DK Shivakumar: ಕಾಂಗ್ರೆಸ್ ಗೆ ಮಾತ್ರ ಭವಿಷ್ಯ ಎಂದು ಬಿಜೆಪಿ- ಜೆಡಿಎಸ್ ಕಾರ್ಯಕರ್ತರು ನಂಬಿದ್ದಾರೆ: ಡಿ ಕೆ ಶಿವಕುಮಾರ್

ಬೆಂಗಳೂರು, ನವೆಂಬರ್‌ 25: ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಭವಿಷ್ಯವಿದೆ ಎಂದು ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ನಂಬಿದ್ದಾರೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ತಿಳಿಸಿದರು.

ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು, ನಾಯಕರ ಸಹಕಾರ ಸಿಕ್ಕಿದೆ ಎಂದು ಹೇಳಿದ್ದು, ಎನ್ ಡಿಎ ಮೈತ್ರಿಕೂಟವನ್ನು ಜನ ತಿರಸ್ಕರಿಸಿದ್ದಾರಾ ಎಂಬ ಹೇಳಿಕೆ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿ, ಕಳೆದ ವರ್ಷದ ವಿಧಾನಸಭೆ ಚುನಾವಣೆ ಫಲಿತಾಂಶಕ್ಕೂ ಈ ಉಪಚುನಾವಣೆಯಲ್ಲಿ ಈ ಕ್ಷೇತ್ರಗಳಲ್ಲಿನ ಮತಗಳ ಅಂತರವನ್ನು ಗಮನಿಸಿ. ಬಸವರಾಜ ಬೊಮ್ಮಾಯಿ ಅವರ ಕ್ಷೇತ್ರದಲ್ಲಿ 50 ಸಾವಿರ ಮತಗಳು ಬದಲಾಗಿವೆ.

BJP-JDS Workers Believe That Only Congress Has A Future Says DK Shivakumar

ಚನ್ನಪಟ್ಟಣದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ 16 ಸಾವಿರ ಮತಗಳನ್ನು ಪಡೆದಿದ್ದರು. ಈ ಉಪಚುನಾವಣೆಯಲ್ಲಿ 1.12 ಲಕ್ಷ ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ನಮಗೆ ಮತ ಹಾಕದಿದ್ದರೆ ಇಷ್ಟು ಪ್ರಮಾಣದಲ್ಲಿ ಮತಗಳು ವ್ಯತ್ಯಾಸವಾಗುತ್ತಿತ್ತೇ? ಆಮೂಲಕ ಜನ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟವನ್ನು ತಿರಸ್ಕರಿಸಿದ್ದಾರೆ ಎಂದು ತಿಳಿಸಿದರು.

ಬಿಜೆಪಿ ಅವಧಿಯಲ್ಲಿ ವಕ್ಫ್ ಆಸ್ತಿ ವಿಚಾರವಾಗಿ ನೋಟೀಸ್ ನೀಡಿ ಈಗ ಅವರೇ ಹೋರಾಟ ಮಾಡುತ್ತಿರುವ ಬಗ್ಗೆ ಕೇಳಿದಾಗ, "ಅವರಿಗೆ ಬೇಕಾಗಿರುವುದು ಕೇವಲ ಪ್ರಚಾರ. ಅವರು ಪ್ರತಿಭಟನೆ ಮಾಡಿದಷ್ಟು ನಮಗೆ ಒಳ್ಳೆಯದು. ಅವರು ತಮ್ಮ ಮುಖಗಳನ್ನು ಕನ್ನಡಿಯಲ್ಲಿ ನೋಡಿಕೊಳ್ಳಲಿ ಎಂದು ಹೇಳಿದ್ದೇನೆ. ಗೋಮುಖ ವ್ಯಾಘ್ರರ ಸತ್ಯಾಂಶವನ್ನು ನಾವು ಬಿಚ್ಚಿಡುತ್ತೇವೆ. ಚನ್ನಪಟ್ಟಣ ಉಪಚುನಾವಣೆ ಸಂದರ್ಭದಲ್ಲಿ ಅಲ್ಲಿನ ಜನ ಪಹಣಿಯಲ್ಲಿ ವಕ್ಫ್ ನಮೂದಾಗಿರುವ ವಿಚಾರವಾಗಿ ಅರ್ಜಿ ತೆಗೆದುಕೊಂಡು ಹೋಗುತ್ತಿದ್ದರು. ನಾನು ಅದನ್ನು ಪರಿಶೀಲಿಸಿದಾಗ 2020ರಲ್ಲಿ ಅವರ ಪಹಣಿ ತಿದ್ದುಪಡಿಯಾಗಿದೆ. ಈಗ ಅದನ್ನು ಮನೆ ಮನೆಗೆ ತೋರಿಸುತ್ತಿದ್ದಾರೆ. ಬಿಜೆಪಿಯವರು ತಮ್ಮ ಆಂತರಿಕ ಹುಳುಕು ಮುಚ್ಚಿಕೊಳ್ಳಲು ಈ ವಿಚಾರವಾಗಿ ಹೋರಾಟ ಮಾಡುತ್ತಿದ್ದಾರೆ. ಜನ ಅವರಿಗೆ ತಕ್ಕ ಪಾಠ ಕಲಿಸಿದ್ದಾರೆ ಎಂದು ತಿಳಿಸಿದರು.

