ಡಾ ಮಂಜುನಾಥ್ ಸ್ಪರ್ಧೆಗೆ ಬಿಜೆಪಿ ಹೈಕಮಾಂಡ್‌ ಒತ್ತಾಯ: ಕುಮಾರಸ್ವಾಮಿ ಬಿಚ್ಚಿಟ್ಟ ಮಾಹಿತಿ ಇಲ್ಲಿದೆ?

ಬೆಂಗಳೂರು, ಮಾರ್ಚ್‌ 12: ಜಯದೇವ ಹೃದ್ರೋಗ ಸಂಸ್ಥೆಯ ವಿಶ್ರಾಂತ ನಿರ್ದೇಶಕರಾದ ಡಾ.ಸಿ.ಎನ್.ಮಂಜುನಾಥ್ ಅವರನ್ನೇ ಬೆಂಗಳೂರು ಗ್ರಾಮಾಂತರ ನಿಲ್ಲಿಸಬೇಕು ಎಂಬುದು ಬಿಜೆಪಿ ಹೈಕಮಾಂಡ್ ಹಾಗೂ ರಾಜ್ಯ ಬಿಜೆಪಿ ನಾಯಕರ ಒತ್ತಾಸೆ ಇದೆ. ನಮ್ಮ ಪಕ್ಷದ ನಾಯಕರು, ಮುಖಂಡರು ಅದೇ ಅಭಿಲಾಷೆ ಹೊಂದಿದ್ದಾರೆ. ಎನ್ ಡಿಎ ಮೈತ್ರಿಕೂಟದ ಒಮ್ಮತ ಅಭ್ಯರ್ಥಿ ಆಗಬೇಕು ಎರಡೂ ಪಕ್ಷಗಳೂ ಬಯಸಿವೆ ಎಂದು ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಹೇಳಿದರು.

ರಾಮನಗರ ಕ್ಷೇತ್ರದ ನಾಯಕರ ಜೊತೆಗೆ ಸಭೆ ನಡೆಸಿದ ಕುಮಾರಸ್ವಾಮಿ, ಡಾ. ಮಂಜುನಾಥ್‌ ಅವರು ಚುನಾವಣೆಗೆ ನಿಲ್ಲಬೇಕೋ ಬೇಡವೋ ಎನ್ನುವ ತೀರ್ಮಾನವನ್ನು ಮುಖಂಡರಾದ ನಿಮಗೆ ಬಿಡುತ್ತೇನೆ ಎಂದು ಸಭೆಯಲ್ಲಿ ಕುಮಾರಸ್ವಾಮಿ ಅವರು ಹೇಳಿದರು.

BJP High Command Insists On Dr CN Manjunath Contest Says HD Kumaraswamy

ಸಿ.ಪಿ.ಯೋಗೇಶ್ವರ್ ಅವರು ಎನ್ ಡಿಎ ಅಭ್ಯರ್ಥಿ ಆಗಬೇಕು ಎಂದು ನಾನು ಹೇಳಿದ್ದೇನೆ. ಸ್ವತಃ ಯೋಗೇಶ್ವರ್ ಅವರಿಗೂ ಹೇಳಿದ್ದೇನೆ. ಆದರೆ, ಯೋಗೇಶ್ವರ್ ಅವರು ಕೂಡ ಡಾ.ಮಂಜುನಾಥ್ ಅವರೇ ನಿಲ್ಲಬೇಕು ಎಂದು ಒತ್ತಡ ಹಾಕುತ್ತಿದ್ದಾರೆ. ಮಿತ್ರ ಪಕ್ಷದ ವರಿಷ್ಠರು, ರಾಜ್ಯದ ಬಿಜೆಪಿ ನಾಯಕರ ಭಾವನೆಗಳನ್ನು ನಾವು ಗೌರವಿಸಬೇಕಿದೆ ಎಂದು ಕುಮಾರಸ್ವಾಮಿ ಅವರು ಸಭೆಯಲ್ಲಿ ಹೇಳಿದರು.

ನಾನು ನಮ್ಮ ತಂದೆಯವರ ಜತೆ ಎರಡು ಗಂಟೆ ಕಾಲ ಚರ್ಚೆ ಮಾಡಿದೆ. ಡಾ.ಮಂಜುನಾಥ್ ಅವರ ಸ್ಪರ್ಧೆ ವಿಚಾರವನ್ನು ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ. ನನ್ನ ಸಹೋದರಿ ಮನೆಯಲ್ಲಿ ಕಣ್ಣೀರು ಹಾಕುತ್ತಿದ್ದಾರೆ. ನಮ್ಮನ್ನು ಯಾಕೆ ರಾಜಕೀಯಕ್ಕೆ ಎಳೆಯುತ್ತೀರಿ, ನೆಮ್ಮದಿಯಿಂದ ಇದ್ದೇವೆ, ನಮಗೆ ರಾಜಕೀಯ ಬೇಡ ಅಂತ ಅಳ್ತಾ ಕೂತಿದ್ದಾರೆ. ಇದು ನಮ್ಮ ಮನೆಯ ಪರಿಸ್ಥಿತಿ. ನನ್ನ ನೋವು ನನಗೇ ಗೊತ್ತು. ಆದರೆ, ವಿರೋಧಿಗಳನ್ನು ಮಣಿಸಲೇಬೇಕು. ಇದು ನನ್ನ ಗುರಿ ಎಂದು ಹೇಳಿದರು.

