ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರಗೆ ಬಿಜೆಪಿ ಹೈಕಮಾಂಡ್ ಕೊಟ್ಟ ಭರವಸೆ ಏನು?

|
Google Oneindia Kannada News

ಬೆಂಗಳೂರು, ಆ. 02: ಬಿ. ಎಸ್. ಯಡಿಯೂರಪ್ಪ ಬಳಿಕ ರಾಜ್ಯದಲ್ಲಿ ಬಿಜೆಪಿಯನ್ನು ಮುನ್ನಡೆಸುವವರು ಯಾರು? ಎಂಬ ಪ್ರಶ್ನೆಗೆ ಬಿಜೆಪಿ ಹೈಕಮಾಂಡ್ ಉತ್ತರವನ್ನು ಕಂಡುಕೊಂಡಿದೆ. ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಮಾಡುವ ಮೂಲಕ ಮಾಜಿ ಸಿಎಂ ಯಡಿಯೂರಪ್ಪ ಬಳಿಕ ಬಿಜೆಪಿ ಭವಿಷ್ಯವೇನು ಎಂಬ ಆ ಪಕ್ಷದ ಕಾರ್ಯಕರ್ತರ ಪ್ರಶ್ನೆಗೆ ಉತ್ತರ ಕೊಟ್ಟಿದೆ.

ಮುಂದಿನ ಮುಖ್ಯಮಂತ್ರಿ ಆಯ್ಕೆಯಲ್ಲಿ ನನ್ನ ಪಾತ್ರವಿಲ್ಲ ಎಂದಿದ್ದ ಬಿ.ಎಸ್. ಯಡಿಯೂರಪ್ಪ ಅವರು, ಕೊನೆಗೆ ತಾವು ಸೂಚಿಸಿದವರನ್ನೇ ಮುಖ್ಯಮಂತ್ರಿ ಮಾಡಿದ್ದಾರೆ ಎಂಬ ಮಾಹಿತಿ ಬಿಜೆಪಿ ವಲಯದಿಂದಲೇ ಬಂದಿದೆ. ಕೊನೆಯ ಕ್ಷಣದಲ್ಲಿ ಪಟ್ಟು ಹಿಡಿದು ಬಸವರಾಜ ಬೊಮ್ಮಾಯಿ ಅವರು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗುವಂತೆ ಯಡಿಯೂರಪ್ಪ ಮಾಡಿದ್ದಾರೆ ಎನ್ನಲಾಗುತ್ತಿದೆ. ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಮಾಡಿರುವ ಬಿಜೆಪಿ ಹೈಕಮಾಂಡ್ ಇದೀಗ ಸಂಪುಟ ವಿಸ್ತರಣೆ ಕಸರತ್ತು ನಡೆಸಿದೆ. ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ತೆರಳಿದ್ದಾರೆ.

ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟ ಸೇರಲಿದ್ದಾರೆ ಎಂಬ ಮಾತುಗಳು ಬಿಜೆಪಿ ವಲಯದಿಂದ ಕೇಳಿ ಬರುತ್ತಿವೆ. ಜೊತೆಗೆ ವಿಜಯೇಂದ್ರ ಅವರು ಉಪ ಮುಖ್ಯಮಂತ್ರಿ ಯಾಗಲಿದ್ದಾರೆ ಎನ್ನಲಾಗುತ್ತಿದೆ.

ಜೊತೆಗೆ ಬಿಜೆಪಿ ಹೈಕಮಾಂಡ್ ಕೂಡ ಬಿ.ವೈ. ವಿಜಯೇಂದ್ರ ಅವರಿಗೆ ಮಹತ್ವದ ಭರವಸೆ ಕೊಟ್ಟಿದೆ ಎಂಬ ಮಾಹಿತಿಯಿದೆ. ಅಷ್ಟಕ್ಕೂ ಬಿ.ವೈ. ವಿಜಯೇಂದ್ರ ಅವರು ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಡಿಸಿಎಂ ಆಗುತ್ತಾರಾ? ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ಕೊಟ್ಟಿರುವ ಭರಸವೆ ಏನು? ಮುಂದಿದೆ ಮಾಹಿತಿ.

ಪುತ್ರನ ರಾಜಕೀಯ ಭವಿಷ್ಯದ ಬಗ್ಗೆ ಮಾಜಿ ಸಿಎಂ ಚರ್ಚೆ

ಪುತ್ರನ ರಾಜಕೀಯ ಭವಿಷ್ಯದ ಬಗ್ಗೆ ಮಾಜಿ ಸಿಎಂ ಚರ್ಚೆ

ಬಿ.ಎಸ್. ಯಡಿಯೂರಪ್ಪ ಅವರು ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿ ಮಾಡಿದಾಗಲೇ ವಿಜಯೇಂದ್ರ ಅವರ ರಾಜಕೀಯ ಭವಿಷ್ಯದ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚೆ ಮಾಡಿದ್ದಾರೆ ಎಂಬ ಮಾಹಿತಿಯಿದೆ. ಜೊತೆಗೆ ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಕೊಟ್ಟಲ್ಲಿ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ಮಂತ್ರಿಸ್ಥಾನ ಕೊಡುವ ಭರವಸೆಯನ್ನು ಹೈಕಮಾಂಡ್ ಕೊಟ್ಟಿದೆ ಎಂಬ ಚರ್ಚೆಗಳು ಬಿಜೆಪಿಯಲ್ಲಿ ನಡೆದಿದ್ದವು.

