ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಾಯುಕ್ತ ಪದಚ್ಯುತಿಗೆ ಒಂದಾದ ಬಿಜೆಪಿ, ಜೆಡಿಎಸ್

|
Google Oneindia Kannada News

ಬೆಂಗಳೂರು, ನವೆಂಬರ್ 17 : ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರರಾವ್ ಅವರನ್ನು ಪದಚ್ಯುತಿಗೊಳಿಸುವಂತೆ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಸಹಿ ಸಂಗ್ರಹಿಸಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಮತ್ತು ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರಿಗೆ ಮನವಿ ಸಲ್ಲಿಸಿದವು.

ಬಿಜೆಪಿಯ ಎಲ್ಲಾ 46 ಹಾಗೂ ಜೆಡಿಎಸ್‌ನ 37 ಶಾಸಕರು ಸಹಿ ಹಾಕಿ ಲೋಕಾಯುಕ್ತ ನ್ಯಾ.ಭಾಸ್ಕರ ರಾವ್ ಪದಚ್ಯುತಿಗೆ ಸಂಬಂಧಿಸಿದಂತೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು 'ಸದನದಲ್ಲಿ ಎಲ್ಲಾ ಶಾಸಕರ ಒಪ್ಪಿಗೆ ಪಡೆದು ತೀರ್ಮಾನ ಕೈಗೊಳ್ಳಲಾಗುವುದು' ಎಂದು ಹೇಳಿದ್ದಾರೆ. [ಲೋಕಾಯುಕ್ತರ ಪದಚ್ಯುತಿ, ಕಾನೂನು ಇಲಾಖೆ ಹೇಳುವುದೇನು?]

assembly session

ಲೋಕಾಯುಕ್ತರನ್ನು ಪದಚ್ಯುತಿಗೊಳಿಸುವ ನಿರ್ಣವನ್ನು ಮಂಡಿಸಬೇಕಾದರೆ 50 ಶಾಸಕರು ಅಥವ 33 ವಿಧಾನಪರಿಷತ್ ಸದಸ್ಯರ ಸಹಿ ಇರುವ ಪತ್ರ ಬೇಕು. ಕರ್ನಾಟಕ ಲೋಕಾಯುಕ್ತ ಕಾಯ್ದೆ 1984ರ ಸೆಕ್ಷನ್ 6ರ ಪ್ರಕಾರ ಲೋಕಾಯುಕ್ತರನ್ನು ದುರ್ವರ್ತನೆ ಮತ್ತು ಅಸಮರ್ಥತೆ ಆಧಾರದ ಮೇಲೆ ಪದಚ್ಯುತಗೊಳಿಸಬಹುದಾಗಿದೆ. [ಕರ್ನಾಟಕ ಲೋಕಾಯುಕ್ತದಲ್ಲಿ ಇದೇನಿದು ಹಗರಣ?]

ಮನವಿಯಲ್ಲೇನಿದೆ? : ನ್ಯಾ.ಭಾಸ್ಕರರಾವ್ ಅವರ ಪುತ್ರ ಅಶ್ವಿನ್‌ರಾವ್ ವಿರುದ್ಧ ಭ್ರಷ್ಟಾಚಾರದ ಆರೋಪ ಮೇಲ್ನೋಟಕ್ಕೆ ಸಾಬೀತಾಗಿದೆ. ಎಫ್‌ಐಆರ್ ದಾಖಲಾಗಿದೆ. ನೈತಿಕ ಹೊಣೆ ಹೊತ್ತು ಭಾಸ್ಕರರಾವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಕಚೇರಿಗೆ ಬರದೇ ಸರಣಿ ರಜೆಗಳನ್ನು ಪಡೆಯುತ್ತಿರುವ ಲೋಕಾಯುಕ್ತರನ್ನು ಪದಚ್ಯುತಿಗೊಳಿಸಬೇಕು ಎಂಬುದು ಒತ್ತಾಯವಾಗಿದೆ.

English summary
BJP and the JD(S) on November 17th jointly submitted a petition to Speaker of the Karnataka Assembly and Chairman of council to removal of lokayukta Bhaskar Rao.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X