ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಡಿಯೂರಪ್ಪನವರನ್ನು ಪದಚ್ಯುತಿಗೊಳಿಸಲು ಇದಕ್ಕಿಂತ ಉತ್ತಮ ಅವಕಾಶ ಇನ್ನೊಂದಿದೆಯೇ?

|
Google Oneindia Kannada News

ಬೆಂಗಳೂರು, ಡಿ 24: ಕೆಐಎಡಿಬಿ ಜಮೀನಿನ ಡಿನೋಟಿಫಿಕೇಷನ್ ಆರೋಪದ ತನಿಖೆಯ ರದ್ದತಿಗೆ ರಾಜ್ಯ ಹೈಕೋರ್ಟ್ ನಿರಾಕರಿಸಿರುವ ವಿಚಾರವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ.

"ಈ ಹಿಂದೆ ಬಹಳಷ್ಟು ಬಾರಿ ಹೇಳಿದ್ದೆ. ನನಗಿರುವ ಮಾಹಿತಿಯ ಪ್ರಕಾರ ಯಡಿಯೂರಪ್ಪನವರನ್ನು ಸಿಎಂ ಹುದ್ದೆಯಿಂದ ಕೆಳಗಿಳಿಸಲಿದ್ದಾರೆ ಎಂದು. ಈಗ ಬಿಜೆಪಿ ವರಿಷ್ಠರಿಗೆ ಇದಕ್ಕಿಂತ ಉತ್ತಮ ಅವಕಾಶ ಇನ್ನೊಂದಿದೆಯೇ"ಎಂದು ಪ್ರಶ್ನಿಸಿದ್ದಾರೆ. ಈ ವಿಚಾರದಲ್ಲಿ ಸಿದ್ದರಾಮಯ್ಯ ಸಾಲುಸಾಲು ಟ್ವೀಟ್ ಮಾಡಿದ್ದಾರೆ. ಅದು ಹೀಗಿದೆ:

ಸಿದ್ದು ಹೇಳಿಕೆ ಕೊಡಗು ಕಾಂಗ್ರೆಸ್‍ಗೆ ಮಾರಕವಾಗುತ್ತಾ?ಸಿದ್ದು ಹೇಳಿಕೆ ಕೊಡಗು ಕಾಂಗ್ರೆಸ್‍ಗೆ ಮಾರಕವಾಗುತ್ತಾ?

"ಕೆಐಎಡಿಬಿ ಜಮೀನಿನ ಡಿನೋಟಿಫಿಕೇಷನ್ ಆರೋಪದ ತನಿಖೆಯ ರದ್ದತಿಗೆ ರಾಜ್ಯ ಹೈಕೋರ್ಟ್ ನಿರಾಕರಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ @BSYBJP ಅವರು ತಕ್ಷಣ ರಾಜೀನಾಮೆ ನೀಡಿ ಮುಕ್ತ ಮತ್ತು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕು".

ಬ್ಯಾಕ್‌ಲಾಗ್ ಬಡ್ತಿ: ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಖಡಕ್ ಸೂಚನೆ!ಬ್ಯಾಕ್‌ಲಾಗ್ ಬಡ್ತಿ: ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಖಡಕ್ ಸೂಚನೆ!

@BSYBJP ಅವರು ಕಾನೂನುಬಾಹಿರವಾಗಿ ಜಮೀನನ್ನು ಡಿನೋಟಿಫೈ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಅವರ ವಿರುದ್ಧದ ಆರೋಪಗಳು Cognizable offence ಆಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಡಿಸೆಂಬರ್ 22ರ ಆದೇಶದಲ್ಲಿ ಹೈಕೋರ್ಟ್ ಹೇಳಿರುವುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ.

ಲೋಕಾಯುಕ್ತ ಪೊಲೀಸರು

ಲೋಕಾಯುಕ್ತ ಪೊಲೀಸರು

ಕೆಐಎಡಿಬಿ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದ ಪ್ರಕರಣದಲ್ಲಿ ಮುಖ್ಯಮಂತ್ರಿ @BSYBJP ಪಾತ್ರದ ಬಗ್ಗೆ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು 2015ರಲ್ಲಿ ಎಫ್ ಐ ಆರ್ ಸಲ್ಲಿಸಿದ್ದು, ಲೋಕಾಯುಕ್ತ ನ್ಯಾಯಾಲಯ ವಿಚಾರಣೆ ಕೂಡಾ ನಡೆಸಿತ್ತು. ಇದರಲ್ಲಿ ಯಡಿಯೂರಪ್ಪ ಅವರನ್ನು ಎರಡನೇ ಆರೋಪಿಯಾಗಿ ಮಾಡಿದ್ದರು.

ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೆ ತಮ್ಮ ವಿರುದ್ಧ ದೂರು ದಾಖಲಿಸಿರುವುದು ಕಾನೂನುಬಾಹಿರ ಕ್ರಮವಾಗಿರುವ ಕಾರಣ ಪ್ರಕರಣವನ್ನು ರದ್ದುಪಡಿಸಬೇಕೆಂಬ @BSYBJP ಅವರ ಕೋರಿಕೆಯನ್ನು ಹೈಕೋರ್ಟ್ ತಿರಸ್ಕರಿಸಿರುವುದರಿಂದ ಬಿ.ಎಸ್.ಯಡಿಯೂರಪ್ಪನವರಿಗೆ ರಾಜೀನಾಮೆ ಹೊರತು ಬೇರೆ ದಾರಿ ಇಲ್ಲದಂತಾಗಿದೆ - ಸಿದ್ದರಾಮಯ್ಯನವರ ಟ್ವೀಟ್.

