ಬಿಜೆಪಿ- ಜೆಡಿಎಸ್ ಒಳ ಒಪ್ಪಂದ: ಸಿದ್ದರಾಮಯ್ಯ

ಬೆಂಗಳೂರು, ನ.27: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಮತ್ತ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಡಿ.10ರಂದು 25 ಕ್ಷೇತ್ರಗಳಿಗೆ ನಡೆಯುವ ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ನಾವು ಯಾವ ಕ್ಷೇತ್ರದಲ್ಲೂ ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳಲ್ಲ. ಜೆಡಿಎಸ್ ಜೊತೆಗೆ ಹೊಂದಾಣಿಕೆ ಸಾಧ್ಯವಿಲ್ಲ. ನಮ್ಮ ಬೆಂಬಲಿತರಿಗೆ ಪಕ್ಷದ ಅಭ್ಯರ್ಥಿಗೆ ಸಿಂಗಲ್ ವೋಟ್ ಹಾಕಲು ಸೂಚನೆ ಕೊಟ್ಟಿದ್ದೇವೆ ಎಂದು ಅವರು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಬಿಜೆಪಿ - ಜೆಡಿಎಸ್ ನಡುವೆ ಒಳ ಒಪ್ಪಂದ ಇದ್ದೇ ಇದೆ. ಈ ಚುನಾವಣೆಯಲ್ಲಿ ಮಾತ್ರ ಅಲ್ಲ. ವಿಧಾನಸಭೆಯ ಎರಡು ಕ್ಷೇತ್ರಗಳಿಗೆ ಇತ್ತೀಚೆಗೆ ನಡೆದ ಉಪ ಚುನಾವಣೆ ಸೇರಿದಂತೆ ಎಲ್ಲ ಚುನಾವಣೆಗಳಲ್ಲೂ ಅವರಿಬ್ಬರೂ ಒಳ ಒಪ್ಪಂದ ಮಾಡಿಕೊಂಡೇ ಚುನಾವಣೆ ಮಾಡಿದ್ದಾರೆ ಎಂದು ಆರೋಪಿಸಿದರು

bjp- jds alliance in council election- Siddaramaiah

ಲಖನ್ ಜಾರಕಿಹೊಳಿ ಇರುವುದು ಬಿಜೆಪಿ ಪಕ್ಷದಲ್ಲಿ. ಆದರೆ, ಈಗ ಅವರು ಬೆಳಗಾವಿ ವಿಧಾನ ಪರಿಷತ್ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿದ್ದಾರೆ. ಲಖನ್ ಪಕ್ಷೇತರವಾಗಿ ಕಣಕ್ಕೆ ಇಳಿದಿರುವುದರಿಂದ ಬಿಜೆಪಿಗೆ ವ್ಯತ್ಯಾಸ ಆಗಲಿದೆ. ನಮ್ಮವರು ನಮ್ಮ ಅಭ್ಯರ್ಥಿ ಪರ ಕೆಲಸ ಮಾಡುತ್ತಿದ್ದಾರೆ.

ಕೊಡಗಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆಯೇ ನೇರ ಹಣಾಹಣಿ ಇದೆ. ನಾವು ಕಳೆದ ಬಾರಿ ಅಲ್ಪ ಮತದಿಂದ ಸೋತಿದ್ದೇವೆ. ಈ ಬಾರಿ ನಮ್ಮ ಅಭ್ಯರ್ಥಿ ಗೆಲ್ಲಿಸಲು ಎಲ್ಲ ಪ್ರಯತ್ನ ಮಾಡುತ್ತೇವೆ. ಹಾಸನದಲ್ಲಿ ಮಾಜಿ ಸಚಿವ ಎ.ಮಂಜು ಕಾಂಗ್ರೆಸ್ ಸೇರಲ್ಲ‌. ಅವರು ಕಾಂಗ್ರೆಸ್‌ಗೆ ಬರುವುದಾಗಿಯೂ ಕೇಳಿಲ್ಲ. ಬಂದರೂ ನಾವು ಸೇರಿಸಿಕೊಳ್ಳಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕಾಂಗ್ರೆಸ್ ಅವಧಿಯ ಟೆಂಡರ್‌ಗಳೂ ತನಿಖೆಯಾಗಲಿ:

ಕಾಂಗ್ರೆಸ್ ಸರ್ಕಾರದ ಅವದಿಯಲ್ಲಿ ನಡೆದಿರುವ ಟೆಂಡರ್ ಗಳ ಬಗ್ಗೆಯೂ ತನಿಖೆ ನಡೆಯಲಿ. ಇದಕ್ಕೆ ನಮ್ಮ ಆಕ್ಷೇಪ ಏನನೂ ಇಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯ ಟೆಂಡರ್ ಗಳ ಬಗ್ಗೆಯೂ ತನಿಖೆ ನಡೆಸುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಉಪ್ಪು ತಿಂದವರು ನೀರು ಕುಡಿಯಲೇಬೇಕು. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆಯಾಗಲಿ. ಅವರು ಯಾವುದೇ ಪಕ್ಷದವರಾಗಲಿ ಎಂದು ಹೇಳಿದರು.

ನ್ಯಾಯಮೂರ್ತಿಗಳಿಂದ ತನಿಖೆಯಾಗಲಿ

ಸರ್ಕಾರಿ ಟೆಂಡರ್‌ಗಳಲ್ಲಿ ನಡೆಯುತ್ತಿರುವ ಅಕ್ರಮದ ಬಗ್ಗೆ ಗುತ್ತಿಗೆದಾರರ ಸಂಘದವರು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಆದರೆ, ಆದರೆ, ಅವರೂ ಸಹ ಇದುವರೆಗೂ ಈ ವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ರಾಜ್ಯ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಲಾಗಿದೆ. ಪ್ರಧಾನಿ ಮೋದಿ ಪ್ರಾಮಾಣಿಕರಾಗಿದ್ದರೆ ಬೊಮ್ಮಾಯಿ ಸರ್ಕಾರವನ್ನು ಸರ್ಕಾರ ವಜಾ ಮಾಡಲಿ ಎಂದರು.

ಜಲಸಂಪನ್ಮೂಲ ಇಲಾಖೆಯಲ್ಲಿನ ಟೆಂಡರ್‌ಗ ಅಕ್ರಮದ ತನಿಖೆಗೆ ಬಗ್ಗೆ ಆ ಇಲಾಖೆಯ ಪ್ರಧಾನ ಕಾರ್ಯದರ್ಶಿಯನ್ನೇ ನೇಮಿಸಲಾಗಿದೆ. ಅವರೇನು ತನಿಖೆ ಮಾಡಲು ಸಾಧ್ಯ? ಇದರಿಂದ ಸತ್ಯ ಹೊರಬರಲು ಸಾಧ್ಯವೇ? ಸುಪ್ರೀಂ ಕೋರ್ಟ್ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ಮಾಡಬೇಕು ಎಂದು ಆಗ್ರಹಿಸಿದರು.

Recommended Video

      Lockdown ವಿಚಾರವಾಗಿ ಸುಳ್ಳು ಸುದ್ದಿ ಹರಡಬೇಡಿ - Dr. Sudhakar | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+