Get Updates
Get notified of breaking news, exclusive insights, and must-see stories!

ಚನ್ನಪಟ್ಟಣ: ಕಾಂಗ್ರೆಸ್‌ ಅಭ್ಯರ್ಥಿ ಕುರಿತು ಡಿಕೆ ಬದ್ರರ್ಸ್ ನಡೆ ನಿಗೂಢ; ಕಾದು ನೋಡುವ ತಂತ್ರ ಅನುಸರಿಸಿದ ಕಮಲ-ದಳ ನಾಯಕರು

ಬೆಂಗಳೂರು, ಜೂನ್‌ 27: ಚನ್ನಪಟ್ಟಣದ ಜೆಡಿಎಸ್‌ ಶಾಸಕ ಎಚ್‌ಡಿ ಕುಮಾರಸ್ವಾಮಿ ಮಂಡ್ಯ ಸಂಸದರಾಗಿ ಕೇಂದ್ರ ಸಚಿವರಾಗಿರುವ ಹಿನ್ನೆಲೆಯಲ್ಲಿ ಈ ಕ್ಷೇತ್ರಕ್ಕೆ ಯಾವ ಕ್ಷಣದಲ್ಲಿ ಬೇಕಾದರೂ ಬೈ ಎಲೆಕ್ಷನ್‌ ಘೋಷಣೆಯಾಗಬಹುದು. ಚನ್ನಪಟ್ಟಣದಲ್ಲಿ ಗೆಲುವು ಸಾಧಿಸಲು ರಾಜಕೀಯ ನಾಯಕರು ಭರ್ಜರಿ ತಯಾರಿ ನಡೆಸಿದ್ದು, ಚನ್ನಪಟ್ಟಣದ ರಾಜಕೀಯಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌ ಎಂಟ್ರಿ ಕೊಟ್ಟಿರುವುದು ಕಮಲ-ದಳ ನಾಯಕರಿಗೆ ನಿದ್ದೆಗೆಡಿಸುವಂತೆ ಮಾಡಿದೆ.

ಚನ್ನಪಟ್ಟಣದ ರಾಜಕೀಯಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌ ಎಂಟ್ರಿ ಕೊಟ್ಟಿದ್ದು, ಕನಕಪುರ ಬಂಡೆ ಡಿಕೆ ಶಿವಕುಮಾರ್‌ ಅವರೇ ಚನ್ನಪಟ್ಟಣದ ಕಾಂಗ್ರೆಸ್‌ ಅಭ್ಯರ್ಥಿ ಎಂದು ಹೇಳಲಾಗಿತ್ತು. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನಾಂಕ ಇನ್ನೂ ಘೋಷಣೆಯಾಗದಿದ್ದರೂ ಮತ್ತು ಪ್ರಮುಖ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ಇನ್ನೂ ಯಾವುದೇ ಚರ್ಚೆ ನಡೆಸದಿದ್ದರೂ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈ ಕ್ಷೇತ್ರದ ಮೇಲೆ ತೀವ್ರ ಆಸಕ್ತಿ ತೋರಿಸಲು ಪ್ರಾರಂಭಿಸಿದ ನಂತರ ಎಲ್ಲರ ಕಣ್ಣು ಕ್ಷೇತ್ರದತ್ತ ನೆಟ್ಟಿದೆ.

BJP-JDS alliance closely watching DKS move on Channapatna expect him to field a surprise candidate

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಆರಂಭದಲ್ಲಿ ಈ ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾದರು ಆದರೆ, 48 ಗಂಟೆಯ ನಂತರ ತಮ್ಮ ನಿಲುವನ್ನು ಬದಲಾಯಿಸಿದರು, ಕೆಪಿಸಿಸಿ ಅಧ್ಯಕ್ಷರ ಕುಟುಂಬದ ಯಾರಾದರೂ ಇಲ್ಲಿಂದ ಚುನಾವಣಾ ಕಣಕ್ಕೆ ಪ್ರವೇಶಿಸಬಹುದು ಎಂದು ಬಿಜೆಪಿ-ಜೆಡಿ ಎಸ್ ಮೈತ್ರಿ ನಾಯಕರು ಲೆಕ್ಕಾಚಾರವನ್ನ ಹಾಕಿಕೊಂಡಿದ್ದಾರೆ.

