ಬೆಂಗಳೂರು ಉತ್ತರ ಜೆಡಿಎಸ್ ಪಾಲು, ಅಭ್ಯರ್ಥಿ ಇವರೇ?
ಬೆಂಗಳೂರು, ಫೆಬ್ರವರಿ 12: ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮೈತ್ರಿ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ 2024 ಕುತೂಹಲಕ್ಕೆ ಕಾರಣವಾಗಿದೆ. ಉಭಯ ಪಕ್ಷಗಳು ಎಷ್ಟು ಸೀಟು ಹಂಚಿಕೆ ಮಾಡಿಕೊಳ್ಳಲಿವೆ?, ಅವು ಯಾವುವು? ಎಂಬುದು ಸದ್ಯದ ಪ್ರಶ್ನೆ.
ಕರ್ನಾಟಕ ವಿಧಾನಸಭೆ ಚುನಾವಣೆ 2023ರಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿತು. ಕೇವಲ 19 ಸ್ಥಾನಗಳಿಸಿದ ಜೆಡಿಎಸ್ ಚುನಾವಣೆ ಬಳಿಕ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಬೆಂಬಲ ಘೋಷಣೆ ಮಾಡಿತು. ಈಗ ಬಿಜೆಪಿ ಮತ್ತು ಜೆಡಿಎಸ್ ಸೀಟು ಹಂಚಿಕೆ ಮಾಡಿಕೊಂಡು ಲೋಕಸಭೆ ಚುನಾವಣೆಯನ್ನು ಎದುರಿಸಲಿವೆ. ರಾಜ್ಯದ ಆಡಳಿತ ಪಕ್ಷ ಕಾಂಗ್ರೆಸ್ ಕಟ್ಟಿ ಹಾಕಲು ಮೈತ್ರಿ ಎಂದು ಹೇಳುತ್ತಿವೆ.
ಮೈತ್ರಿಯ ಮಾತುಕತೆಯಂತೆ ಜೆಡಿಎಸ್ 5 ಸೀಟುಗಳಿಗೆ ಬೇಡಿಕೆ ಇಟ್ಟಿದೆ ಎಂಬುದು ಸುದ್ದಿ. ಎರಡು ಕ್ಷೇತ್ರಗಳನ್ನು ಬಿಟ್ಟುಕೊಡಲು ಬಿಜೆಪಿ ತಯಾರಿದೆ ಎಂಬ ಮಾಹಿತಿ ಇದೆ. ಫೆಬ್ರವರಿ 20ರ ಬಳಿಕ ಸೀಟು ಹಂಚಿಕೆ ಕುರಿತು ತೀರ್ಮಾನವಾಗುವ ನಿರೀಕ್ಷೆ ಇದೆ. ಜೆಡಿಎಸ್‌ಗೆ ಹಂಚಿಕೆಯಾಗುವ ಸೀಟುಗಳ ಪಟ್ಟಿಯಲ್ಲಿ ಬೆಂಗಳೂರು ಉತ್ತರ ಸೇರಿಕೊಂಡಿದೆ.

ಜೆಡಿಎಸ್ ಪ್ರಭಾವವಿಲ್ಲ: ಬೆಂಗಳೂರು ಉತ್ತರ ಕ್ಷೇತ್ರದ ಹಾಲಿ ಸಂಸದರು ಬಿಜೆಪಿಯ ಡಿ. ವಿ. ಸದಾನಂದ ಗೌಡ. ಅವರು ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ, ಸ್ಪರ್ಧಿಸುತ್ತಾರೆ? ಎಂಬ ಚರ್ಚೆಗಳು ಸಾಗಿವೆ. ಇಂತಹ ಸಮಯದಲ್ಲಿಯೇ ಬೆಂಗಳೂರು ಉತ್ತರಕ್ಕೆ ಬಿಜೆಪಿ ಹೊಸ ಅಭ್ಯರ್ಥಿ ಕಣಕ್ಕಿಳಿಸಲಿದೆ ಎಂಬ ಮಾತುಗಳು ಕೇಳಿ ಬಂದವು.
ಒಕ್ಕಲಿಗರ ಪ್ರಭಾವ ಹೆಚ್ಚಿರುವ ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಮಾಜಿ ಸಚಿವ ಸಿ. ಟಿ. ರವಿ, ಹಾಲಿ ಉಡುಪಿ-ಚಿಕ್ಕಮಗಳೂರು ಸಂಸದೆ, ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಹೆಸರು ಕೇಳಿ ಬಂದಿತ್ತು. ಸದ್ಯದ ಮಾಹಿತಿ ಪ್ರಕಾರ ಕ್ಷೇತ್ರ ಬದಲಾವಣೆ ಮಾಡಲು ಶೋಭಾ ಕರಂದ್ಲಾಜೆ ಒಪ್ಪಿಗೆ ನೀಡಿಲ್ಲ. ಸಿ. ಟಿ. ರವಿ ಬೆಂಗಳೂರಿಗೆ ಬರಲು ಸ್ಥಳೀಯ ನಾಯಕರು ಒಪ್ಪುತ್ತಿಲ್ಲ ಎಂಬ ಮಾತಿದೆ.
