ವಿಧಾನಸೌಧದಲ್ಲಿ ಅತ್ಯಾಚಾರ, ಕೋರ್ಟ್‌ನಿಂದ ಸ್ಟೇ ತಂದ ಬಾಂಬೆ ಬಾಯ್ಸ್ ಬಿಜೆಪಿ ಪಕ್ಷದವರಲ್ಲವೇ: ಡಿ ಕೆ ಶಿವಕುಮಾರ್
ಬೆಂಗಳೂರು, ಮಾರ್ಚ್ 22: ಬಿಜೆಪಿ ಸಂಸ್ಕೃತಿಹೀನ ಪಕ್ಷ. ಅವರು ಜನಾದೇಶದಿಂದ ಸೋಲನುಭವಿಸಿದ್ದು, ವಿಧಾನಸಭೆಯಲ್ಲಿ ಹೇಗೆ ವರ್ತಿಸಬೇಕು ಎಂಬುದು ಗೊತ್ತಿಲ್ಲ. ಅವರು ಗೂಂಡಾಗಳು. ಇದು ನಾಚಿಕೆಗೇಡಿನ ವಿಚಾರ. ನಾನು ಕಳೆದ 36 ವರ್ಷಗಳಿಂದ ವಿಧಾನಸಭೆಯಲ್ಲಿದ್ದು, ಎಂದೂ ಇಂತಹ ವರ್ತನೆ ನೋಡಿಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.
ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳು ಹನಿಟ್ರ್ಯಾಪ್ ವಿಚಾರವಾಗಿ ಹೇಳಿಕೆ ನೀಡಿದ್ದು, ಯಾರಾದರೂ ಒಬ್ಬರು ದೂರು ನೀಡಿದರೆ ಕ್ರಮ ತೆಗೆದುಕೊಳ್ಳಬಹುದು. ವಿಧಾನಸೌಧದಲ್ಲೇ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆಯೊಬ್ಬರು ದೂರಿನಲ್ಲಿ ಆರೋಪಿಸಿದ್ದಾರೆ. ಈ ವಿಚಾರ ನ್ಯಾಯಾಲದಲ್ಲಿದೆ. ಬಾಂಬೆ ಬಾಯ್ಸ್ ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿರುವುದು ಯಾವ ಕಾರಣಕ್ಕೆ?" ಎಂದು ತಿರುಗೇಟು ನೀಡಿದರು. ಅವರ ಬಾಣದ ಗುರಿ ಯಾರ ಕಡೆ ಇದೆ ಎಂದು ಕೇಳಿದಾಗ, "ಅವರು ಯಾರತ್ತ ಗುರಿ ಇಟ್ಟಿದ್ದಾರೋ ಗೊತ್ತಿಲ್ಲ. ಇದು ಅವರ ಸೆಲ್ಫ್ ಗೋಲ್ ಇರಬೇಕು ಎಂದು ಡಿ ಕೆ ಶಿವಕುಮಾರ್ ಅವರು ವ್ಯಂಗವಾಡಿದರು.

ಬೆಂಗಳೂರಿಗರಿಗೆ ಪ್ರತಿಜ್ಞಾವಿಧಿ ಬೋಧಿಸಿದ ಡಿ.ಕೆ. ಶಿವಕುಮಾರ್
ರಾಜ್ಯ ಬೇಸಿಗೆ ಎದುರಿಸುತ್ತಿರುವ ಹೊತ್ತಿನಲ್ಲಿ, ಮಾ.22ರಂದು ವಿಶ್ವ ಜಲ ದಿನದ ಅಂಗವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಬೆಂಗಳೂರು ಜಲ ಮಂಡಳಿ, ಜಲಸಂಪನ್ಮೂಲ ಇಲಾಖೆ ಹಾಗೂ ಸಣ್ಣ ನೀರಾವರಿ ಇಲಾಖೆ ಸಹಯೋಗದಲ್ಲಿ ಕಾವೇರಿ ಆರತಿ ಹಾಗೂ ಬೃಹತ್ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮವನ್ನು ನಡೆಸಲಾಯಿತು. ಜಲಸಂರಕ್ಷಣೆಯ ಪ್ರತಿಜ್ಞಾವಿಧಿಯಲ್ಲಿ ಸಾವಿರಾರು ಜನರು ಭಾಗವಹಿಸಿ ಹೊಸ ದಾಖಲೆ ಬರೆಯಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, "ವಿಶ್ವ ಜಲ ದಿನ ಅಂಗವಾಗಿ ಇಂದಿನಿಂದ ಬೃಹತ್ ಪ್ರತಿಜ್ಞಾ ವಿಧಿ ಸ್ವೀಕಾರ ಅಭಿಯಾನಕ್ಕೆ ನಿಮ್ಮನ್ನು ಆಹ್ವಾನಿಸಿದ್ದೇನೆ. ಇಂದು ಪವಿತ್ರವಾದ ಕಾವೇರಿ ಆರತಿ ಮೂಲಕ ಚಾಲನೆ ನೀಡಲಾಗುತ್ತಿದೆ. ನೀವೆಲ್ಲರೂ ದೊಡ್ಡ ಸಂಖ್ಯೆಯಲ್ಲಿ ಬಂದಿದ್ದೀರಿ. ನಿಮಗೆ ಸರ್ಕಾರದ ಪರವಾಗಿ ಹೃದಯಪೂರ್ವಕವಾಗಿ ಧನ್ಯವಾದ ಅರ್ಪಿಸುತ್ತೇನೆ. ಇಂದು ಬೆಳಗ್ಗೆ ತಲಕಾವೇರಿಗೆ ಹೋಗಿ ಕಾವೇರಿ ಪೂಜೆ ಮಾಡಿ, ಪವಿತ್ರ ಕಾವೇರಿ ಜಲವನ್ನು ತಂದು ಮಲ್ಲೇಶ್ವರದಲ್ಲಿರುವ ಸ್ಯಾಂಕಿ ಕೆರೆಗೆ ಅರ್ಪಿಸಿ ಪವಿತ್ರವಾದ ಕಾರ್ಯಕ್ರಮ ನಡೆಸಲಾಗಿದೆ." ಎಂದು ತಿಳಿಸಿದರು.
