'ಸಿದ್ದರಾಮೋತ್ಸವ ಡಿಕೆಶಿ ರಾಜಕೀಯ ಬೆಳವಣಿಗೆಗೆ ತೋಡುತ್ತಿರುವ ಗುಂಡಿ'
ಬೆಂಗಳೂರು, ಜುಲೈ 4: ಆಗಸ್ಟ್ ಮೂರರಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ 75ನೇ ಹುಟ್ಟುಹಬ್ಬದ ಅಂಗವಾಗಿ ದಾವಣಗೆರೆಯಲ್ಲಿ ಆಯೋಜಿಸಲು ಉದ್ದೇಶಿಸಲಾಗಿರುವ 'ಸಿದ್ದರಾಮೋತ್ಸವ'ದ ಬಗ್ಗೆ ಸ್ವಪಕ್ಷೀಯರಲ್ಲೇ ಒಮ್ಮತವಿಲ್ಲ ಎನ್ನುವುದಕ್ಕೆ ಕೆಲವೊಂದು ವಿದ್ಯಮಾನಗಳು ಸಾಕ್ಷಿಯಾಗಿವೆ.
ಸಿದ್ದರಾಮಯ್ಯ ಮತ್ತವರ ಗುಂಪಿನ ಶಕ್ತಿ ಪ್ರದರ್ಶನಕ್ಕೆ ವೇದಿಕೆಯಾಗಿ ಈ ಕಾರ್ಯಕ್ರಮ ರೂಪುಗೊಳ್ಳುವ ಸಾಧ್ಯತೆಯಿದೆ. ಇದನ್ನರಿತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ಸಿನಲ್ಲಿ ವ್ಯಕ್ತಿ ಪೂಜೆಗಿಂತ ಪಕ್ಷ ಮುಖ್ಯ ಎಂದು ಪರೋಕ್ಷವಾಗಿ ಕಾರ್ಯಕ್ರಮದ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.
ಮಾಜಿ ಸಚಿವ ಮತ್ತು ಸಿದ್ದರಾಮಯ್ಯನವರ ಆಪ್ತ ಬಣದಲ್ಲಿ ಗುರುತಿಸಿಕೊಳ್ಳುವ ಆರ್.ವಿ.ದೇಶಪಾಂಡೆ ಈ ಕಾರ್ಯಕ್ರಮದ ಗೌರವಾಧ್ಯಕ್ಷರಾಗಿದ್ದಾರೆ. ಜೊತೆಗೆ, ಈ ಕಾರ್ಯಕ್ರಮಕ್ಕೆ ಪಕ್ಷದ ಹೈಕಮಾಂಡ್ ರಾಹುಲ್ ಗಾಂಧಿ ಕೂಡಾ ಆಗಮಿಸಲಿದ್ದಾರೆ. ಈ ವಿಚಾರವನ್ನು ಖುದ್ದು ಸಿದ್ದರಾಮಯ್ಯನವರೇ ಖಚಿತ ಪಡಿಸಿದ್ದಾರೆ.
ಸಿದ್ದರಾಮೋತ್ಸವವನ್ನು ಇಟ್ಟುಕೊಂಡು ಬಿಜೆಪಿಯ ಐಟಿ ಸೆಲ್, ಕೆಪಿಸಿಸಿ ಅಧ್ಯಕ್ಷರ ಕಾಲೆಳೆದಿದೆ. ಅದು ಬರೀ ಸಿದ್ದರಾಮೋತ್ಸವವನ್ನು ಅದು ನಿಮ್ಮ ರಾಜಕೀಯ ಬೆಳವಣಿಗೆಗೆ ತೋಡುತ್ತಿರುವ ಗುಂಡಿ ಎಂದು ಟ್ವೀಟ್ ಮಾಡಿದೆ.

