ಪ್ರತಾಪ್ ಸಿಂಹನ್ನ ಬಿಜೆಪಿ ಕಿತ್ತು ಬಿಸಾಕಿದೆ, ಪಾಪ ಆತನೂ ರಾಜಕೀಯ ಮಾಡಬೇಕಲ್ಲ?
ರಾಜ್ಯ ಸರ್ಕಾರ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವುದನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ಈ ಬಗ್ಗೆ ಸಿಎಂ ಈಗಾಗಲೇ ಉತ್ತರ ನೀಡಿದ್ದಾರೆ. ಪ್ರತಾಪ್ ಸಿಂಹ ಅವರನ್ನು ಬಿಜೆಪಿ ಈಗಾಗಲೇ ಕಡೆಗಣಿಸಿದೆ. ಪಾಪ ಆತನಿಗೂ ರಾಜಕೀಯ ಮಾಡಬೇಕು. ಹೀಗಾಗಿ ತನ್ನ ಅಸ್ತಿತ್ವ ತೋರಿಸಿಕೊಳ್ಳಲು ಹೀಗೆಲ್ಲ ಮಾಡುತ್ತಿದ್ದಾರೆ. ಈ ಬಗ್ಗೆ ಕೋರ್ಟ್ ವಿಚಾರಣೆ ಮಾಡಿ ತೀರ್ಮಾನ ಮಾಡಲಿದೆ ಎಂದು ತಿರುಗೇಟು ನೀಡಿದ್ದಾರೆ.
ನಾಡ ಹಬ್ಬ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಬಗ್ಗೆ ಮಾತನಾಡಿ, ಇದರ ಹೊರತಾಗಿ ರಾಜಕೀಯ ಮಾಡಲು ಅವರಿಗೆ ಬೇರೆ ವಿಚಾರ ಇಲ್ಲ. ಅವರಿಗೆ ರಾಜ್ಯದ ಬಗ್ಗೆ ಕಾಳಜಿ ಇದ್ದರೆ ದೆಹಲಿಗೆ ಹೋಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಬೆಂಗಳೂರು ಅಭಿವೃದ್ಧಿಗೆ ಅನುದಾನ, ಮೇಕೆದಾಟು, ಮಹದಾಯಿ, ಕೃಷ್ಣಾ ಮೇಲ್ದಂಡೆ ಯೋಜನೆಗಳಿಗೆ ಅನುಮತಿ, ನರೇಗಾ ಅನುದಾನ ಕೊಡಿಸಲಿ ಎಂದು ಸವಾಲ್ ಹಾಕಿದ್ದಾರೆ. ಅದನ್ನು ಬಿಟ್ಟು ಈ ರೀತಿ ಖಾಲಿ ಮಾತು ಆಡೋದು ಬೇಡ. ಕೇವಲ ಪ್ರಚಾರಕ್ಕೆ ಅವರೆಲ್ಲ ಹೀಗೆ ರಾಜಕೀಯ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಎರಡು ಗುಂಪುಗಳ ನಡುವೆ ಕಿತ್ತಾಟ
"ಧರ್ಮಸ್ಥಳ ವಿಚಾರದಲ್ಲಿ ಸತ್ಯಾಂಶ ಒದಗಿಸಿದ್ದು ನಾವು. ಆದರೆ ಅವರು ನಮಗಿಂತ ಮುಂಚಿತವಾಗಿ ಹೈಸ್ಪೀಡ್‌ನಲ್ಲಿ ಹೊರಟಿದ್ದಾರೆ. ಬಿಜೆಪಿಯ ಎರಡು ಗುಂಪುಗಳ ನಡುವಣ ತಿಕ್ಕಾಟಕ್ಕೆ ಧರ್ಮಸ್ಥಳವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಬಲಿಪಶು ಮಾಡುತ್ತಿದ್ದಾರೆ. ಧರ್ಮಸ್ಥಳ ವಿಚಾರದಲ್ಲಿ ಷಡ್ಯಂತ್ರ ಮಾಡುತ್ತಿರುವವರು ಬಿಜೆಪಿಯವರು. ಬುರುಡೆ ಗಿರಾಕಿ ಯಾರು? ಬಿಜೆಪಿ ಕಾರ್ಯಕರ್ತರಲ್ಲವೇ? ಧರ್ಮಸ್ಥಳಕ್ಕೆ ಅಪಮಾನ ಆಗಿದ್ದರೆ ಅದು ಬಿಜೆಪಿ ನಾಯಕರು ಹಾಗೂ ಅದರ ಸಂಘಟನೆಯವರಿಂದ ಮಾತ್ರ ಎಂದು ಆರೋಪಿಸಿದ್ದಾರೆ.