ಬಿಜೆಪಿಯಲ್ಲಿ ಬಣ ರಾಜಕೀಯ ಹೆಚ್ಚಾಗಿದ್ದು, ಅವರವರೇ ಪರಸ್ಪರ ದೂರು ನೀಡುತ್ತಿದ್ದಾರೆ ಎಂದು ಕೇಳಿದಾಗ, "ಅವರೇ ಈ ವಿಚಾರ ತೀರ್ಮಾನ ಮಾಡಿಕೊಳ್ಳಬೇಕು. ಅವರ ಪಕ್ಷದಲ್ಲಿ ಎಷ್ಟೇ ಗುಂಪಿದ್ದರೂ ನಮ್ಮ ಲೆಕ್ಕಕ್ಕೆ ಅವರು ಒಂದೇ ಗುಂಪು. ಜೆಡಿಎಸ್ ಚಿಹ್ನೆ ಬೇರೆಯಾದರೂ ಅವರೂ ಅದೇ ಗುಂಪು. ಜೆಡಿಎಸ್ ಅವರು ಕೂಡ ಅದೇ ಪ್ರಯತ್ನದಲ್ಲಿದ್ದಾರೆ. ಅವರು ಹೋರಾಟ ಮಾಡಿ ನಮಗೆ ಪ್ರಚಾರ ನೀಡುತ್ತಿದ್ದು, ಮಾಡಲಿ" ಎಂದು ತಿಳಿಸಿದರು.

ಮುಸಲ್ಮಾನರು ಕೈಕೊಟ್ಟಿದ್ದಕ್ಕೆ ನಮಗೆ ಹಿನ್ನಡೆಯಾಯಿತು ಎಂಬ ನಿಖಿಲ್ ಹೇಳಿಕೆ ಬಗ್ಗೆ ಕೇಳಿದಾಗ, "ಕುಮಾರಸ್ವಾಮಿ ಬಿಜೆಪಿಯವರ ಜತೆ ಸೇರಿದರೆ ಮುಸಲ್ಮಾನರು ಹೇಗೆ ಮತ ಹಾಕುತ್ತಾರೆ. ಮುಸಲ್ಮಾನರನ್ನು ಎನ್ ಡಿಎ ಮೈತ್ರಿಕೂಟ ವಿಶ್ವಾಸಕ್ಕೆ ಪಡೆದಿಲ್ಲ. ಹೀಗಿರುವಾಗ ಅವರು ಯಾಕೆ ಮತ ಹಾಕುತ್ತಾರೆ. ನೀವು ಅವರಿಗೆ ನೆರವಾಗಿದ್ದರೆ, ಎನ್ ಡಿಎ ವತಿಯಿಂದ ಮುಸಲ್ಮಾನರಿಗೆ ಟಿಕೆಟ್ ನೀಡಿದ್ದಾರಾ? ಮಂತ್ರಿ ಮಾಡಿದ್ದಾರಾ? ಅವರಿಗಾಗಿ ಕಾರ್ಯಕ್ರಮ ಕೊಟ್ಟಿದ್ದಾರಾ? ಅವರಿಗಿದ್ದ 4% ಮೀಸಲಾತಿ ಕಿತ್ತುಕೊಂಡಿದ್ದೀರಿ. ನಿಮಗೆ ಅವರ ಮತ ಕೇಳುವ ನೈತಿಕತೆಯೇ ಇಲ್ಲ. ನಿಖಿಲ್ ಪಾಪ ಚಿಕ್ಕ ಹುಡುಗ. ಅವನ ಅನುಭವದ ಬಗ್ಗೆ ನಾನು ಮಾತನಾಡುವುದಿಲ್ಲ. ಈ ವಿಚಾರವಾಗಿ ದೊಡ್ಡ ಗೌಡರು ಮಾತನಾಡಬೇಕು" ಎಂದರು.