ಡಿ ಕೆ ಶಿವಕುಮಾರ್‌ ಹಾಗೂ ಡಿ ಕೆ ಸುರೇಶ್‌ ಚನ್ನಪಟ್ಟಣ ಕ್ಷೇತ್ರಕ್ಕೆ ಅಚ್ಚರಿ ಅಭ್ಯರ್ಥಿಯನ್ನ ಕಣಕ್ಕಿಳಿಸುವ ಕುರಿತು ರಾಜ್ಯ ರಾಜಕೀಯದಲ್ಲಿ ಚರ್ಚೆಯಾಗುತ್ತಿದ್ದು, ಡಿ ಕೆ ಶಿವಕುಮಾರ್‌ ಅವರ ನಡೆಯ ಮೇಲೆ ಕಮಲ-ದಳ ನಾಯಕರು ಕಣ್ಣು ಇಟ್ಟಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿಯ ಘೋಷಣೆಯ ಬಳಿಕ ನಮ್ಮ ಅಭ್ಯರ್ಥಿಯನ್ನ ಅಂತಿಮಗೊಳಿಸಬೇಕು ಎಂದು ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸುವ ಪ್ರಮುಖ ಆಕಾಂಕ್ಷಿಯಾಗಿರುವ ಬಿಜೆಪಿ ಮುಖಂಡ ಸಿಪಿ ಯೋಗೇಶ್ವರ್ ಅವರು ದೆಹಲಿಯಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವುದು ಸ್ಪಷ್ಟವಾಗಿದೆ. ಕುಮಾರಸ್ವಾಮಿ ಅವರೊಂದಿಗಿನ ಭೇಟಿಯು ಜೆಡಿಎಸ್ ಟಿಕೆಟ್‌ನಲ್ಲಿ ಸ್ಪರ್ಧಿಸುವ ಸಾಧ್ಯತೆಯೂ ಸೇರಿದಂತೆ ಊಹಾಪೋಹಗಳನ್ನು ಹುಟ್ಟಿಕೊಂಡಿದೆ. ಇನ್ನೂ ಜೆಡಿಎಸ್‌ ಪಕ್ಷದಿಂದ ಚನ್ನಪಟ್ಟಣದಿಂದ ಸಿ ಪಿ ಯೋಗೇಶ್ವರ್‌ ಅವರು ಸ್ಪರ್ಧೆ ನಡೆಸುತ್ತಾರಾ ಎಂಬ ಪ್ರಶ್ನೆ ಸಿ ಪಿ ಯೋಗೇಶ್ವರ್‌ ಅವರು ಉತ್ತರಿಸಿದ್ದು, ನಮ್ಮ ನಾಯಕರು ಏನು ಹೇಳುತ್ತಾರೋ ಅದನ್ನು ನಾವು ಪಾಲಿಸಬೇಕು ಎಂದು ಹೇಳಿದರು.

ಉಪಚುನಾವಣೆಯ ಕುರಿತು ಎರಡೂ ಪಕ್ಷಗಳು ಇನ್ನೂ ಯಾವುದೇ ಔಪಚಾರಿಕ ಚರ್ಚೆಗಳನ್ನು ನಡೆಸದ ಕಾರಣ ಯಾವುದೇ ತೀರ್ಮಾನಕ್ಕೆ ಬಂದಿಲ್ಲ. ಸ್ಪರ್ಧೆ ಮಾಡುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಹೆಚ್‌ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ ಎಂದು ಸಿ ಪಿ ಯೋಗೇಶ್ವರ್‌ ತಿಳಿಸಿದ್ದು, ಉಮೇದುವಾರಿಕೆಗೆ ಸಂಬಂಧಿಸಿದಂತೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ನಿಖಿಲ್ ಅವರನ್ನು ಕಣಕ್ಕಿಳಿಸಿದರೆ ನಾನು ಅವರನ್ನು ಬೆಂಬಲಿಸುತ್ತೇನೆ. ಈ ಉಪಚುನಾವಣೆಯಲ್ಲಿ ನಾವು ಗೆಲ್ಲಲೇಬೇಕು. ಎರಡು ದಿನಗಳ ನಂತರ ದೆಹಲಿಗೆ ಹಿಂತಿರುಗಿ ಬಿಜೆಪಿ ಕೇಂದ್ರ ನಾಯಕರನ್ನು ಭೇಟಿ ಮಾಡುವುದಾಗಿ ಯೋಗೇಶ್ವರ್ ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+