28 ಕ್ಷೇತ್ರಗಳಲ್ಲೂ ಬಿಜೆಪಿ- ಜೆಡಿಎಸ್ ಗೆಲುವು ಖಚಿತ: ವಿಜಯೇಂದ್ರ

ಬೆಂಗಳೂರು, ಏಪ್ರಿಲ್‌ 10: ಗುಲ್ಬರ್ಗ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಲೋಕಸಭಾ ಸ್ಥಾನಕ್ಕೆ ಸ್ಪರ್ಧಿಸಿ ಅಭೂತಪೂರ್ವ ಗೆಲುವನ್ನು ಪಡೆದ ಉಮೇಶ್ ಜಾಧವ್ ಅವರು ಮತ್ತೆ ಸ್ಪರ್ಧಿಸುತ್ತಿದ್ದಾರೆ. ಗುಲ್ಬರ್ಗ ಕ್ಷೇತ್ರ ಸೇರಿ 28ಕ್ಕೆ 28 ಕ್ಷೇತ್ರಗಳಲ್ಲಿ ಬಿಜೆಪಿ- ಜೆಡಿಎಸ್ ಗೆಲುವು ಸಾಧಿಸುವ ಗುರಿ ನಮ್ಮದು, ಅದು ಈಡೇರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಅಫಜಲಪುರದ ಮುಖಂಡ ನಿತಿನ್ ಗುತ್ತೇದಾರ್, ಬೆಂಬಲಿಗರ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರು ಕಳೆದ 10 ವರ್ಷಗಳಲ್ಲಿ ನುಡಿದಂತೆ ನಡೆದವರು. ಪ್ರಣಾಳಿಕೆಯಲ್ಲಿ ಘೋಷಿಸಿದ ವಿಚಾರಗಳನ್ನು ಅಕ್ಷರಶಃ ಅನುಷ್ಠಾನಕ್ಕೆ ತಂದಿದ್ದೇವೆ ಎಂದು ಹೇಳಿದರು.

BJP-JDS victory is certain in all 28 constituencies Says BY Vijayendra

ನರೇಂದ್ರ ಮೋದಿಯವರ 10 ವರ್ಷಗಳ ಆಡಳಿತದ ಬಳಿಕವೂ ಅವರ ಜನಪ್ರಿಯತೆ ವೃದ್ಧಿಯಾಗುತ್ತಿದೆ. ಮೋದಿ ಮತ್ತೊಮ್ಮೆ ಎಂಬ ಸಂಕಲ್ಪದೊಂದಿಗೆ ನಾವು ಕಾರ್ಯಪ್ರವೃತ್ತರಾಗಿದ್ದೇವೆ. ಮೋದಿಯವರು ಒಂದು ದಿನವೂ ವಿಶ್ರಾಂತಿರಹಿತವಾಗಿ ಕೆಲಸ ಮಾಡುತ್ತಿದ್ದಾರೆ. ತಮ್ಮ ತಾಯಿಯ ಅಂತ್ಯಸಂಸ್ಕಾರಕ್ಕೆ ಕೇವಲ 2 ಗಂಟೆ ಕಾಲ ತೆರಳುತ್ತಾರೆ. ಅಂಥ ವಿಶಿಷ್ಟ ಶಕ್ತಿ ಅವರು ಎಂದು ತಿಳಿಸಿದರು.

ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸಂಕಲ್ಪ ಮೋದಿಯವರದು ಎಂದರಲ್ಲದೆ, ನಿತಿನ್ ಗುತ್ತೇದಾರರಿಗೆ ಮತ್ತು ಅವರ ಬೆಂಬಲಿಗರಿಗೆ ಗೌರವ ಕೊಟ್ಟು ಕೆಲಸ ಮಾಡಿ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು. ನಿತಿನ್ ಗುತ್ತೇದಾರ್ ಅವರನ್ನು ಬಿಜೆಪಿಗೆ ಆತ್ಮೀಯವಾಗಿ ಬರಮಾಡಿಕೊಳ್ಳುತ್ತೇನೆ. ಅವರ ಸೇರ್ಪಡೆಯಿಂದ ಗುಲ್ಬರ್ಗ ಲೋಕಸಭಾ ಕ್ಷೇತ್ರದಲ್ಲಿ ಒಂದು ಭಾರಿ ಪರಿಣಾಮ ಬೀರಲಿದೆ. ಅವರ ಸೇರ್ಪಡೆಯು ಪಕ್ಷಕ್ಕೆ ಒಂದು ದೊಡ್ಡ ಶಕ್ತಿಯನ್ನು ತಂದು ಕೊಟ್ಟಿದೆ ಎಂದು ನುಡಿದರು.

ಬಿಜೆಪಿ- ಜೆಡಿಎಸ್‍ನವರು ಒಂದು ಕುಟುಂಬದಂತೆ ಕೆಲಸ ಮಾಡೋಣ. ದೊಡ್ಡ ಅಂತರದಲ್ಲಿ ಜಾಧವ್ ಅವರನ್ನು ಗೆಲ್ಲಿಸೋಣ ಎಂದು ಅವರು ಮನವಿ ಮಾಡಿದರು. ನಿತಿನ್ ಗುತ್ತೇದಾರ್ ಅವರು ಮಾತನಾಡಿ, ಬಿಜೆಪಿ ಸೇರಲು ಮತ್ತು ಸಂಘಟನೆ ಮಾಡಲು ಅವಕಾಶ ಲಭಿಸಿದೆ. ಮೋದಿಯವರ ಪರವಾಗಿ ಕೆಲಸ ಮಾಡುತ್ತೇನೆ. ಕಲಬುರ್ಗಿ ಜಿಲ್ಲೆಯಲ್ಲಿ ಬಿಜೆಪಿ ಗೆಲ್ಲಿಸಿ, ಕರ್ನಾಟಕದಲ್ಲಿ ಉತ್ತಮ ಸಂದೇಶ ನೀಡಲಿದ್ದೇವೆ ಎಂದು ತಿಳಿಸಿದರು.

ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಮಾಜಿ ಸಚಿವ ಅರಗ ಜ್ಞಾನೇಂದ್ರ, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಕಲಬುರ್ಗಿ ಜಿಲ್ಲಾಧ್ಯಕ್ಷರಾದ ಚಂದ್ರು ಪಾಟೀಲ್, ಶಿವರಾಜ ಪಾಟೀಲ್ ಮತ್ತಿತರ ಪ್ರಮುಖರು ಇದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+