ತಾನೇ ಮುಂದಿನ ಮುಖ್ಯಮಂತ್ರಿ ಎಂಬ ಹೇಳಿಕೆ ಕೊಡಿಸುತ್ತಿರುವ ಸಿದ್ದರಾಮಯ್ಯ
"ಇದುವರೆಗೆ ತಮ್ಮ ಪಟಾಲಂ ಮೂಲಕ ಸಿದ್ದರಾಮಯ್ಯ "ತಾನೇ ಮುಂದಿನ ಮುಖ್ಯಮಂತ್ರಿ" ಎಂಬ ಹೇಳಿಕೆ ಕೊಡಿಸುತ್ತಿದ್ದರು. ಈಗ ನೇರವಾಗಿ "ನಾನೇ ಮುಖ್ಯಮಂತ್ರಿ ಆಗಬೇಕೆಂದು ನನ್ನ ರಾಜಕೀಯ ಗುರುಗಳು ಆಶಿಸಿದ್ದರು" ಎಂದು ಹೇಳುವ ಮೂಲಕ ಕುರ್ಚಿಯ ಆಸೆ ಬಿಚ್ಚಿಟ್ಟಿದ್ದಾರೆ. ಹಾಗಾದರೆ ಬೆವರು, ಬಂಡವಾಳ ಹೂಡುತ್ತಿರುವ ಡಿಕೆಶಿ ಏನು ಮಾಡಬೇಕು?" ಎಂದು ಬಿಜೆಪಿಯ ಕರ್ನಾಟಕ ಐಟಿ ಘಟಕ ಡಿ.ಕೆ.ಶಿವಕುಮಾರ್ ಅವರ ಕಾಲೆಳೆದಿದೆ.

ಕೆಪಿಸಿಸಿ ಅಧ್ಯಕ್ಷರು ವ್ಯಕ್ತಿಗಿಂತ ಪಕ್ಷ ಮುಖ್ಯ ಎನ್ನುತ್ತಿದ್ದಾರೆ
"ಚುನಾವಣೆ ಹತ್ತಿರ ಬರುತ್ತಿದ್ದಂತೆ @siddaramaiah ಅವರಿಗೆ ಸಿಎಂ ಕುರ್ಚಿಯ ಕನಸು ಹೆಚ್ಚಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷರು ವ್ಯಕ್ತಿಗಿಂತ ಪಕ್ಷ ಮುಖ್ಯ ಎನ್ನುತ್ತಿದ್ದಾರೆ. ನಾನಿಲ್ಲದೆ ಕಾಂಗ್ರೆಸ್ ಇಲ್ಲ ಎಂದು ಸಿದ್ದರಾಮಯ್ಯ ಎನ್ನುತ್ತಿದ್ದಾರೆ. ಆದರೆ ರಾಜ್ಯದ ಜನತೆ ಕಾಂಗ್ರೆಸ್ ಪಕ್ಷವನ್ನೇ ತಿರಸ್ಕರಿಸಿದ್ದಾರೆ". "ತಾವೇ ನಿರ್ದೇಶಿಸುತ್ತಿರುವ ಚಲನಚಿತ್ರಕ್ಕೆ ಸಿದ್ದರಾಮಯ್ಯ ನಾಯಕರಾಗಲು ಹೊರಟಿದ್ದಾರೆ.
ಸಿದ್ದರಾಮೊತ್ಸವ ಎನ್ನುವುದು ಸಿದ್ದರಾಮಯ್ಯ ಬ್ಯಾನರ್ ಅಡಿ ತಯಾರಾಗುತ್ತಿರುವ ಚಿತ್ರ. ಈ ಚಿತ್ರದ ಮೂಲಕ ತಾವೇ ಮುಂದಿನ ಸಿಎಂ ಎಂಬ ಸಂದೇಶ ನೀಡುವುದು ಖಚಿತ. ಶ್ರಮ ಡಿಕೆಶಿ ಅವರದ್ದು, ಅಧಿಕಾರ ಮಾತ್ರ ಸಿದ್ದರಾಮಯ್ಯಗೆ!" ಎಂದು ರಾಜ್ಯ ಬಿಜೆಪಿ ಐಟಿ ಘಟಕ ಮಾಡಿರುವ ಟ್ವೀಟ್.

