ಕರ್ನಾಟಕದ ಅಭ್ಯರ್ಥಿಗಳ ಪಟ್ಟಿಯಲ್ಲಿ ಕುರುಬ ಸಮುದಾಯ ಮರೆತ ಬಿಜೆಪಿ ಹೈಕಮಾಂಡ್:‌ ಯಾವ ಜಾತಿಗೆ ಮಣೆ?

ಬೆಂಗಳೂರು, ಮಾರ್ಚ್‌ 14: ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕೇಸರಿ ಪಡೆ ಈಗಾಗಲೇ ಗೆಲ್ಲುವ ಕುದುರೆಯನ್ನ ಕಣಕ್ಕಿಳಿಸಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಫೈಕಿ ಬಿಜೆಪಿ ಹೈಕಮಾಂಡ್‌ 20 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನ ಬಿಡುಗಡೆ ಮಾಡಿದ್ದು, ಹಲವು ಜಾತಿ ಲೆಕ್ಕಾಚಾರದಿಂದ ಬಿಜೆಪಿ ಟಿಕೆಟ್‌ ಘೋಷಿಸಿದೆ.

ಬಿಜೆಪಿ ಲೋಕಸಭೆ ಟಿಕೆಟ್‌ ಪಟ್ಟಿಯಲ್ಲಿ ಉತ್ತರ ಕರ್ನಾಟಕದ ಬಹುತೇಕ ಕ್ಷೇತ್ರಗಳಲ್ಲಿ ಲಿಂಗಾಯತರು ನಿರ್ಣಾಯಕರಾಗಿರುವ ಕಾರಣ ಬಿಜೆಪಿಯ ಪ್ರಕಟಿತ ಪಟ್ಟಿಯಲ್ಲಿ ಲಿಂಗಾಯತ ಸಮುದಾಯದವರಿಗೆ ಸಿಂಹಪಾಲು ಸಿಕ್ಕಿದ್ದು, ಒಕ್ಕಲಿಗರಲ್ಲಿ ಇಬ್ಬರಿಗೆ ಸ್ಥಾನ ಸಿಕ್ಕಿದ್ರೆ, ಇತ್ತ ರಾಜ್ಯದಲ್ಲಿ ಹೆಚ್ಚು ಪ್ರಾಬಲ್ಯವಿರುವ ಕುರುಬ ಸಮುದಾಯವನ್ನ ಬಿಜೆಪಿ ಹೈಕಮಾಂಡ್‌ ಕಡೆಗಣಿಸಿದೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ. 28 ಲೋಕಸಭಾ ಕ್ಷೇತ್ರಗಳ ಫೈಕಿ 20 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನ ಬಿಡುಗಡೆ ಮಾಡಿದ್ದು, ಕುರುಬ ಸಮುದಾಯದಿಂದ ಯಾರಿಗೂ ಬಿಜೆಪಿ ಮಣೆ ಹಾಕಿಲ್ಲ, ಇನ್ನು ಉಳಿದ 8 ಕ್ಷೇತ್ರಗಳಲ್ಲಿ ಜೆಡಿಎಸ್‌ ಮೂರು ಕ್ಷೇತ್ರಗಳು ಸಿಗಲಿದೆ. ಉಳಿಯುವ ಐದು ಕ್ಷೇತ್ರದಲ್ಲಿ ಯಾವುದೇ ಕ್ಷೇತ್ರದಿಂದಲೂ ಕುರುಬ ಸಮುದಾಯದ ನಾಯಕನಿಗೆ ಟಿಕೆಟ್‌ ಸಿಗುವುದು ಅನುಮಾನವಾಗಿದೆ.

BJP ignores Kuruba Community Candidates for 2024 Lok Sabha Elections Know Who recieved more tickets

ಜಾತಿವಾರು ಯಾರಿಗೆ ಎಷ್ಟು ಟಿಕೆಟ್‌?

ಲಿಂಗಾಯತ - 08

ಒಕ್ಕಲಿಗ - 02

ಬ್ರಾಹ್ಮಣ - 02

ಪರಿಶಿಷ್ಟ ಜಾತಿ - 03

ಪರಿಶಿಷ್ಟ ಪಂಗಡ - 01

ಬಂಟ - 01

ಬಿಲ್ಲವ - 01

ಬಲಿಜ - 01

ಕ್ಷತ್ರಿಯ - 01

ಬಿಜೆಪಿ ಎರಡನೇ ಪಟ್ಟಿಯಲ್ಲಿ ಯಾರಿಗೆ ಟಿಕೆಟ್!

ಚಿಕ್ಕೋಡಿ -ಅಣ್ಣಾ ಸಾಹೇಬ್ ಜೊಲ್ಲೆ

ಬಾಗಲಕೋಟೆ -ಪಿ.ಸಿ.ಗದ್ದಿಗೌಡರ್

ಉಡುಪಿ-ಚಿಕ್ಕಮಗಳೂರು -ಕೋಟ ಶ್ರೀನಿವಾಸ ಪೂಜಾರಿ

ಹಾವೇರಿ -ಬಸವರಾಜ ಬೊಮ್ಮಾಯಿ

ಮೈಸೂರು -ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್

ಬೆಂಗಳೂರು ಗ್ರಾಮಾಂತರ -ಡಾ.ಸಿ.ಎನ್.ಮಂಜುನಾಥ

ಬೆಂಗಳೂರು ಉತ್ತರ -ಶೋಭಾ ಕರಂದ್ಲಾಜೆ

ಬೆಂಗಳೂರು ದಕ್ಷಿಣ -ತೇಜಸ್ವಿ ಸೂರ್ಯ

ಬೆಂಗಳೂರು ಕೇಂದ್ರ -ಪಿ.ಸಿ.ಮೋಹನ್

ತುಮಕೂರು -ವಿ.ಸೋಮಣ್ಣ

ದಕ್ಷಿಣ ಕನ್ನಡ -ಕ್ಯಾಪ್ಟನ್ ಬ್ರಿಜೇಶ್ ಚೌಟಾ

ಚಾಮರಾಜನಗರ -ಎಸ್.ಬಾಲರಾಜು

ಧಾರವಾಡ -ಪ್ರಹ್ಲಾದ್ ಜೋಶಿ

ಕೊಪ್ಪಳ -ಡಾ.ಬಸವರಾಜ ತ್ಯಾವಟೂರು

ದಾವಣಗೆರೆ -ಗಾಯತ್ರಿ ಸಿದ್ದೇಶ್ವರ್

ಬಳ್ಳಾರಿ -ಬಿ.ಶ್ರೀರಾಮುಲು

ಕಲಬುರಗಿ -ಡಾ.ಉಮೇಶ್ ಜಾಧವ್

ಬೀದರ್ -ಭಗವಂತ ಖೂಬಾ

ವಿಜಯಪುರ -ರಮೇಶ್ ಜಿಗಜಿಣಗಿ

ಶಿವಮೊಗ್ಗ -ಬಿ.ವೈ.ರಾಘವೇಂದ್ರ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+