ಕರ್ನಾಟಕದ ಬೆಳವಣಿಗೆಗೆ ಬಿಜೆಪಿ ಬದ್ಧ: ಪ್ರಧಾನಿ ಮೋದಿ

ನವದೆಹಲಿ, ಮಾರ್ಚ್‌ 30: ಕರ್ನಾಟಕದ ಬೆಳವಣಿಗೆಯ ಪಯಣವನ್ನು ಮತ್ತಷ್ಟು ಹೆಚ್ಚಿಸಲು ಮತ್ತು ಸಮಾಜದ ಬಡ ಮತ್ತು ದರ್ಬಲ- ವರ್ಗಗಳನ್ನು ಸಬಲೀಕರಣಗೊಳಿಸಲು ಬಿಜೆಪಿ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ರಾಜ್ಯದ ಶ್ರಮಜೀವಿಗಳಿಂದ ಕರ್ನಾಟಕ ಅಭಿವೃದ್ಧಿಯ ಶಕ್ತಿಕೇಂದ್ರವಾಗಿದ್ದು, ಪಕ್ಷದ ಅಭಿವೃದ್ಧಿ ಕಾರ್ಯಸೂಚಿಯ ಆಧಾರದ ಮೇಲೆ ಬಿಜೆಪಿ ಮತ ಯಾಚಿಸಲಿದೆ. ಚುನಾವಣಾ ಆಯೋಗವು ರಾಜ್ಯದಲ್ಲಿ ಚುನಾವಣೆಯನ್ನು ಘೋಷಿಸಿದ ದಿನದಂದು ಕರ್ನಾಟಕ ಬಿಜೆಪಿ ಮಾಡಿದ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ ಪ್ರಧಾನಿ ಮೋದಿ ಈ ಹೇಳಿಕೆಗಳನ್ನು ನೀಡಿದ್ದಾರೆ.

BJP is committed to the development of Karnataka: PM Modi

ಮೇ 10 ರಂದು ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ. ಕರ್ನಾಟಕದ ಬೆಳವಣಿಗೆಯ ಪಯಣವನ್ನು ಮತ್ತಷ್ಟು ಹೆಚ್ಚಿಸಲು ಮತ್ತು ಬಡವರು, ಅಂಚಿನಲ್ಲಿರುವವರು ಮತ್ತು ದೀನದಲಿತರನ್ನು ಸಬಲೀಕರಣಗೊಳಿಸಲು ಬಿಜೆಪಿ ಬದ್ಧವಾಗಿದೆ. ನಮ್ಮ ಅಭಿವೃದ್ಧಿ ಕಾರ್ಯಸೂಚಿಯ ಆಧಾರದ ಮೇಲೆ ನಾವು ಜನರ ಆಶೀರ್ವಾದವನ್ನು ಪಡೆಯುತ್ತೇವೆ ಎಂದು ಪ್ರಧಾನಿ ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ ಚುನಾವಣೆಯಲ್ಲಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದೆ. ರಾಜ್ಯದಲ್ಲಿ ಕಮಲ ಅರಳುವ ದಿನಾಂಕ ನಿಗದಿ! ಸ್ಪಷ್ಟ ಬಹುಮತದ ಆಶೀರ್ವಾದ ಪಡೆಯಲು ಕನ್ನಡಿಗರು ಉತ್ಸುಕರಾಗಿದ್ದಾರೆ. ಪಕ್ಷವನ್ನು ಅಧಿಕಾರಕ್ಕೆ ತರಲು ಇಂದಿನಿಂದ ಹಗಲಿರುಳು ಶ್ರಮಿಸಲು ಕಾರ್ಯಕರ್ತರ ಪಡೆ ಸಿದ್ಧವಾಗಿದೆ. ಕರ್ನಾಟಕ ಗೆಲ್ಲುತ್ತದೆ ಎಂದು ಬಿಜೆಪಿ ಟ್ವೀಟ್‌ನಲ್ಲಿ ಹೇಳಿದೆ.

ರಾಜ್ಯದಲ್ಲಿ ಸುಮಾರು 5.21 ಕೋಟಿ ಮತದಾರರಿದ್ದು, 100 ವರ್ಷದ ದಾಟಿದ ಮತದಾರರ ಸಂಖ್ಯೆ 16,976 ಆಗಿದೆ. ಕರ್ನಾಟಕ ವಿಧಾನಸಭೆ 224 ಸ್ಥಾನಗಳನ್ನು ಹೊಂದಿದೆ. ಆಡಳಿತಾರೂಢ ಬಿಜೆಪಿ 119 ಶಾಸಕರನ್ನು ಹೊಂದಿದೆ, ಕಾಂಗ್ರೆಸ್ 75 ಮತ್ತು ಜನತಾ ದಳ 28 ಸ್ಥಾನಗಳನ್ನು ಹೊಂದಿದೆ.