"ನಮ್ಮ ದಿನನಿತ್ಯದ ಜೀವನ ಆರಂಭವಾಗುವುದೇ ನೀರಿನಿಂದ. ನೀರಿಲ್ಲದೆ ನಾವು ಬದುಕಲು ಸಾಧ್ಯವಿಲ್ಲ. ನೀರಿನಿಂದಲೇ ನಾಗರೀಕತೆ, ನೀರಿನಿಂದಲೇ ಧರ್ಮ, ನೀರಿಲ್ಲದೆ ಪರಮಾತ್ಮನಿಲ್ಲ. ಇಲ್ಲಿನ ಸುತ್ತ ಮುತ್ತಲಿನ ಪ್ರದೇಶದಲ್ಲಿ ಶಕ್ತಿ ದೇವತೆಗಳಾದ ಗಂಗಮ್ಮ, ಮಾರಮ್ಮ, ಕಾಡುಮಲ್ಲೇಶ್ವರ, ಲಕ್ಷ್ಮಿ ನರಸಿಂಹಸ್ವಾಮಿ, ದಕ್ಷಿಣಮುಖಿ ನಂದಿತೀರ್ಥ ದೇವಾಲಯಗಳಿವೆ. ಸ್ಥಳೀಯ ನಾಗರೀಕರು ಈ ಕಾರ್ಯಕ್ರಮಕ್ಕೆ ಅತ್ಯುತ್ತಮ ಸಹಕಾರ ನೀಡಿದ್ದಾರೆ. ಪ್ರಕೃತಿಯ ಜಲ ಮಾತೆಗೆ ನಮಿಸಿ ಪ್ರಾರ್ಥಿಸುವುದು ನಮ್ಮ ಕರ್ತವ್ಯ. ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂದು ನಾನು ಹೇಳುತ್ತಿರುತ್ತೇನೆ" ಎಂದರು.
ಬೆಂಗಳೂರಿನಲ್ಲಿ ಮೊದಲ ಬಾರಿಗೆ ಕಾವೇರಿ ಆರತಿ ಪ್ರಾರಂಭ ಮಾಡಿದ್ದೇವೆ. ಕೆಆರ್ ಎಸ್ ಜಲಾಶಯದ ಬಳಿಯೂ ಕಾವೇರಿ ಆರತಿ ಕಾರ್ಯಕ್ರಮ ಮಾಡಲು ನಾನು ಪ್ರಯತ್ನಿಸುತ್ತಿದ್ದೇನೆ. ಅದಕ್ಕಾಗಿ ಸಮಿತಿಯನ್ನು ರಚಿಸಲಾಗಿದೆ. ದಸರಾ ಸಂದರ್ಭದಲ್ಲಿ ಈ ಕಾರ್ಯಕ್ರಮ ಮಾಡುವ ಯೋಜನೆ ಇದೆ. ಬರಗಾಲ ಬಂದಾಗ, ಬಾವಿ ಬತ್ತಿದಾಗ ನಮಗೆ ನೀರಿನ ಮೌಲ್ಯ ಅರಿವಾಗುತ್ತದೆ. ನೀರಿನ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ. ಬೆಂಗಳೂರಿನಲ್ಲಿ ಕುಡಿಯುವ ನೀರಿಗಾಗಿ ಕಾವೇರಿ 5ನೇ ಹಂತದ ಯೋಜನೆ ಜಾರಿ ಮಾಡಲಾಗಿದೆ. ಆಮೂಲಕ 110 ಹಳ್ಳಿಗಳಿಗೆ ನೀರು ಒದಗಿಸಲಾಗಿದೆ. ಈ ವರ್ಷ ಎಷ್ಟೇ ಕಷ್ಟ ಬಂದರೂ ನೀರಿನ ಸಮಸ್ಯೆ ಎದುರಾಗಬಾರದು ಎಂದು ನಾವು ಸಂಕಲ್ಪ ಮಾಡಿದ್ದೇವೆ. ನೀರನ್ನು ಸಮರ್ಪಕವಾಗಿ ಬಳಸಿ, ನೀರಿನ ಸಂರಕ್ಷಣೆಗೆ ನೀವೆಲ್ಲರೂ ಪ್ರತಿಜ್ಞೆ ಮಾಡಬೇಕು ಎಂದು ಕರೆ ನೀಡಿದರು.












Click it and Unblock the Notifications