ಜೊತೆಗೆ ರಾಜೀನಾಮೆ ಕೊಡುವ ಮೊದಲು ಮಾಜಿ ಸಿಎಂ ಯಡಿಯೂರಪ್ಪ ಅವರು ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಇದೇ ಸಂದರ್ಭದಲ್ಲಿ ವಿಜಯೇಂದ್ರ ಅವರ ಕುರಿತು ಚರ್ಚೆ ನಡೆಸಿದ್ದರು ಎನ್ನಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆದಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ವಿಜಯೇಂದ್ರ ಅವರ ಕುರಿತು ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಮಹತ್ವದ ಭರವಸೆ ಕೊಟ್ಟಿದ್ದಾರೆ ಎನ್ನಲಾಗಿದೆ. ಅವರು ಕೊಟ್ಟಿರುವ ಭರವಸೆ ಏನು?

ಡಿಸಿಎಂ ಆಗುತ್ತಾರಾ ಬಿ.ವೈ. ವಿಜಯೇಂದ್ರ?

ಡಿಸಿಎಂ ಆಗುತ್ತಾರಾ ಬಿ.ವೈ. ವಿಜಯೇಂದ್ರ?

ಬಿ.ವೈ. ವಿಜಯೇಂದ್ರ ಅವರು ಸಿಎಂ ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಉಪ ಮುಖ್ಯಮಂತ್ರಿಯಾಗುತ್ತಾರೆ ಎಂಬ ಮಾತುಗಳು ಜೋರಾಗಿ ಕೇಳಿ ಬರುತ್ತಿವೆ. ಆದರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಯಡಿಯೂರಪ್ಪ ಅವರಿಗೆ ಕೊಟ್ಟಿರುವ ಭರವಸೆಯೆ ಬೇರೆಯದ್ದಾಗಿದೆ ಎನ್ನಲಾಗಿದೆ. "ಯಾವುದೇ ಕಾರಣಕ್ಕೂ ಪಕ್ಷ ನಿಮ್ಮನ್ನು ಕೈ ಬಿಡುವುದಿಲ್ಲ. ಪಕ್ಷದಲ್ಲಿ ನೀವು ಬೆಳೆಯಲು ಅವಕಾಶಗಳಿಗೆ. ಆದರೆ ಸಚಿವ ಸಂಪುಟದಲ್ಲಿ ಸೇರಿಸಿಕೊಳ್ಳುವ ಕುರಿತು ಯಾವುದೇ ಭರವಸೆಯನ್ನು ನಾವು ಕೊಡುವುದಿಲ್ಲ. ಸದ್ಯಕ್ಕ ಪಕ್ಷ ಆ ಬಗ್ಗೆ ತೀರ್ಮಾನ ಮಾಡಿಲ್ಲ. ಹೀಗಾಗಿ ಪಕ್ಷ ಸಂಘಟನೆ ಮಾಡಿ. ಮುಂದಿನ ದಿನಗಳಲ್ಲಿ ಪಕ್ಷ ನಿಮಗೆ ಸೂಕ್ತ ಸ್ಥಾನಮಾನ ಕೊಡುತ್ತದೆ" ಎಂಬ ಭರವಸೆಯನ್ನು ಹೈಕಮಾಂಡ್ ಕೊಟ್ಟಿದೆ ಎಂಬ ಮಾಹಿತಿಯಿದೆ.


ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟಕ್ಕೆ ಬಿ.ವೈ. ವಿಜಯೇಂದ್ರರನ್ನು ಸೇರಿಸಲು ಬಿಜೆಪಿ ಹೈಕಮಾಂಡ್ ಒಪ್ಪಿಗೆ ಕೊಟ್ಟಿಲ್ಲ. ಆದರಿಂದ ವಿಜಯೇಂದ್ರ ಡಿಸಿಎಂ ಆಗುವುದಿಲ್ಲ. ಜೊತೆಗೆ ವಿಜಯೇಂದ್ರರನ್ನು ಸಂಪುಟಕ್ಕೆ ಸೇರಿಸಿಕೊಂಡಲ್ಲಿ ಬಿಜೆಪಿಯಲ್ಲಿ ಮತ್ತಷ್ಟು ಗೊಂದಲಗಳಾಗುತ್ತವೆ ಎನ್ನಲಾಗಿದೆ.

ಬಿಜೆಪಿ ವರಿಷ್ಠರು ಕೊಟ್ಟ ಭರವಸೆ ಏನು?