ಈ ನಡುವೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜಯನಗರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ವಿವೇಕ್ ರೆಡ್ಡಿ ಹೆಸರು ಬಿಜೆಪಿಯಿಂದ ಕೇಳಿ ಬರುತ್ತಿದೆ. ಒಂದು ವೇಳೆ ಸದಾನಂದ ಗೌಡರು ಸ್ಪರ್ಧೆ ಮಾಡದಿದ್ದರೆ ಜೆಡಿಎಸ್‌ಗೆ ಕ್ಷೇತ್ರ ಬಿಟ್ಟುಕೊಡುವ ಮಾತುಕತೆಯೂ ಸಾಗಿದೆ.
ಜೆಡಿಎಸ್ ಬೆಂಗಳೂರು ಭಾಗದಲ್ಲಿ ಅಂತಹ ಪ್ರಭಾವವನ್ನು ವಿಧಾನಸಭೆ ಚುನಾವಣೆ ಬಳಿಕ ಹೊಂದಿಲ್ಲ. ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸಮೀಕ್ಷೆಯೊಂದನ್ನು ನಡೆಸಿದ್ದು, ಒಕ್ಕಲಿಗ ಪ್ರಭಾವ ಇರುವ ಬೆಂಗಳೂರು ಉತ್ತರ ಸಹ ಅವರಿಗೆ ಸುರಕ್ಷಿತ ಕ್ಷೇತ್ರ ಎಂಬ ಅಭಿಪ್ರಾಯ ಬಂದಿದೆ. ಆದ್ದರಿಂದ ಬಿಜೆಪಿ ಬಿಟ್ಟುಕೊಟ್ಟರೆ ಬೆಂಗಳೂರು ಉತ್ತರದಲ್ಲಿ ಎಚ್. ಡಿ. ಕುಮಾರಸ್ವಾಮಿಯೇ ಅಭ್ಯರ್ಥಿಯಾಗಲಿದ್ದಾರೆ ಎಂಬ ಸುದ್ದಿ ಕೇಳಿ ಬಂದಿದೆ.
ಮಂಡ್ಯವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟರೆ ಮಂಡ್ಯದಲ್ಲಿ ಬಿಜೆಪಿಗೆ ಬೆಂಬಲ ಘೋಷಣೆ ಮಾಡಿರುವ ಹಾಲಿ ಸಂಸದೆ ಸುಮಲತಾರನ್ನು ಬೆಂಗಳೂರು ಉತ್ತರದಲ್ಲಿ ಕಣಕ್ಕಿಳಿಸಲು ಬಿಜೆಪಿ ಲೆಕ್ಕಾಚಾರ ಹಾಕಿದೆ ಎಂಬ ಮಾತಿದೆ. ಬೆಂಗಳೂರು ಉತ್ತರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ಸಾಧ್ಯತೆ ಬಹಳ ಕಡಿಮೆ ಎನ್ನುತ್ತಾರೆ ಬಿಜೆಪಿಯ ನಾಯಕರು.
2019ರ ಚುನಾವಣೆಯಲ್ಲಿ ಬೆಂಗಳೂರು ಉತ್ತರದಲ್ಲಿ ಬಿಜೆಪಿಯ ಡಿ. ವಿ. ಸದಾನಂದ ಗೌಡ 824,500 ಮತಗಳನ್ನು ಪಡೆದು ಜಯಗಳಿಸಿದ್ದರು. ಎದುರಾಳಿಯಾಗಿದ್ದ ಕಾಂಗ್ರೆಸ್‌ನ ಕೃಷ್ಣ ಬೈರೇಗೌಡ 676,982 ಮತಗಳನ್ನು ಪಡೆದಿದ್ದರು. ಜೆಡಿಎಸ್-ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿತ್ತು.
2014ರ ಚುನಾವಣೆಯಲ್ಲಿ ಬಿಜೆಪಿಯ ಡಿ. ವಿ. ಸದಾನಂದ ಗೌಡ 718,326 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ನರೇಂದ್ರ ಮೋದಿ ಸಂಪುಟದಲ್ಲಿ ಸಚಿವರೂ ಸಹ ಆಗಿದ್ದರು. ಕಾಂಗ್ರೆಸ್‌ನ ಸಿ. ನಾರಾಯಣ ಸ್ವಾಮಿ 488,562 ಮತಗಳನ್ನು ಪಡೆದು ಸೋತಿದ್ದರು. ಜೆಡಿಎಸ್‌ನ ಅಬ್ದುಲ್ ಅಜೀಮ್ 92,681 ಮತಗಳನ್ನು ಪಡೆದಿದ್ದರು.
-
Karnataka Weather: ಕಲಬುರಗಿಯಲ್ಲಿ 41ಡಿಸೆ ತಾಪಮಾನ, ಉಷ್ಣಅಲೆ ಎಚ್ಚರಿಕೆ, ಕೆಲವೆಡೆ ಮಳೆ ಸಾಧ್ಯತೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು












Click it and Unblock the Notifications