ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಯೋಜನೆ ರದ್ದು: ಡಿ ಕೆ ಶಿವಕುಮಾರ್ ಹೇಳಿದ್ದೇನು?
ಬೆಂಗಳೂರು, ನವೆಂಬರ್ 11: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಯೋಜನೆ ನಿಲ್ಲಲಿದೆ ಎಂಬ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಹೇಳಿದ್ದಾರೆ. ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ ರೂಪಿಸುತ್ತಿದೆ. ಹೀಗಾಗಿ ಜನರು ಜಾಗೃತರಾಗಿರಬೇಕು ಎಂದು ದೇವೇಗೌಡರು ಸಂದೇಶ ನೀಡಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ. ಶಿವಕುಮಾರ್, ನಮ್ಮ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ವಿರೋಧ ಪಕ್ಷದವರ ಹಣೆಯಲ್ಲಿ ಬರೆದಿಲ್ಲ. ನಮ್ಮ ತಾಯಂದಿರ ಬದುಕು ಹಾಗೂ ಸಂಸಾರ ಉತ್ತಮವಾಗಿ ಸಾಗಲಿ ಎಂದು ನಾವು ಗೃಹಲಕ್ಷ್ಮಿ ಹಣ ನೀಡುತ್ತಿದ್ದೇವೆ. ಇದನ್ನು ತಪ್ಪಿಸಲು ಬಿಜೆಪಿ ಹಾಗೂ ಜೆಡಿಎಸ್ ಹೊರಟಿದೆ. ಜನ ಹುಷಾರಾಗಿರಬೇಕು ಎಂದು ತಿಳಿಸಿದರು.

ಉಪಚುನಾವಣೆ ತಯಾರಿ ಬಗ್ಗೆ ಕೇಳಿದಾಗ, "ರಾಜ್ಯದ ಜನ ನಮ್ಮ ಗ್ಯಾರಂಟಿ ಯೋಜನೆಗಳು ಹಾಗೂ ಆಡಳಿತವನ್ನು ಒಪ್ಪಿದ್ದು, ಈ ಬಾರಿ ಉಪಚುನಾವನೇಯ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ. ಮೂರು ಕ್ಷೇತ್ರಗಲ್ಲಿ ಪ್ರಚಾರ ಮುಗಿಸಿದ್ದೇವೆ. ಬಿಜೆಪಿ ಏನೇ ತಂತ್ರ ಪ್ರಯೋಗಿಸಿದರೂ ಜನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದಂತೆ ಈ ಮೂರು ಕ್ಷೇತ್ರಗಳ ಚುನಾವಣೆಯಲ್ಲಿ ಮತ ಹಾಕಲಿದ್ದಾರೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅಬಕಾರಿ ಇಲಾಖೆಯಲ್ಲಿ ₹700 ಕೋಟಿ ವಸೂಲಿ ಬಗ್ಗೆ ಪ್ರಧಾನಿಗಳ ಆರೋಪದ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿ, ಇದು ಸುಳ್ಳು ಆರೋಪ, ಅವರನ್ನು ಯಾರೋ ದಾರಿತಪ್ಪಿಸಿದ್ದಾರೆ. ಈ ವಿಚಾರವಾಗಿ ಆರೋಪ ಸಾಬೀತುಪಡಿಸಿದರೆ ರಾಜಕೀಯ ತ್ಯಜಿಸುವುದಾಗಿ ಮುಖ್ಯಮಂತ್ರಿಗಳು ಬಹಿರಂಗ ಸವಾಲು ಹಾಕಿದ್ದಾರೆ. ಇದಕ್ಕಿಂತ ಬೇರೇನು ಬೇಕು? ಎಂದು ಹೇಳಿದರು.
ಕೋವಿಡ್ ಅಕ್ರಮ ವಿಚಾರದಲ್ಲಿ ನ್ಯಾ.ಕುನ್ಹಾ ಅವರ ಸಮಿತಿ ಸರ್ಕಾರದ ಏಜೆಂಟ್ ರಂತೆ ನಡೆದುಕೊಳ್ಳುತ್ತಿದೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಹೇಳಿಕೆ ಕುರಿತು ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿ, ಅವರ ಪರವಾಗಿ ವರದಿ ಕೊಟ್ಟರೆ ಎಲ್ಲವೂ ನ್ಯಾಯಬದ್ಧವಾಗಿರುತ್ತವೆ. ಅವರ ವಿರುದ್ಧವಾಗಿ ನೀಡುವ ವರದಿ ಬಗ್ಗೆ ಹೀಗೆ ಆರೋಪ ಮಾಡುತ್ತಾರೆ. ದ್ವೇಷ ರಾಜಕಾರಣ ಮಾಡುತ್ತಿರುವವರು ಬಿಜೆಪಿಯವರು. ಅವರು ಯಾವುದೇ ಆರೋಪ ಮಾಡಿಕೊಳ್ಳಲಿ ಎಂದು ಕಿಡಿಕಾರಿದರು.
ವಯನಾಡಿನ ಉಪಚುನಾವಣೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿ ಅವರು ಗೆಲ್ಲುವುದು ನಿಶ್ಚಿತ. ಅಲ್ಲಿ ಬೇರೆ ಪಕ್ಷಗಳ ನಾಯಕರು ಕೂಡ ಪ್ರಿಯಾಂಕಾ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದು, ಪ್ರಿಯಾಂಕಾ ಅವರನ್ನು ಸಂಸತ್ ಸದಸ್ಯೆಯಾಗಿ ನೋಡಲು ಬಯಸಿದ್ದಾರೆ. ಅವರು ಹಾಗೂ ರಾಹುಲ್ ಗಾಂಧಿ ಅವರು ಕ್ಷೇತ್ರದ ಅಭಿವೃದ್ಧಿ ಮಾಡಲಿದ್ದಾರೆ. ಅಲ್ಲಿನ ಉಪಚುನಾವಣೆ ಏಕಪಕ್ಷೀಯ ಸ್ಪರ್ಧೆಯಾಗಿದೆ ಎಂದು ತಿಳಿಸಿದರು.
ಶಿಗ್ಗಾವಿ ಕ್ಷೇತ್ರದ ಜನ ಕಳೆದ ನಾಲ್ಕು ಅವಧಿಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಗೆಲ್ಲಿಸಿದ್ದೀರಿ. ಕಳೆದ ಲೋಕಸಭೆ ಚುನಾವಣೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ವಿರುದ್ಧ ಸ್ಪರ್ಧೆ ಮಾಡಿದ್ದ ಯುವ ಅಭ್ಯರ್ಥಿಗೆ 8 ಸಾವಿರ ಮತಗಳ ಮುನ್ನಡೆ ನೀಡಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲು ಮುನ್ನುಡಿ ಬರೆದಿರುವ ನಿಮ್ಮೆಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ. ರಾಜಕಾರಣದಲ್ಲಿ ಯಾವುದೂ ಅಸಾಧ್ಯವಲ್ಲ. ಇಲ್ಲಿ ಯಾರೂ ಶಾಶ್ವತವಲ್ಲ. ಸೂರ್ಯ ಹುಟ್ಟಿದ ನಂತರ ಮುಳುಗುತ್ತಾನೆ. ಅನೇಕ ಚಕ್ರವರ್ತಿಗಳು ಮೇಲೆ ಕೆಳಗೆ ಆಗಿದ್ದಾರೆ.












Click it and Unblock the Notifications