ಡಿಕೆಶಿಯ ರಾಜಕೀಯ ಬೆಳವಣಿಗೆಗೆ ತೋಡುತ್ತಿರುವ ಗುಂಡಿ
"ಕೆಪಿಸಿಸಿ ಅಧ್ಯಕ್ಷರ ವಿರೋಧ ನಡುವೆಯೂ ಸಿದ್ದರಾಮೋತ್ಸವ ನಡೆಯಲಿದೆ ಎಂದಾದರೆ ಡಿಕೆಶಿ ಇದ್ದೂ ಇಲ್ಲದಂತಾಗಿದ್ದಾರೆ. ಸಿದ್ದರಾಮೋತ್ಸವ ಕೇವಲ ಸಿದ್ದರಾಮಯ್ಯರ ಜನ್ಮದಿನೋತ್ಸವವಲ್ಲ. ಅದು ಡಿಕೆಶಿಯ ರಾಜಕೀಯ ಬೆಳವಣಿಗೆಗೆ ತೋಡುತ್ತಿರುವ ಗುಂಡಿ. ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿರುವ @DKShivakumar ಹಲ್ಲಿಲ್ಲದ ಹಾವು!" ಎಂದು ನೇರವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಡಿ.ಕೆ.ಶಿವಕುಮಾರ್ ಅವರ ರಾಜಕೀಯ ಭವಿಷ್ಯಕ್ಕೆ ತೊಂದರೆ ತಂದೊಡ್ಡಲಿದ್ದಾರೆ ಎಂದು ಬಿಜೆಪಿಯ ಐಟಿ ಘಟಕ ಟೀಕಿಸಿದೆ.

ರಾಜ್ಯ ಕಾಂಗ್ರೆಸ್ಸಿಗೆ ಅಧ್ಯಕ್ಷ ಯಾರು ಎನ್ನುವುದೇ ಈಗ ಯಕ್ಷ ಪ್ರಶ್ನೆ
"ಕನಕಪುರದ ಬಂಡೆಯೊಂದು ಪಕ್ಷ ಪೂಜೆಯೇ ಅಂತಿಮ, ವ್ಯಕ್ತಿ ಪೂಜೆಯಲ್ಲ ಎಂದು ಗುಡುಗುತ್ತಿದೆ. ಆ ಬಂಡೆಗೆ ಡೈನಾಮೆಟ್ ಇಡಲು ಸಿದ್ದರಾಮಯ್ಯ ಸಜ್ಜಾಗಿದ್ದಾರೆ. ಸಿದ್ದರಾಮೋತ್ಸವದ ಬಳಿಕ ಕನಕಪುರದ ಬಂಡೆ ಛಿದ್ರವಾಗಲಿದೆಯೇ?". "ರಾಜ್ಯ ಕಾಂಗ್ರೆಸ್ಸಿಗೆ ಅಧ್ಯಕ್ಷ ಯಾರು ಎನ್ನುವುದೇ ಈಗ ಯಕ್ಷ ಪ್ರಶ್ನೆ. ನನ್ನ ಉತ್ಸವಕ್ಕೆ ರಾಹುಲ್ ಬರುತ್ತಾರೆ ಎನ್ನುವ ಸಿದ್ದರಾಮಯ್ಯ, ರಾಹುಲ್ ಬರುವ ವಿಷಯವೇ ಗೊತ್ತಿಲ್ಲ ಎನ್ನುತ್ತಿರುವ ಡಿಕೆಶಿ. ಡಿಕೆಶಿಗೆ ಮಾಹಿತಿ ಇಲ್ಲದೆ ರಾಹುಲ್ ಬರುತ್ತಾರೆಯೇ? ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆ ಸುಳಿವೇ ಇದು?" ಎಂದು ಬಿಜೆಪಿ ಪ್ರಶ್ನಿಸಿದೆ.
-
Tamilnadu Election 2026: ಮಹಿಳೆಯರಿಗೆ 2 ಸಾವಿರ: ತಮಿಳುನಾಡಿನ ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆ ಬಿಡುಗಡೆ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ












Click it and Unblock the Notifications