BJP is committed to the development of Karnataka: PM Modi

ಇದೇ ಮಾರ್ಚ್‌ 25ರಂದು ಕರ್ನಾಟಕಕ್ಕೆ ಆಗಮಿಸಿದ್ದ ಮೋದಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಎಂದು ಮನವಿ ಮಾಡಿದ್ದರು. ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರವನ್ನು ಮರಳಿ ತರಲು ಕರ್ನಾಟಕ ಜನತೆ ಈಗಾಗಲೇ ಮನಸ್ಸು ಮಾಡಿದ್ದಾರೆ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಜಿಲ್ಲೆ ಕಲಬುರಗಿಯಲ್ಲಿ ನಡೆದ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ ಎಂದಿದ್ದರು.

ಅಮೆರಿಕ, ಜರ್ಮನಿ, ಫ್ರಾನ್ಸ್, ಚೀನಾ, ಜಪಾನ್, ಇಂಡೋನೇಷ್ಯಾ, ಆಫ್ರಿಕಾ ಸೇರಿದಂತೆ ವಿಶ್ವದ ಹಲವಾರು ರಾಷ್ಟ್ರಗಳ ಗಮನವನ್ನು ಹಿಂದೂಸ್ತಾನ್ ತನ್ನತ್ತ ಸೆಳೆಯುತ್ತಿರುವುದು ಮೋದಿಯಿಂದಲ್ಲ, ಲೋಕಸಭೆ ಚುನಾವಣೆಯಲ್ಲಿ ನಿಮ್ಮ ಮತದಿಂದ ಇಡೀ ದೇಶವೇ ಕರ್ನಾಟಕದತ್ತ ನೋಡುತ್ತಿದೆ. ಹಾಗಾಗಿ ನೀವು ಕರ್ನಾಟಕದಲ್ಲಿ ಸಂಪೂರ್ಣ ಬಹುಮತದೊಂದಿಗೆ ಬಿಜೆಪಿ ಸರ್ಕಾರವನ್ನು ತರಬೇಕು, ಇದರಿಂದ ನಾನು ನಿಮಗೆ ಉತ್ತಮವಾಗಿ ಸೇವೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದರು.

ನಮ್ಮ ಸರ್ಕಾರ ಅಧಿಕಾಕ್ಕೆ ಬಂದಿದ್ದರಿಂದ 40 ಲಕ್ಷ ರೈತರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್‌ನ ಲಾಭ ಆಗುತ್ತಿದೆ. ದಾವಣಗೆರೆ ರೈತರಿಗೂ ಇದರ ಲಾಭ ಸಿಕ್ಕಿದೆ. ನೀವು ಕೊಟ್ಟಿರುವ ಪ್ರತಿಯೊಂದು ಮತದಿಂದಲೇ ದೇಶ ದೇಶಗಳಲ್ಲಿಯೂ ಮೋದಿ ನಗಾರಿ ಬಾರಿಸುತ್ತಿದೆ. ಕರ್ನಾಟಕದಲ್ಲಿಯೂ ಇದಾಗಬೇಕಾದರೆ ನೀವೆಲ್ಲರೂ ಆಶೀರ್ವದಿಸಬೇಕು. ವಿಶ್ವಮಟ್ಟದಲ್ಲಿ ಭಾರತ ಖ್ಯಾತಿಯಾಗಲು ಕಾರಣ ನಾನಲ್ಲ, ನೀವು ಎಂದು ಹೇಳಿದ್ದರು.

ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ಬಗ್ಗೆ ಕಿಡಿಕಾರಿದ ಅವರು, ಹಿಮಾಚಲ ಪ್ರದೇಶದ ಜನರು ಕಾಂಗ್ರೆಸ್ ನೇತೃತ್ವದ ಸರ್ಕಾರವು ಸರ್ಕಾರದ ಮುಂದೆ ನೀಡಿದ ಭರವಸೆಗಳನ್ನು ಈಡೇರಿಸುವಂತೆ ಕೇಳುತ್ತಿದ್ದಾರೆ. ಮೂರು ತಿಂಗಳು ಕಳೆದರೂ ಸ್ವಯಂ ಉದ್ಯೋಗ ಯೋಜನೆ ಸೇರಿದಂತೆ ನೀಡಿದ ಯಾವುದೇ ಭರವಸೆ ಈಡೇರಿಸಿಲ್ಲ. ಹಾಗಾಗಿ ನಾವು ಕಾಂಗ್ರೆಸ್ ಪಕ್ಷವನ್ನು ನಂಬಲು ಸಾಧ್ಯವಿಲ್ಲ ಎಂದು ಟೀಕಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+