ಬಿಜೆಪಿ ವರಿಷ್ಠರು ಕೊಟ್ಟ ಭರವಸೆ ಏನು?

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಮಾಜಿ ಸಿಎಂ ಯಡಿಯೂರಪ್ಪರಿಗೆ ಭರವಸೆ ಕೊಟ್ಟಿದ್ದಾರೆ. ಆದರೆ ಇದೇ ಭರವಸೆಯು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರಿಂದ ವಿಜಯೇಂದ್ರ ಅವರಿಗೆ ಸಿಕ್ಕಿಲ್ಲ ಎಂಬ ಮಾಹಿತಿಯಿದೆ. ಹೀಗಾಗಿ ಪಕ್ಷ ಸಂಘಟನೆ ಮಾಡುವುದು ವಿಜಯೇಂದ್ರ ಅವರ ಮುಂದಿರುವ ಆಯ್ಕೆ ಎನ್ನಲಾಗುತ್ತಿದೆ.

ಪಕ್ಷದಲ್ಲಿ ಸಮುದಾಯದ ನಾಯಕರಾಗಿ ಬೆಳೆಯಲು ಅವಕಾಶವಿದೆ. ಹೀಗಾಗಿ ಮೊದಲು ಪಕ್ಷ ಸಂಘಟನೆ ಮಾಡಿ ಎಂಬ ಸೂಚನೆಯನ್ನು ಹೈಕಮಾಂಡ್ ಕೊಟ್ಟಿದೆ ಎನ್ನಲಾಗುತ್ತಿದೆ. ಹೀಗಾಗಿ ಬಿ.ವೈ. ವಿಜಯೇಂದ್ರ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟ ಸೇರುವುದಿಲ್ಲ ಎಂಬ ಮಾಹಿತಿಯಿದೆ.

ಕುಟುಂಬ ರಾಜಕಾರಣಕ್ಕೆ ಆಸ್ಪದವಿಲ್ಲ!

ಕುಟುಂಬ ರಾಜಕಾರಣಕ್ಕೆ ಆಸ್ಪದವಿಲ್ಲ!

ಜೊತೆಗೆ ಬಿ.ವೈ. ವಿಜಯೇಂದ್ರ ಅವರನ್ನು ಮಂತ್ರಿಯನ್ನಾಗಿ ಮಾಡಿದಲ್ಲಿ ಅದು ಕುಟುಂಬ ರಾಜಕಾರಣಕ್ಕೆ ಹೈಕಮಾಂಡ್ ಬೆಂಬಲ ಕೊಟ್ಟಂತಾಗುತ್ತದೆ. ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ಅವಕಶವಿಲ್ಲ. ಹೀಗಾಗಿ ಸ್ವಂತ ಬಲದ ಮೇಲೆ ಬೆಳೆಯಲು ಪಕ್ಷ ಅವಕಾಶ ಮಾಡಿಕೊಡುತ್ತದೆ ಎಂದು ಬಿಜೆಪಿ ಹೈಕಮಾಂಡ್ ಭರವಸೆ ಕೊಟ್ಟಿದೆ ಎಂಬ ಮಾಹಿತಿಯಿದೆ

ಜೊತೆಗೆ ಈಗ ಸಚಿವ ಸಂಪುಟ ಸೇರಿದರೂ ಉಪ ಚುನಾವಣೆ ಎದುರಿಸಬೇಕು. ಅಥವಾ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಬೇಕು. ಹಾನಗಲ್ ಹಾಗೂ ಸಿಂಧಗಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಅವುಗಳಲ್ಲಿ ಯಾವುದಾರೂ ಒಂದು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿ ಗೆಲವು ಸಾಧಿಸಬೇಕಾಗುತ್ತದೆ. ಆದರೆ ಅದು ಅಧಿಕಾರಕ್ಕಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದಂತಾಗುತ್ತದೆ. ಹೀಗಾಗಿ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಕ್ಕಿಂತ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧೆ ಮಾಡುವಂತೆ ಪುತ್ರ ವಿಜಯೇಂದ್ರ ಅವರಿಗೆ ಮಾಜಿ ಸಿಎಂ ಯಡಿಯೂರಪ್ಪ ಅವರು ಸಲಹೆ ಕೊಟ್ಟಿದ್ದಾರೆ ಎಂಬ ಮಾಹಿತಿಯಿದೆ. ಹೀಗಾಗಿ ಸಧ್ಯಕ್ಕೆ ಬಿ.ವೈ. ವಿಜಯೇಂದ್ರ ಅವರು ಸಚಿವ ಸಂಪುಟ ಸೇರುವುದಿಲ್ಲ ಎನ್ನಲಾಗುತ್ತಿದೆ.

Recommended Video

ಮಂತ್ರಿ ಸ್ಥಾನದ ಆಕಾಂಕ್ಷಿಗಳಿಗೆ ಶುರುವಾಯ್ತು ಢವಢವ | Oneindia Kannada

English summary
The BJP High Command has instructed Vijayendra to organize the party. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X