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸುವ ಬಗ್ಗೆ ಬಿಜೆಪಿ ಟೀಕೆಗೆ ಉತ್ತರ ನೀಡಿರುವ ಡಿಕೆ ಶಿವಕುಮಾರ್, ಒಂದೆರಡು ದಿನಗಳಲ್ಲಿ ಬಿಜೆಪಿಯವರು ಮಾಡಿರುವ ಕಾನೂನನ್ನು ನಿಮ್ಮ ಮುಂದೆ ತಂದಿಡುತ್ತೇನೆ. ಅವರು ಮಾಡಿರುವ ಕಾನೂನಿನಲ್ಲಿ ಈ ಚುನಾವಣೆ ವೇಳೆ ಮತಯಂತ್ರ ಅಥವಾ ಮತಪತ್ರ ಬಳಕೆ ಮಾಡಬಹುದು ಎಂದು ಹೇಳಿದ್ದಾರೆ. ಅವರೇ ಮಾಡಿರುವ ಕಾನೂನು ಪ್ರಕಾರ ನಡೆದರೆ ತಪ್ಪೇನಿದೆ? ಎಂದು ಪ್ರಶ್ನಿಸಿದ್ದಾರೆ.
ತಮ್ಮ ಬೈಕ್‌ನಲ್ಲೇ ಬೆಂಗಳೂರು ರೌಂಡ್ಸ್
ಡಿಕೆ ಶಿವಕುಮಾರ್ ಅವರು ತಮ್ಮ ನೆಚ್ಚಿನ ಹಳೆಯ ಬೈಕ್ ಏರಿ ಸಂಡೇ ರೌಂಡ್ಸ್ ಹೊಡೆದಿದ್ದಾರೆ. ಇಂದು ತುಂಬಿದ ವೇಳಾಪಟ್ಟಿಯ ನಡುವೆ, ನನ್ನ ಯೌವನವನ್ನು ಮತ್ತೆ ಅನುಭವಿಸಲು ನಾನು ಸ್ವಲ್ಪ ಸಮಯ ತೆಗೆದುಕೊಂಡೆ. ಯುವ ಕಾಂಗ್ರೆಸ್ ರಾಜ್ಯ ಕಾರ್ಯಕಾರಿ ಸಭೆಯಲ್ಲಿ ಭಾಗವಹಿಸಲು ಬೆಂಗಳೂರಿನ ಬೀದಿಗಳಲ್ಲಿ ಬೈಕ್ ಸವಾರಿ ಮಾಡಿದೆ. ಇದು ಕೇವಲ ಸವಾರಿಗಿಂತ ಹೆಚ್ಚಿನದಾಗಿತ್ತು. ನಗರದೊಂದಿಗೆ ಮತ್ತೆ ಸಂಪರ್ಕ ಸಾಧಿಸಲು ಮತ್ತು ನಮ್ಮ ನಾಗರಿಕರು ಎದುರಿಸುತ್ತಿರುವ ಗುಂಡಿಗಳಂತಹ ದೈನಂದಿನ ಸವಾಲುಗಳನ್ನು ನೇರವಾಗಿ ವೀಕ್ಷಿಸಲು ಇದು ಒಂದು ಅವಕಾಶವಾಗಿತ್ತು. ನಾವು ಒಟ್ಟಿಗೆ ಇದ್ದೇವೆ, ಕೇಳುತ್ತಿದ್ದೇವೆ, ನೋಡುತ್ತಿದ್ದೇವೆ ಮತ್ತು ಉತ್ತಮ ಬೆಂಗಳೂರನ್ನು ನಿರ್ಮಿಸಲು ಬದ್ಧರಾಗಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
-
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications