ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೊಮ್ಮಾಯಿ ಸರ್ಕಾರಕ್ಕೆ 1 ತಿಂಗಳು; ರಾಜ್ಯಕ್ಕೆ ಅರುಣ್ ಸಿಂಗ್ ಆಗಮನ

|
Google Oneindia Kannada News

ಬೆಂಗಳೂರು, ಆಗಸ್ಟ್ 30; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ಒಂದು ತಿಂಗಳು ಪೂರ್ಣಗೊಳಿಸಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಳಿಕ ಮೊದಲ ಬಾರಿಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಬೆಂಗಳೂರಿಗೆ ಸೋಮವಾರ ಆಗಮಿಸುತ್ತಿದ್ದಾರೆ.

ಆಗಸ್ಟ್ 30 ರಿಂದ ಸೆಪ್ಟೆಂಬರ್ 3ರ ತನಕ ಅರುಣ್ ಸಿಂಗ್ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಸೋಮವಾರ ಸಂಜೆ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಲಿದ್ದು, ಬಳಿಕ ಮೈಸೂರಿಗೆ ಭೇಟಿ ನೀಡಿ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.

 ವಿಶೇಷ ವರದಿ: ಸಂಪುಟ ವಿಸ್ತರಣೆ ಬಳಿಕ ರೇಣುಕಾಚಾರ್ಯ ಹೊನ್ನಾಳಿಗೆ ಬಂದಿಲ್ಲ; ಯಾಕೆ? ವಿಶೇಷ ವರದಿ: ಸಂಪುಟ ವಿಸ್ತರಣೆ ಬಳಿಕ ರೇಣುಕಾಚಾರ್ಯ ಹೊನ್ನಾಳಿಗೆ ಬಂದಿಲ್ಲ; ಯಾಕೆ?

ಮಂಗಳವಾರ ಬೆಳಗ್ಗೆ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದು, ನಾಡ ದೇವತೆ ದರ್ಶನ ಪಡೆಯಲಿದ್ದಾರೆ. ಬಳಿಕ ಮೈಸೂರು ನಗರದಲ್ಲಿ ನಡೆಯುವ ಮೈಸೂರು, ಮೈಸೂರು ಗ್ರಾಮಾಂತರ ಮತ್ತು ಚಾಮರಾಜನಗರ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಂಪುಟ ದರ್ಜೆ ಸ್ಥಾನಮಾನ ನಿರಾಕರಿಸಿದ ಯಡಿಯೂರಪ್ಪ! ಸಂಪುಟ ದರ್ಜೆ ಸ್ಥಾನಮಾನ ನಿರಾಕರಿಸಿದ ಯಡಿಯೂರಪ್ಪ!

Karnataka BJP In Charge Arun Singh To Visit Bengaluru On August 30

ಜಿಲ್ಲಾ ಕೋರ್ ಕಮಿಟಿ ಸಭೆ ಮತ್ತು ಮಂಡಲ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳ ಸಭೆಯನ್ನು ನಡೆಸಲಿದ್ದಾರೆ. ಸೆಪ್ಟೆಂಬರ್ 1ರಂದು ಹಾಸನ ಮತ್ತು ಮಂಡ್ಯ ಜಿಲ್ಲೆಯ ಪದಾಧಿಕಾರಿಗಳ ಸಭೆ ಚನ್ನರಾಯಪಟ್ಟಣದಲ್ಲಿ ನಡೆಯಲಿದೆ, ಅದರಲ್ಲಿ ಭಾಗವಹಿಸಲಿದ್ದಾರೆ.

ಬಸವರಾಜ ಬೊಮ್ಮಾಯಿ ಸಂಪುಟ: ಯಾವ ಸಚಿವರಿಗೆ ಯಾವ ಖಾತೆ? ಬಸವರಾಜ ಬೊಮ್ಮಾಯಿ ಸಂಪುಟ: ಯಾವ ಸಚಿವರಿಗೆ ಯಾವ ಖಾತೆ?

ಹಾಸನ ಮತ್ತು ಮಂಡ್ಯ ಜಿಲ್ಲಾ ಪ್ರಮುಖ ನಾಯಕರ ಸಭೆ, ಮಂಡಲ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆ ಮುಗಿಸಿ ಬೆಂಗಳೂರಿಗೆ ಅರುಣ್ ಸಿಂಗ್ ತೆರಳಿದ್ದಾರೆ. ಸೆಪ್ಟೆಂಬರ್ 2ರಂದು ಮಲ್ಲೇಶ್ವರದಲ್ಲಿ ಬೆಂಗಳೂರು ದಕ್ಷಿಣ ಮತ್ತು ಕೇಂದ್ರ ಜಿಲ್ಲೆಯ ಪದಾಧಿಕಾರಿಗಳ ಸಭೆ ನಡೆಯಲಿದೆ.