ಈ ಚುನಾವಣೆಯನ್ನು ಸವಾಲಾಗಿ ಸ್ವೀಕಾರ ಮಾಡಿ. ರಾಮನಗರ ಜನರು ನಿಖಿಲ್ ರನ್ನು ಸೋಲಿಸಿದ್ದಾರೆ ಎಂದು ನಾನು ದೋಷ ಕೊಡಲ್ಲ. ನಮ್ಮದೇ ತಪ್ಪುಗಳಿಂದ ನಿಖಿಲ್ ಸೋತಿದ್ದಾರೆ, ಆ ತಪ್ಪುಗಳನ್ನು ಸರಿ ಮಾಡೋಣ ಎಂದರು. ರಾಮನಗರ ಕ್ಷೇತ್ರದ ಜನರು ಯಾವತ್ತೂ ಜಾತಿ ಮೇಲೆ ಚುನಾವಣೆ ಮಾಡಿದವರಲ್ಲ. ನಾನೆಂದೂ ಗುತ್ತಿಗೆದಾರರಿಂದ ಹಣ ಕೇಳಿದವನಲ್ಲ, ಚುನಾವಣೆ ಅದ ಮೇಲೆ ನಾನು ಊರುಗಳಲ್ಲಿ ಜಗಳ ತಂದಿಡಲಿಲ್ಲ. ನಿಮ್ಮಲ್ಲಿ ಒಬ್ಬನಾಗಿ ಪಕ್ಷಕ್ಕೆ ದುಡಿಮೆ ಮಾಡಿದ್ದೇನೆ. ಇವತ್ತು ಕಾಂಗ್ರೆಸ್ ನವರು ಯಾವ ರೀತಿ ನಡೆದುಕೊಳ್ಳುತ್ತಿದ್ದಾರೆ. ನಾನು ಯಾವ ರೀತಿ ನಡೆದುಕೊಂಡಿದ್ದೇನೆ ಎನ್ನುವುದು ರಾಜ್ಯಕ್ಕೆ ಗೊತ್ತಿದೆ ಎಂದು ಮುಖಂಡರಿಗೆ ಮಾಜಿ ಮುಖ್ಯಮಂತ್ರಿಗಳು ತಿಳಿಸಿದರು.

BJP High Command Insists On Dr CN Manjunath Contest Says HD Kumaraswamy

ಇನ್ನೂ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಕಣ್ಣೀರು ಹಾಕೋದು ಅವರ ಕುಟುಂಬಕ್ಕೆ ಎಂದು ಡಿ.ಕೆ.ಶಿವಕುಮಾರ್ ಹೇಳುತ್ತಾರೆ. ಅವರಿಗೆ ಆತ್ಮಸಾಕ್ಷಿ ಅನ್ನೋದು ಇದೆಯಾ? ಅವರು ಏನೆಲ್ಲಾ ಮಾಡಿದ್ದಾರೆ, ಏನೆಲ್ಲಾ ಕೆಡುಕು ಮಾಡಿದ್ದಾರೆ ಎನ್ನುವುದು ಈ ರಾಜ್ಯಕ್ಕೆ ಗೊತ್ತಿದೆ. ನಾವು ಹಾಗೆ ಮಾಡಿದ್ದೇವೆಯಾ? ಖಂಡಿತಾ ಇಲ್ಲ ಎಂದು ಕುಮಾರಸ್ವಾಮಿ ಹೇಳಿದರು. ಇಡೀ ವಿಶ್ವವೇ ಮೋದಿ ಅವರನ್ನು ಗೌರವಿಸುತ್ತದೆ. ಅಂತಹ ಮೋದಿ ಅವರು ದೇವೇಗೌಡರು ಬಂದರೆ ಎಷ್ಟು ಗೌರವ ಕೊಡುತ್ತಾರೆ ಎನ್ನುವುದನ್ನು ಇಡೀ ದೇಶವೇ ನೋಡಿದೆ. ಯಾವ ರೀತಿ ಅವರು ದೇವೆಗೌಡರನ್ನು ಆದರಿಸುತ್ತಾರೆ ಎಂಬುದನ್ನು ಆ ವ್ಯಕ್ತಿ ಅರ್ಥ ಮಾಡಿಕೊಳ್ಳಬೇಕು.

ಮಾಗಡಿ ಬಾಲಕೃಷ್ಣಗೆ ತಿರುಗೇಟು ನೀಡಿದ ಅವರು, ಗೌಡರ ಮನೆಯಲ್ಲಿ ಅಳಿಯನನ್ನೇ ಹರಕೆಯ ಕುರಿ ಮಾಡಲು ಹೊರಟಿದ್ದಾರೆ ಎಂದು ಹೇಳಿದ್ದಾರೆ. ಆ ವ್ಯಕ್ತಿಗೆ ಸತ್ಯ ಗೊತ್ತಿಲ್ಲ. ಮಂಜುನಾಥ್ ಅವರು ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಲಕ್ಷಾಂತರ ಬಡ ಜನರ ಹೃದಯ ಕಾಪಾಡಿದ್ದಾರೆ. ದೇಶದಲ್ಲಿಯೇ ಅವರ ಸೇವೆಯನ್ನು ಕೊಂಡಾಡುತ್ತಾರೆ. ಅಂತಹ ವ್ಯಕ್ತಿ ದೆಹಲಿಗೆ ಹೋದರೆ ಇಡೀ ದೇಶಕ್ಕೆ ಸೇವೆ ಮಾಡಬಹುದು. ಅವರನ್ನು ಹರಕೆಯ ಕುರಿ ಮಾಡುತ್ತಿಲ್ಲ ನಾವು. ಎಲ್ಲರೂ ಅವರ ನಿಸ್ವಾರ್ಥ ಸೇವೆಯನ್ನು ಗುರುತಿಸಿದ್ದಾರೆ ಎಂದು ಮಾಗಡಿ ಶಾಸಕ ಬಾಲಕೃಷ್ಣಗೆ ತಿರುಗೇಟು ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+