೆ ಕಾಗೇರಿ ಹಾಗೂ ಗೋಪಾಲ್ ಫೈಪೋಟಿ ನಡೆಸಿದ್ದು, ಬಿಜೆಪಿ ಹೈಕಮಾಂಡ್‌ ಉತ್ತರ ಕನ್ನಡ ಕ್ಷೇತ್ರದಿಂದ ವಿಶ್ಚೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್‌ ನೀಡಿದೆ ಎಂದು ತಿಳಿದು ಬಂದಿದೆ.

ಇತ್ತ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಡಾ. ಕೆ. ಸುಧಾಕರ್ ಮತ್ತು ಅಲೋಕ್ ವಿಶ್ವನಾಥ್ ನಡುವೆ ಫೈಟ್ ಏರ್ಪಟ್ಟಿದೆ. ಈ ಇಬ್ಬರು ನಾಯಕರಿಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನ ಪ್ರತಿಷ್ಠೆಯಾಗಿದ್ದು, ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರ ಮೂಲಕ ಈ ಇಬ್ಬರು ನಾಯಕರು ಟಿಕೆಟ್‌ ತೀವ್ರ ಲಾಬಿ ನಡೆಸಿದ್ದು, ಬಿಜೆಪಿ ಹೈಕಮಾಂಡ್‌ ಮಾಜಿ ಸಚಿವರಾದ ಡಾ.ಕೆ ಸುಧಾಕರ್‌ ಅವರಿಗೆ ಟಿಕೆಟ್‌ ನೀಡಿದೆ ಎಂದು ತಿಳಿದು ಬಂದಿದೆ.

ಬಿಜೆಪಿಯಲ್ಲಿ ಯಾರ್ಯಾರಿಗೆ ಟಿಕೆಟ್?

ಚಿಕ್ಕೋಡಿ ಲೋಕಸಭಾ ಕ್ಷೇತ್ರ-ಅಣ್ಣಾ ಸಾಹೇಬ್ ಜೊಲ್ಲೆ

ಬಾಗಲಕೋಟೆ ಲೋಕಸಭಾ ಕ್ಷೇತ್ರ-ಪಿ.ಸಿ.ಗದ್ದಿಗೌಡರ್

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ-ಕೋಟ ಶ್ರೀನಿವಾಸ ಪೂಜಾರಿ

ಹಾವೇರಿ ಲೋಕಸಭಾ ಕ್ಷೇತ್ರ-ಬಸವರಾಜ ಬೊಮ್ಮಾಯಿ

ಮೈಸೂರು ಕ್ಷೇತ್ರ-ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್

ಬೆಂಗಳೂರು ಗ್ರಾಮಾಂತರ ಕ್ಷೇತ್ರ-ಡಾ.ಸಿ.ಎನ್.ಮಂಜುನಾಥ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ-ಶೋಭಾ ಕರಂದ್ಲಾಜೆ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ-ತೇಜಸ್ವಿ ಸೂರ್ಯ

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ-ಪಿ.ಸಿ.ಮೋಹನ್

ತುಮಕೂರು ಲೋಕಸಭಾ ಕ್ಷೇತ್ರ-ವಿ.ಸೋಮಣ್ಣ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ-ಕ್ಯಾಪ್ಟನ್ ಬ್ರಿಜೇಶ್ ಚೌಟಾ

ಚಾಮರಾಜನಗರ ಲೋಕಸಭಾ ಕ್ಷೇತ್ರ-ಎಸ್.ಬಾಲರಾಜು

ಧಾರವಾಡ ಲೋಕಸಭಾ ಕ್ಷೇತ್ರ-ಪ್ರಹ್ಲಾದ್ ಜೋಶಿ

ಕೊಪ್ಪಳ ಲೋಕಸಭಾ ಕ್ಷೇತ್ರ-ಡಾ.ಬಸವರಾಜ ತ್ಯಾವಟೂರು

ದಾವಣಗೆರೆ ಲೋಕಸಭಾ ಕ್ಷೇತ್ರ-ಗಾಯತ್ರಿ ಸಿದ್ದೇಶ್ವರ್

ಬಳ್ಳಾರಿ ಲೋಕಸಭಾ ಕ್ಷೇತ್ರ-ಬಿ.ಶ್ರೀರಾಮುಲು

ಕಲಬುರಗಿ ಲೋಕಸಭಾ ಕ್ಷೇತ್ರ-ಡಾ.ಉಮೇಶ್ ಜಾಧವ್

ಬೀದರ್ ಲೋಕಸಭಾ ಕ್ಷೇತ್ರ-ಭಗವಂತ ಖೂಬಾ

ವಿಜಯಪುರ ಲೋಕಸಭಾ ಕ್ಷೇತ್ರ-ರಮೇಶ್ ಜಿಗಜಿಣಗಿ

ಶಿವಮೊಗ್ಗ ಲೋಕಸಭಾ ಕ್ಷೇತ್ರ-ಬಿ.ವೈ.ರಾಘವೇಂದ್ರ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+