ಚಿತ್ರಗಳು : ಬಿಜೆಪಿ, ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

ಬೆಂಗಳೂರು, ಮಾ. 18 : ದಕ್ಷ ಐಎಎಸ್ ಅಧಿಕಾರಿ ಡಿಕೆ ರವಿ ಮಣ್ಣಲ್ಲಿ ಮಣ್ಣಾಗಿ ಹೋಗಿದ್ದಾರೆ. ಇತ್ತ ಅವರ ನಿಗೂಢ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ವಿಧಾನಸಭೆ ಮತ್ತು ವಿಧಾನ ಷರಿಷತ್ತಿನಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸದಸ್ಯರು ಆಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. [ಈ ಸಾವು ನ್ಯಾಯವೇ ಮತ ಹಾಕಿ]

ಮಂಗಳವಾರ ಸಂಜೆ ವಿಧಾನಸಭೆ ಮತ್ತು ವಿಧಾನಪರಿಷತ್ತಿನಲ್ಲಿ ಡಿಕೆ ರವಿ ಅವರ ನಿಗೂಢ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಜೆಡಿಎಸ್ ಮತ್ತು ಬಿಜೆಪಿ ಸದಸ್ಯರು ಧರಣಿ ನಡೆಸಿದರು. ಇದರಿಂದಿಂದ ಉಭಯ ಸದನಗಳ ಕಲಾಪವನ್ನು ಬುಧವಾರಕ್ಕೆ ಮುಂದೂಡಲಾಯಿತು. [ದಕ್ಷ ಅಧಿಕಾರಿಗೆ ಕಂಬನಿ ವಿದಾಯ]

ಕಲಾಪ ಮುಂದೂಡುತ್ತಿದ್ದಂತೆ ತಮ್ಮ ಬೇಡಿಕೆ ಈಡೇರಿಸದಿದ್ದರೆ ಅಹೋರಾತ್ರಿ ಧರಣಿ ನಡೆಸುವುದಾಗಿ ವಿಧಾನಸಭೆಯಲ್ಲಿ ಆರ್.ಅಶೋಕ್ ಪ್ರಕಟಿಸಿದರು. ವಿಧಾನಪರಿಷತ್ತಿನಲ್ಲಿಯೂ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಅಹೋರಾತ್ರಿ ಧರಣಿ ಆರಂಭವಾಯಿತು.[ಮಂಗಳವಾರ ನಡೆದ ಘಟನಾವಳಿಗಳು]

ಧರಣಿ ನಿರತ ಶಾಸಕರಿಗೆ ಸರ್ಕಾರದ ವತಿಯಿಂದಲೇ ರಾತ್ರಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಪರಿಷತ್ತಿನೊಳಗೆ ದೇಶಭಕ್ತಿಗೀತೆಗಳನ್ನ ಹಾಡಿದ ಸದಸ್ಯರು ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಅಹೋರಾತ್ರಿ ಧರಣಿ ನಡೆಸಿದರು. ಜೆಡಿಎಸ್ ಸದಸ್ಯರು ಬಿಜೆಪಿಯೊಂದಿಗೆ ಕೈಜೋಡಿಸಿದರು. ಬುಧವಾರದ ಕಲಾಪದಲ್ಲಿ ಈ ಕುರಿತು ಚರ್ಚೆ ನಡೆಯಲಿದೆ. ಧರಣಿಯ ಚಿತ್ರಗಳು ಇಲ್ಲಿವೆ

ಬಿಜೆಪಿ, ಜೆಡಿಎಸ್‌ ಸದಸ್ಯರಿಂದ ಅಹೋರಾತ್ರಿ ಧರಣಿ

ಬಿಜೆಪಿ, ಜೆಡಿಎಸ್‌ ಸದಸ್ಯರಿಂದ ಅಹೋರಾತ್ರಿ ಧರಣಿ

ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ವಿಧಾನಸಭೆ ಮತ್ತು ವಿಧಾನಪರಿಷತ್ತಿನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಡಿಕೆ ರವಿ ಅವರ ನಿಗೂಢ ಸಾವಿನ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿರುವ ಸರ್ಕಾರದ ಕ್ರಮವನ್ನು ಖಂಡಿಸಿದ್ದಾರೆ.