ದೇಶದಲ್ಲಿ ಕಾಂಗ್ರೆಸ್ ಅವನತಿಯತ್ತ ಸಾಗುತ್ತಿದೆ ಎಂಬ ಜೆಡಿಎಸ್ ಟ್ವೀಟ್ ಕುರಿತು ಮಾತನಾಡಿ, ಅವರು ತಮ್ಮ ಪರಿಸ್ಥಿತಿ ಬಗ್ಗೆ ನೋಡಿಕೊಳ್ಳಲಿ. ನಾನು ಇಲ್ಲವಾದರೂ ಕಾಂಗ್ರೆಸ್ ಗೆ ಏನೂ ಆಗುವುದಿಲ್ಲ. ಯಾರೇ ಹೋದರೂ ಕಾಂಗ್ರೆಸ್ ಪಕ್ಷಕ್ಕೆ ಏನೂ ಆಗುವುದಿಲ್ಲ. ಕಾಂಗ್ರೆಸ್ ಇತಿಹಾಸ, ದೇಶದ ಇತಿಹಾಸ, ಕಾಂಗ್ರೆಸ್ ಪಕ್ಷ ತ್ಯಾಗ ಮಾಡಿ ಈ ದೇಶವನ್ನು ಒಗ್ಗಟ್ಟಾಗಿಟ್ಟಿದೆ. ಪ್ರಪಂಚದಲ್ಲಿ ದೊಡ್ಡ ದೊಡ್ಡ ಚಕ್ರವರ್ತಿಗಳೇ ಬಿದ್ದಿದ್ದಾರೆ. ಸದ್ದಾಂ ಹುಸೇನ್, ಪಾಕಿಸ್ತಾನದ ಕತೆ ಏನಾಯ್ತು ಎಂದು ಎಲ್ಲರಿಗೂ ಗೊತ್ತು ಎಂದು ತಿಳಿಸಿದರು.

ತಮ್ಮನನ್ನು ಗೆಲ್ಲಿಸಿಕೊಳ್ಳಲು ಆಗಲಿಲ್ಲ, ಚನ್ನಪಟ್ಟಣ ಗೆದ್ದ ಮಾತ್ರಕ್ಕೆ ಡಿ.ಕೆ. ಶಿವಕುಮಾರ್ ಒಕ್ಕಲಿಗ ನಾಯಕರೇ ಎಂಬ ಆರ್.ಅಶೋಕ್ ಹೇಳಿಕೆ ಬಗ್ಗೆ ಕೇಳಿದಾಗ, "ನಾನು ನಾಯಕ ಎಂದು ಯಾವತ್ತು ಹೇಳಿದ್ದೇನೆ? ಅಶೋಕಣ್ಣ, ನೀನು ಕನಕಪುರಕ್ಕೆ ಬಂದು ಎಷ್ಟು ಡೆಪಾಸಿಟ್ ತೆಗೆದುಕೊಂಡೆ? ಕಂದಾಯ ಸಚಿವರಾಗಿದ್ದುಕೊಂಡು ನನ್ನ ಮೇಲೆ ಕುಸ್ತಿ ಮಾಡಲು, ಡಿಚ್ಚಿ ಹೊಡೆಯಲು ಬಂದಿದ್ಯಲ್ಲ, ನಿನಗೆ ಎಷ್ಟು ಮತ ಬಂತು? ನನ್ನ ತಮ್ಮ ಸೋತಿರುವುದು ನಿಜ. ಅದಕ್ಕೆ ಕಾರಣವಾದ ಒಂದೊಂದೇ ಕೊಂಡಿಗಳು ಕಳಚಿಕೊಳ್ಳುತ್ತಿವೆಯಲ್ಲವೇ? ಆರ್ ಆರ್ ನಗರ, ಚನ್ನಪಟ್ಟಣ ಏನಾಗಿದೆ ಎಂದು ನಾನು ಈಗ ಮಾತನಾಡುವುದಿಲ್ಲ" ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+