ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಡಿಯೂರಪ್ಪ ಎದುರು ಮಣಿದ ಹೈಕಮಾಂಡ್: ನಾಯಕತ್ವ ಬದಲಾವಣೆ ಇಲ್ಲ!

|
Google Oneindia Kannada News

ಬೆಂಗಳೂರು, ಜ. 12: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಅನುಮತಿ ಕೊಡುವ ಮೂಲಕ, ಕರ್ನಾಟಕ ಬಿಜೆಪಿಯಲ್ಲಿ ಎದ್ದಿದ್ದ ನಾಯಕತ್ವದ ಬದಲಾವಣೆ ಪ್ರಶ್ನೆಗಳಿಗೆ ಬಿಜೆಪಿ ಹೈಕಮಾಂಡ್ ಉತ್ತರ ಕೊಟ್ಟಿದೆ. ವಿರೋಧ ಪಕ್ಷಗಳ ನಾಯಕರ ಹೇಳಿಕೆಗಳೂ ಸೇರಿದಂತೆ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಆಗಲಿದೆ. ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಯಲಿದ್ದಾರೆ ಎಂಬುದು ಕಳೆದ 6 ತಿಂಗಳುಗಳಿಂದ ರಾಜ್ಯದಲ್ಲಿ ಬಹು ಚರ್ಚಿತ ವಿಷಯವಾಗಿತ್ತು. ಆದರೆ ಸಂಪುಟ ವಿಸ್ತರಣೆಗೆ ಅನುಮತಿ ಕೊಡುವ ಮೂಲಕ ಉಳಿದ ಅವಧಿಗೆ ಬಿಎಸ್‌ವೈ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಬಿಜೆಪಿ ಹೈಕಮಾಂಡ್ ಯಡಿಯೂರಪ್ಪ ಅವರ ವಿರೋಧಿಗಳಿಗೆ ಖಡಕ್ ಸಂದೇಶ ರವಾನಿಸಿದೆ.

ಉಪ ಚುನಾವಣೆಗಳಲ್ಲಿನ ಸತತ ಗೆಲವು, ಈ ಬಾರಿಯ ಗ್ರಾಮ ಪಂಚಾಯಿತಿ ಚುನಾವಣೆಯ ಫಲಿತಾಂಶ ಸೇರಿದಂತೆ ಹಲವು ಆಯಾಮಗಳಲ್ಲಿ ಚಿಂತನೆ ನಡೆಸಿರುವ ಬಿಜೆಪಿ ಹೈಕಮಾಂಡ್, ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ. ಬಿಜೆಪಿ ಹೈಕಮಾಂಡ್, ಪಕ್ಷದ ಹೊರಗಿನ ವಿರೋಧಿಗಳಿಗಿಂತ, ಪಕ್ಷದಲ್ಲಿನ ವಿರೋಧಿಗಳ ಬಾಯಿ ಮುಚ್ಚಿಸಿರುವುದು ಯಡಿಯೂರಪ್ಪ ಅವರಿಗೆ ಆನೆ ಬಲ ಬಂದಂತಾಗಿದೆ. ಇದೆಲ್ಲವನ್ನು ಸಿಎಂ ಯಡಿಯೂರಪ್ಪ ಅವರು ಸಾಧಿಸಿದ್ದು ಹೇಗೆ? ಇಲ್ಲಿದೆ ಮಾಹಿತಿ!