ಸಿಬಿಐ ತನಿಖೆಗೆ ವಹಿಸಲು ಒತ್ತಾಯ

ಸಿಬಿಐ ತನಿಖೆಗೆ ವಹಿಸಲು ಒತ್ತಾಯ

ದಕ್ಷ ಐಎಎಸ್ ಅಧಿಕಾರಿ ಡಿಕೆ ರವಿ ಅವರ ನಿಗೂಢ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ವಿಧಾನಸಭೆ ಮತ್ತು ಷರಿಷತ್ತಿನಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸದಸ್ಯರು ಆಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.

ವಿಫಲವಾಯಿತು ಮುಖ್ಯಮಂತ್ರಿ, ಸ್ಪೀಕರ್ ಸಂಧಾನ

ವಿಫಲವಾಯಿತು ಮುಖ್ಯಮಂತ್ರಿ, ಸ್ಪೀಕರ್ ಸಂಧಾನ

ವಿಧಾನಸಭೆ ಮತ್ತು ವಿಧಾನ ಷರಿಷತ್ತಿನಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸದಸ್ಯರು ಆಹೋರಾತ್ರಿ ಧರಣಿ ನಡೆಸದಂತೆ ಸ್ಪೀಕರ್ ಕಾಗೋಡು ತಿಮ್ಮಪ್ಪ, ಪರಿಷತ್ ಸಭಾನಾಯಕ ಎಸ್.ಆರ್.ಪಾಟೀಲ್, ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ ಸಂಧಾನ ಸಭೆಗಳು ವಿಫಲವಾದವು.

ಶಾಸಕರಿಗೆ ಸರ್ಕಾರದಿಂದ ಊಟ, ಹೊದಿಕೆ

ಶಾಸಕರಿಗೆ ಸರ್ಕಾರದಿಂದ ಊಟ, ಹೊದಿಕೆ

ವಿಧಾನಸಭೆ ಮತ್ತು ವಿಧಾನ ಷರಿಷತ್ತಿನಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸದಸ್ಯರು ಆಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಅವರಿಗೆ ಸರ್ಕಾರದಿಂದಲೇ ಊಟದ ವ್ಯವಸ್ಥೆ ಮಾಡಲಾಗಿತ್ತು. ಶಾಸಕರಿಗೆ ದಿಂಬು ಮತ್ತು ಹೊದಿಕೆ ವ್ಯವಸ್ಥೆ ಮಾಡಿಕೊಡಲಾಗಿತ್ತು.

ಧರಣಿಯಲ್ಲಿ ಪಾಲ್ಗೊಂಡಿದ್ದವರು

ಧರಣಿಯಲ್ಲಿ ಪಾಲ್ಗೊಂಡಿದ್ದವರು

ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಡಿಕೆ ರವಿ ಅವರ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡ ಬಳಿಕ ನೇರವಾಗಿ ವಿಧಾನಸೌಧಕ್ಕೆ ಆಗಮಿಸಿದರು. ಆರ್.ಅಶೋಕ್, ಸುರೇಶ್ ಕುಮಾರ್ ಸೇರಿದಂತೆ ಬಿಜೆಪಿ ಶಾಸಕರು ಧರಣಿ ನಡೆಸಿದರು. ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಶಾಸಕರು ಧರಣಿ ನಡೆಸಿದರು.

ಪರಿಷತ್ತಿನಲ್ಲಿ ಕೇಳಿದ ದೇಶಭಕ್ತಿ ಗೀತೆ

ಪರಿಷತ್ತಿನಲ್ಲಿ ಕೇಳಿದ ದೇಶಭಕ್ತಿ ಗೀತೆ

ವಿಧಾನಪರಿಷತ್ತಿನಲ್ಲಿ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ಧರಣಿ ನಡೆಸಿದರು. ಬಸವರಾಜ್ ಹೊರಟ್ಟಿ ನೇತೃತ್ವದಲ್ಲಿ ಜೆಡಿಎಸ್ ಸದಸ್ಯರು ಧರಣಿಗೆ ಕೈಜೋಡಿಸಿದರು. ದೇಶಭಕ್ತಿಗೀತೆಗಳನ್ನು ಹೇಳುತ್ತಾ ಸರ್ಕಾರದ ವಿರುದ್ಧ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+