ಅಧಿಕಾರದ ಬಲದಿಂದ ತನಿಖೆಯ ಹಾದಿ ತಪ್ಪಿಸುವ ಸಾಧ್ಯತೆ

ಅಧಿಕಾರದ ಬಲದಿಂದ ತನಿಖೆಯ ಹಾದಿ ತಪ್ಪಿಸುವ ಸಾಧ್ಯತೆ

ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿದರೆ ತನ್ನ ಅಧಿಕಾರದ ಬಲದಿಂದ ತನಿಖೆಯ ಹಾದಿ ತಪ್ಪಿಸುವ ಸಾಧ್ಯತೆಗಳಿವೆ. ತಾವು ಮುಖ್ಯಮಂತ್ರಿಯಾದ ಕೂಡಲೇ ಈ ಪ್ರಕರಣದ ತನಿಖೆಗೆ ಮಧ್ಯಂತರ ತಡೆಯಾಜ್ಞೆ ಪಡೆದಿರುವುದೇ ಇದಕ್ಕೆ ಸಾಕ್ಷಿ.

ಡಿನೋಟಿಫಿಕೇಷನ್ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ನ್ಯಾಯಾಲಯದ ಕಣ್ಗಾವಲಿನಲ್ಲಿ ನಡೆಸಬೇಕೆಂದು ಹೈಕೋರ್ಟ್ ನ್ಯಾಯಮೂರ್ತಿಗಳು ತಮ್ಮ ಆದೇಶದಲ್ಲಿ ತಿಳಿಸಿರುವುದು @BSYBJP ಅವರು ತನಿಖೆ ಮೇಲೆ ಪ್ರಭಾವ ಬೀರಬಹುದೆನ್ನುವ ಗುಮಾನಿಯೂ ಕಾರಣ - ಸಿದ್ದರಾಮಯ್ಯನವರ ಟ್ವೀಟ್.

ನಾ ಕಾವೂಂಗಾ, ನಾ ಕಾನೇ ದೂಂಗಾ

ನಾ ಕಾವೂಂಗಾ, ನಾ ಕಾನೇ ದೂಂಗಾ

@BSYBJP ವಿರುದ್ಧದ ಆರೋಪ ಗಂಭೀರ ಸ್ವರೂಪದ್ದು, ಇದು ಸಾಮಾನ್ಯ ಡಿನೋಟೀಫಿಕೇಷನ್ ಪ್ರಕರಣ ಅಲ್ಲ. ಕೈಗಾರಿಕಾ ಸ್ಥಾಪನೆಗಾಗಿ ಸ್ವಾಧೀನ ಪಡಿಸಿಕೊಂಡಿದ್ದ ಜಮೀನನ್ನು ಉದ್ಯಮಿಗಳಿಗೆ ಹಂಚಿಕೆ ಮಾಡಿದ ನಂತರ ಡಿನೋಟೀಫಿಕೇಷನ್ ಮಾಡಲಾಗಿದೆ. ಪ್ರಕರಣದ ಗಂಭೀರತೆಯನ್ನು ನ್ಯಾಯಮೂರ್ತಿಗಳು ಕೂಡಾ ತಮ್ಮ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

'ನಾ ಕಾವೂಂಗಾ, ನಾ ಕಾನೇ ದೂಂಗಾ' ಎಂದು ಘೋಷಿಸಿದ್ದ ಪ್ರಧಾನಿ @narendramodi ಅವರಿಗೆ ಅವರದ್ದೇ ಪಕ್ಷದ ಮುಖ್ಯಮಂತ್ರಿಯವರ ಮೇಲಿನ ಈ ಗಂಭೀರ ಆರೋಪ ಕಣ್ಣಿಗೆ ಕಾಣುತ್ತಿಲ್ಲವೇ" ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ಟ್ವೀಟ್

ಸಿದ್ದರಾಮಯ್ಯ ಟ್ವೀಟ್

"ದೇಶಪಾಂಡೆ ಮತ್ತು ಯಡಿಯೂರಪ್ಪ ವಿರುದ್ಧದ ಆರೋಪಗಳು ಭಿನ್ನವಾದವು. ಅವರ ವಿರುದ್ಧ ಅಕ್ರಮ ಡಿನೋಟಿಫೈ ಆರೋಪ ಇರಲಿಲ್ಲ. ಉದ್ದಿಮೆಗಳಿಗೆ ಜಮೀನು ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಖಾಸಗಿ ದೂರಿನಲ್ಲಿ ಆರೋಪಿಸಲಾಗಿತ್ತು. ಅದನ್ನು ಹೈಕೋರ್ಟ್ ಮಾನ್ಯ ಮಾಡಿಲ್ಲ"ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

English summary
BJP High Command Has Golden Chance Now To Remove Yediyurappa As CM: Siddaramaiah Tweet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X