ಲೋಕಸಭೆ ಚುನಾವಣೆ ಗೆಲ್ಲಲು ಬಿಜೆಪಿಯ ಹೊಸ ಸೂತ್ರ
ಬೆಂಗಳೂರು, ಜೂನ್ 29: ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಅಧಿಕ ಸ್ಥಾನ ಗೆಲ್ಲಲು ಬಿಜೆಪಿ ಹೈಕಮಾಂಡ್ ಎಂಟು ಅಂಶಗಳ ಹೊಸ ಸೂತ್ರವನ್ನು ಅನುಸರಿಸುವಂತೆ ರಾಜ್ಯಕ್ಕೆ ಸೂಚಿಸಿದೆ.
ಇಂದು ನಗರದಲ್ಲಿ ನಡೆದ ಕಾರ್ಯಕಾರಿ ಸಮಿತಿಯಲ್ಲಿ ಈ ಬಗ್ಗೆ ಚರ್ಚೆ ನಡೆದಿದ್ದು, ಬಿಜೆಪಿ ಹೈಕಮಾಂಡ್ ರಾಜ್ಯಕ್ಕೆ ಎಂಟು ಅಂಶಗಳ ಸೂತ್ರ ನೀಡಿರುವುದಾಗಿ ಅರವಿಂದ ಲಿಂಬಾವಳಿಯವರು ಮಾಧ್ಯಮಗಳಿಗೂ ತಿಳಿಸಿದ್ದಾರೆ.
ಸಂಪರ್ಕ ಅಭಿಯಾನ, ಬೈಕ್ rally, ಹಿರಿಯ ನಾಗರಿಕರ ಸಮಾವೇಶ, ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮಾವೇಶ, ಗ್ರಾಮ ಮಟ್ಟದ ಅಭಿಯಾನ, ಮನೆ-ಮನೆಗೆ ಭೇಟಿ, ಕಾರ್ಯಕರ್ತರ ಸಭೆ, ಬೂತ್ ಮಟ್ಟದಲ್ಲಿ ಪ್ರಚಾರಗಳನ್ನು ನಡೆಸುವ ಮೂಲಕ ಲೋಕಸಭೆ ಚುನಾವಣೆಯನ್ನು ಎದುರಿಸುವಂತೆ ರಾಜ್ಯಕ್ಕೆ ಅಮಿತ್ ಶಾ ಸೂಚಿಸಿದ್ದಾರೆ.

ಲೋಕಸಭೆ ಚುನಾವಣೆಗೂ ಮುನ್ನಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದು ಅನೇಕ ವಿಷಯಗಳ ಕುರಿತು ಚರ್ಚೆ ಮಾಡುವ ಜೊತೆಗೆ, ಚುನಾವಣಾ ಪ್ರಚಾರದಲ್ಲಿಯೂ ಭಾಗಿಯಾಗಲಿದ್ದಾರೆ ಎಂದು ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.
ಜನಾದೇಶದ ವಿರುದ್ಧ ಜೆಡಿಎಸ್-ಕಾಂಗ್ರೆಸ್ ಸರ್ಕಾರ ರಚನೆ, ಸರ್ಕಾರದ ವೈಫಲ್ಯಗಳು ಮತ್ತು ಪ್ರಧಾನಿ ಮೋದಿ ಅವರನ್ನು ಅಭಿನಂದಿಸುವ ಬಗ್ಗೆ ಸಮಿತಿ ಸಭೆಯಲ್ಲಿ ಚರ್ಚೆ ನಡೆಯಿತು ಎಂದು ಅರವಿಂದ ಲಿಂಬಾವಳಿ ಹೇಳಿದರು.












Click it and Unblock the Notifications