ಸೆಪ್ಟೆಂಬರ್ 2ರ ಮಧ್ಯಾಹ್ನ ಬೆಂಗಳೂರು ವಿಮಾನ ನಿಲ್ದಾಣದಿಂದ ಅರುಣ್ ಸಿಂಗ್ ಹುಬ್ಬಳ್ಳಿಗೆ ತೆರಳಲಿದ್ದಾರೆ. ಅಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಸಂಜೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಪಕ್ಷದ ಹಿರಿಯ ನಾಯಕರ ಜೊತೆ ಬೆಂಗಳೂರಿನಲ್ಲಿ ಸಭೆ ನಡೆಸುವ ಸಾಧ್ಯತೆ ಇದೆ. ಸೆಪ್ಟೆಂಬರ್ 3ರ ಬೆಳಗ್ಗೆ ಬೆಂಗಳೂರಿನಿಂದ ಅರುಣ್ ಸಿಂಗ್ ದೆಹಲಿಗೆ ವಾಪಸ್ ಆಗಲಿದ್ದಾರೆ.

ಮೊದಲ ಬಾರಿ ಭೇಟಿ; ಜುಲೈ 26ರಂದು ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಜುಲೈ 27ರಂದು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು. ಜುಲೈ 28ರಂದು ಪ್ರಮಾಣ ವಚನ ಸಮಾರಂಭ ನಡೆದಿತ್ತು.

ಬಸವರಾಜ ಬೊಮ್ಮಾಯಿ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದು ತಿಂಗಳು ಕಳೆದಿದೆ. ಮುಖ್ಯಮಂತ್ರಿ ಬದಲಾವಣೆ ಬಳಿಕ ಮೊದಲ ಬಾರಿಗೆ ಅರುಣ್ ಸಿಂಗ್ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಳೆದ ವಾರ ದೆಹಲಿಗೆ ಭೇಟಿ ನೀಡಿದ್ದರು.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಳಿಕ ಮೂರು ಮಹಾನಗರ ಪಾಲಿಕೆಗಳ ಚುನಾವಣೆ ನಡೆಯುತ್ತಿದೆ. ಹುಬ್ಬಳ್ಳಿ-ಧಾರವಾಡ, ಕಲಬುರಗಿ ಮತ್ತು ಬೆಳಗಾವಿ ಮಹಾನಗರ ಪಾಲಿಕೆಗಳಿಗೆ ಸೆಪ್ಟೆಂಬರ್ 3ರಂದು ಚುನಾವಣೆ ನಡೆಯಲಿದ್ದು, ಚುನಾವಣೆ ಗೆಲ್ಲಲು ಬಿಜೆಪಿ ಬಿರುಸಿನ ಪ್ರಚಾರ ನಡೆಸುತ್ತಿದೆ.

ಸಂಪುಟ ವಿಸ್ತರಣೆ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸಂಪುಟವನ್ನು ವಿಸ್ತರಣೆ ಮಾಡಿದ್ದು 29 ಸಚಿವರನ್ನು ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ. ಸಂಪುಟದಲ್ಲಿ ಇನ್ನೂ 4 ಸ್ಥಾನಗಳು ಖಾಲಿ ಇವೆ. ಅರುಣ್ ಸಿಂಗ್ ಬೆಂಗಳೂರು ಭೇಟಿ ವೇಳೆ ಸಚಿವ ಸ್ಥಾನದ ಆಕಾಂಕ್ಷಿಗಳು ಅವರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆಗೆ ಬೇಡಿಕೆ ಇಡುವ ನಿರೀಕ್ಷೆ ಇದೆ.

ಯಡಿಯೂರಪ್ಪ ರಾಜ್ಯ ಪ್ರವಾಸ; ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಗಣಪತಿ ಹಬ್ಬದ ಬಳಿಕ ರಾಜ್ಯ ಪ್ರವಾಸ ಕೈಗೊಳ್ಳುತ್ತೇನೆ ಎಂದು ಈಗಾಗಲೇ ಘೋಷಣೆ ಮಾಡಿದ್ದಾರೆ. ಅರುಣ್ ಸಿಂಗ್ ರಾಜ್ಯ ಪ್ರವಾಸದ ಕುರಿತು ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಮಾತುಕತೆಯನ್ನು ನಡೆಸುವ ಸಾಧ್ಯತೆ ಇದೆ.

Recommended Video

ಕೃಷ್ಣನ ಕೈಯಲ್ಲಿರುವ ಕೊಳಲು ಕಿರೀಟದಲ್ಲಿರುವ ನವಿಲುಗರಿ ಯಾವುದರ ಸೂಚಕ? | Oneindia Kannada

English summary
After one month of leadership change in Karnataka Arun Singh to visit state on August 30. BJP national general secretary and the party's in-charge for Karnataka Arun Singh will visit Mysuru, Hassa, Hubballi during his visit.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X