ಯಡಿಯೂರಪ್ಪ ವಿರೋಧಿಗಳಿಗೆ ಖಡಕ್ ಸಂದೇಶ

ಯಡಿಯೂರಪ್ಪ ವಿರೋಧಿಗಳಿಗೆ ಖಡಕ್ ಸಂದೇಶ

ಕಳೆದ ಭಾನುವಾರ (ಜ. 10) ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ದೆಹಲಿಗೆ ತೆರಳಿ ಬಿಜೆಪಿ ಹೈಕಮಾಂಡ್ ಭೇಟಿ ಮಾಡಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರೊಂದಿಗೆ ಮಹತ್ವದ ಮಾತುಕತೆ ಭೇಟಿ ಸಂದರ್ಭದಲ್ಲಿ ನಡೆದಿತ್ತು. ಉಳಿದ ಅವಧಿಗೆ ನೀವೇ ಮುಖ್ಯಮಂತ್ರಿ ಎಂದು ಭರವಸೆ ನೀಡಿದ ಅಮಿತ್ ಶಾ ಅವರು, ಸರ್ಕಾರದಿಂದ ಸೂಕ್ತ ಯೋಜನೆಗಳನ್ನು ರೂಪಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಜೊತೆಗೆ ಪಕ್ಷದ ಒಳಗಿನ ಯಡಿಯೂರಪ್ಪ ಅವರ ವಿರೋಧಿಗಳಿಗೆ ಸ್ಪಷ್ಟ ಸಂದೇಶ ರವಾನಿಸುವ ನಿಟ್ಟಿನಲ್ಲಿ ಅಮಿತ್ ಶಾ ಅವರೊಂದಿಗಿನ ಫೋಟೊವನ್ನು ಬಿಡುಗಡೆ ಮಾಡಲಾಗಿತ್ತು.

ಚುನಾವಣೆಗಳಲ್ಲಿನ ಗೆಲವು

ಚುನಾವಣೆಗಳಲ್ಲಿನ ಗೆಲವು

75 ವರ್ಷ ಮೀರಿದವರಿಗೆ ಅಧಿಕಾರವಿಲ್ಲ ಎಂಬ ಅಲಿಖಿತ ನಿಯಮ ಬಿಜೆಪಿಯಲ್ಲಿದೆ. ಆದರೆ ಆ ನಿಯಮ ಮೀರಿ ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ಬೆಂಬ ಕೊಟ್ಟಿದೆ. ಅದಕ್ಕೆ ಮತ್ತೊಂದು ಕಾರಣ ಚುನಾವಣೆಗಳಲ್ಲಿನ ಸತತ ಗೆಲವು. ಸಿಎಂ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಹುತೇಕ ಚುನಾವಣೆಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಂತೂ 26 ಸ್ಥಾನಗಳನ್ನು ಗೆಲ್ಲುವ ಮೂಲಕ ಯಡಿಯೂರಪ್ಪ ಅಭೂತಪೂರ್ವ ಜಯಕ್ಕೆ ಕಾರಣವಾಗಿದ್ದರು. ಬಳಿಕ ನಡೆದಿದ್ದ ವಿಧಾನಸಭೆ ಉಪ ಚುನಾವಣೆಯಲ್ಲಿ 15 ರಲ್ಲಿ 12 ಸ್ಥಾನಗಳನ್ನು ಗೆಲ್ಲುವ ಮೂಲಕ ಯಡಿಯೂರಪ್ಪ ತಮ್ಮ ಜನಪ್ರೀಯತೆ ಮೆರೆದಿದ್ದರು. ಬಳಿಕ ಶಿರಾ ಹಾಗೂ ಆರ್ ಆರ್ ನಗರ ಕ್ಷೇತ್ರಗಳಲ್ಲಿ ಬಿಜೆಪಿ ಜಭೇರಿ ಬಾರಿಸಿತ್ತು.

ಗ್ರಾಮ ಪಂಚಾಯಿತಿ ಚುನಾವಣೆ

ಗ್ರಾಮ ಪಂಚಾಯಿತಿ ಚುನಾವಣೆ

ಕಳೆದ 2015ರಲ್ಲಿ ನಡೆದಿದ್ದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಒಟ್ಟು 29,959 ಅಭ್ಯರ್ಥಿಗಳು ಗೆಲವು ಸಾಧಿಸಿದ್ದರು. ಕಳೆದ ಕೆಲ ದಿನಗಳ ಹಿಂದೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 86,183 ಸ್ಥಾನಗಳಲ್ಲಿ 45,246 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆದ್ದಿದ್ದಾರೆ. ಹೀಗಾಗಿ ನಗರ ಪ್ರದೇಶದ ಜೊತೆಗೆ ಗ್ರಾಮೀಣ ಭಾಗದಲ್ಲಿಯೂ ಬಿಜೆಪಿಗೆ ಭದ್ರಬುನಾದಿಯನ್ನು ಸಿಎಂ ಯಡಿಯೂರಪ್ಪ ಹಾಕಿದ್ದಾರೆ. ಇದು ಕೂಡ ಹೈಕಮಾಂಡ್ ಯಡಿಯೂರಪ್ಪ ಅವರ ಮೇಲೆ ವಿಶ್ವಾಸವಿಡಲು ಮತ್ತೊಂದು ಕಾರಣ.

ಯಡಿಯೂರಪ್ಪ ಬದಲಾವಣೆ

ಯಡಿಯೂರಪ್ಪ ಬದಲಾವಣೆ

ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾವಣೆ ಮಾಡಲು ಹೈಕಮಾಂಡ್ ತೀರ್ಮಾನ ಮಾಡಿದೆ. ಹೈಕಮಾಂಡ್‌ಗೂ ಯಡಿಯೂರಪ್ಪ ಅವರು ಸಾಕಾಗಿ ಹೋಗಿದ್ದಾರೆಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಹಿರಂಗ ಹೇಳಿಕೆ ಕೊಟ್ಟಿದ್ದರು. ಅದಾದ ಬಳಿಕ ವಿರೋಧ ಪಕ್ಷಗಳ ನಾಯಕರೂ ಕೂಡ ಬಿಜೆಪಿ ನಾಯಕತ್ವ ಬದಲಾವಣೆ ಕುರಿತು ಸತತವಾಗಿ ಹೇಳಿಕೆ ಕೊಟ್ಟಿದ್ದರು. ಪ್ರಮುಖವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಈ ಬಗ್ಗೆ ಹೇಳಿಕೆ ಕೊಡುವ ಮೂಲಕ ಸಿಎಂ ಯಡಿಯೂರಪ್ಪ ಅವರಿಗೆ ಸಹಾಯವಾಗುವಂತೆ ಮಾಡಿದರು ಎಂಬ ಆರೋಪ ಕೂಡ ಕೇಳಿ ಬಂದಿತ್ತು.


ಇದೀಗ ಸ್ವತಃ ಬಿಜೆಪಿ ಹೈಕಮಾಂಡ್ ಯಡಿಯೂರಪ್ಪ ಅವರ ಎದುರು ಮಣಿದಿದ್ದು, 79ನೇ ವಸಂತಕ್ಕೆ ಕಾಲಿಡುತ್ತಿರುವ ಅವರನ್ನೇ ಉಳಿದ ಅವಧಿಗೆ ಮುಖ್ಯಮಂತ್ರಿ ಎಂದು ಪರೀಕ್ಷ ಘೋಷಣೆ ಮಾಡಿದೆ. ಹೀಗಾಗಿ ಯಡಿಯೂರಪ್ಪ ಬದಲಾವಣೆ ಆದಲ್ಲಿ ಮುಖ್ಯಮಂತ್ರಿಯಾಗಲು ಪ್ರಯತ್ನ ನಡೆಸಿದ್ದ ಸ್ವಪಕ್ಷದ ನಾಯಕರಿಗೂ ಹೈಕಮಾಂಡ್ ನಡೆಯಿಂದ ಅಸಂತೋಷವಾಗಿದೆ.

English summary
The BJP High Commond Strongly Backed B.S. Yediyurappa's continuance as Karnataka Chief Minister for the full term in a move intended to quell speculation about his retirement. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X