BY Vijayendra: ಬಿ ವೈ ವಿಜಯೇಂದ್ರಗೆ ಘಟಾನುಘಟಿ ಹೈಕಮಾಂಡ್‌ ನಾಯಕರಿಂದ ಬಂತು ದೂರವಾಣಿ ಕರೆ!

ಬೆಂಗಳೂರು, ನವೆಂಬರ್‌ 11: ನೂತನವಾಗಿ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಪ್ರಭಾವಿ ಲಿಂಗಾಯತ ನಾಯಕ ಬಿ ಎಸ್‌ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರನ್ನ ಬಿಜೆಪಿ ಹೈಕಮಾಂಡ್‌ ಆಯ್ಕೆ ಮಾಡಿದ್ದು, ಬಿ ವೈ ವಿಜಯೇಂದ್ರ ಅವರಿಗೆ ಬಿಜೆಪಿಯ ಹೈಕಮಾಂಡ್ನ ಘಟಾನುಘಟಿ ನಾಯಕರು ಶುಭಕೋರಿದ್ದಾರೆ.

ಹೌದು, ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ, ಬಿ ವೈ ವಿಜಯೇಂದ್ರ ಅವರಿಗೆ ದೂರವಾಣಿ ಮೂಲಕ ಕರೆ ಮಾಡಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಸೇರಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ಬಿ ಎಲ್‌ ಸಂತೋಷ್‌ ಸೇರಿದಂತೆ ಅನೇಕರು ಶುಭ ಕೋರಿದ್ದಾರೆ.

BJP High Command Leaders Congratulate BY Vijayendra

ಇನ್ನೂ ರಾಜ್ಯದ ಹಲವು ನಾಯಕರು ಟ್ವೀಟ್‌ ಮೂಲಕ ಶುಭಕೋರಿದ್ರೆ, ಇತ್ತ ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠರಾದ ಹೆಚ್‌ ಡಿ ದೇವೇಗೌಡ ಅವರು ಸಹ ದೂರವಾಣಿ ಮೂಲಕ ಕರೆ ಮಾಡಿ ಶುಭಕೋರಿದ್ರು, ಅಲ್ಲದೇ ಮಾಜಿ ಮುಖ್ಯಮಂತ್ರಿ ಎಸ್‌ ಎಂ ಕೃಷ್ಣ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿಯಾದ ಹೆಚ್‌ ಡಿ ಕುಮಾರಸ್ವಾಮಿ ಅವರು ಕರ ಮಾಡಿ ಶುಭಕೋರಿದ್ದಾರೆ.

ಮಾಜಿ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ ಕುಮಾರ್‌ ಕಟೀಲ್‌ ಟ್ವೀಟ್‌ ಮೂಲಕ ಶುಭ ಕೋರಿದ್ದು, ಬಿಜೆಪಿ ಕರ್ನಾಟಕದ ರಾಜ್ಯಾಧ್ಯಕ್ಷರಾಗಿ ಶಿಕಾರಿಪುರದ ಶಾಸಕರಾದ ಬಿ ವೈ ವಿಜಯೇಂದ್ರ ಅವರನ್ನು ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ಜೆ ಪಿ ನಡ್ಡಾ ಅವರು ನಿಯುಕ್ತಿಗೊಳಿಸಿದ್ದಾರೆ. ಅಭಿನಂದನೆಗಳು, ನಿಮ್ಮ ನೇತೃತ್ವದಲ್ಲಿ ಪಕ್ಷ ಸಂಘಟನೆಯು ಮತ್ತಷ್ಟು ಬಲಗೊಂಡು ಉನ್ನತಿಯನ್ನು ಸಾಧಿಸಲಿ ಎಂದು ಶುಭ ಹಾರೈಸುತ್ತೇನೆ ಎಂದು ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಶುಭಕೋರಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಭಕೋರಿದ್ದು, ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ನಿಯುಕ್ತಿಗೊಂಡ ಯುವ ನಾಯಕ ಬಿ. ವೈ. ವಿಜಯೇಂದ್ರ ರವರಿಗೆ ಹಾರ್ದಿಕ ಅಭಿನಂದನೆಗಳು. ನಿಮ್ಮ ಅಧ್ಯಕ್ಷ ಅವಧಿಯಲ್ಲಿ ಪಕ್ಷ ಮತ್ತಷ್ಟು ಸಂಘಟನಾತ್ಮಕವಾಗಿ ಬಲಗೊಂಡು ಇನ್ನಷ್ಟು ಶಕ್ತಿಯುತವಾಗಿ ಹೊರಹೊಮ್ಮಲಿ ಎಂದು ಆಶಿಸುತ್ತೇನೆ ಎಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಹಾಗೂ ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಸದಾನಂದಗೌಡ ಅವರು ಶುಭಕೋರಿದ್ದು, ಭಾರತೀಯ ಜನತಾ ಪಾರ್ಟಿ ಕರ್ನಟಕದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ವೈ.ವಿಜಯೇಂದ್ರ ಅವರಿಗೆ ನನ್ನ ಹೃತ್ಫೂರ್ವಕ ಅಭಿನಂದನೆಗಳು. ಪಕ್ಷವು ತಮ್ಮ ಅವಧಿಯಲ್ಲಿ ಸಂಘಟನಾತ್ಮಕ ಬಲಗೊಂಡು ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಅತ್ಯಂತ ಯಶಸ್ಸನ್ನು ಗಳಿಸಲೆಂದು ಶುಭಹಾರೈಸುತ್ತೇನೆ.

ಪಕ್ಷದ ಬಲವರ್ಧನೆಗೆ ಬಿ.ವೈ.ವಿಜಯೇಂದ್ರ ಅವರೊಂದಿಗೆ ನಾವೆಲ್ಲರೂ ಜೊತೆಯಲ್ಲಿದ್ದು, ಪಕ್ಷ ಸಂಘಟನೆಗೆ ನನ್ನ ಸಂಪೂರ್ಣವಿದೆ ಎಂದು ತಿಳಿಸುತ್ತಾ, ಮತ್ತೊಮ್ಮೆ ವಿಜಯೇಂದ್ರ ರವರಿಗೆ ಶುಭಹಾರೈಸುತ್ತೇನೆ ಎಂದು ಹೇಳಿದ್ದಾರೆ. ಅಲ್ಲದೇ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್‌ ಸಂತೋಷ್‌ ಟ್ವೀಟ್‌ ಮೂಲಕ ಶುಭಕೋರಿದ್ದು, ಪಕ್ಷವನ್ನು ವಿಜಯದ ಹಾದಿಯಲ್ಲಿ ನಡೆಸುವಲ್ಲಿ ಯಶಸ್ಸು ನಿಮ್ಮದಾಗಲಿ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+