ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಾರಕಿಹೊಳಿ ಸಿಡಿ ಪ್ರಕರಣದ ಹಿಂದಿನ ರೂವಾರಿ? ಬಿಎಸ್ವೈ, ಡಿಕೆಶಿ ಹೆಸರು ಪ್ರಸ್ತಾವಿಸಿದ 2 ಪಕ್ಷಗಳು!

|
Google Oneindia Kannada News

ಬೆಂಗಳೂರು, ಮಾರ್ಚ್ 16: ಒಂದು ದಿನದ ಹಿಂದೆ ಸಭೆ ಸೇರಿದ್ದ ಕಾಂಗ್ರೆಸ್ ಮುಖಂಡರು, ರಮೇಶ್ ಜಾರಕಿಹೊಳಿ ಸಿಡಿ ವಿಚಾರದಲ್ಲಿ ಅಂತರ ಕಾಯ್ದುಕೊಳ್ಳುವ ನಿರ್ಧಾರಕ್ಕೆ ಬಂದಿದ್ದರು. ಆದರೆ..

ಇಂದು (ಮಾ 16) ಸಿಡಿ ವಿಚಾರವನ್ನು ಇಟ್ಟುಕೊಂಡು ಟ್ವೀಟ್ ಮಾಡಿರುವ ಕೆಪಿಸಿಸಿ ಮತ್ತೆ ಆ ವಿಚಾರವನ್ನು ಜೀವಂತವಾಗಿರಿಸಿದೆ. ಕೆಪಿಸಿಸಿ ಮಾಡಿರುವ ಟ್ವೀಟ್‌ಗೆ ಬಿಜೆಪಿ ಕೂಡಾ ಟ್ವೀಟ್ ನಲ್ಲಿ ತಿರುಗೇಟು ನೀಡಿದೆ.

ಡಿಕೆಶಿಗೆ ಕೆಟ್ಟಕಾಲ ಶುರು: ಎಚ್ಡಿಕೆ ಸುತ್ತ ಇದ್ದ ಗ್ರಹಗಳು ಈಗ ಡಿಕೆಶಿ ಹಿಂದೆ ಮುಂದೆ ಡಿಕೆಶಿಗೆ ಕೆಟ್ಟಕಾಲ ಶುರು: ಎಚ್ಡಿಕೆ ಸುತ್ತ ಇದ್ದ ಗ್ರಹಗಳು ಈಗ ಡಿಕೆಶಿ ಹಿಂದೆ ಮುಂದೆ

ಎರಡು ರಾಷ್ಟ್ರೀಯ ಪಕ್ಷಗಳ ರಾಜ್ಯ ಘಟಕದ ಟ್ವೀಟ್‌ನಲ್ಲಿ ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪನವರ ಹೆಸರನ್ನು ನೇರವಾಗಿ ಉಲ್ಲೇಖಿಸಲಾಗಿದೆ.

"ಉದ್ಯೋಗ ಕೇಳಿದ ಯುವತಿಯನ್ನು ದುರುಪಯೋಗಪಡಿಸಿಕೊಂಡ ನಿಮ್ಮಿಂದ ಇಡೀ ರಾಜ್ಯಕ್ಕೆ ಕೆಟ್ಟ ಹೆಸರು"ಎಂದು ಕೆಪಿಸಿಸಿ ಟ್ವೀಟ್ ಮಾಡಿತ್ತು. ಅದಕ್ಕೆ, ಜೈಲಿನಿಂದ ಹೊರಬಂದ ಮಹಾನ್ ನಾಯಕ ಕಾರಣ ಎಂದು ಬಿಜೆಪಿ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದೆ.

ಜಾರಕಿಹೊಳಿ ದೌರ್ಬಲ್ಯತೆಯ ಲಾಭ ಕಾಂಗ್ರೆಸ್ಸಿಗೆ ಅನಿವಾರ್ಯವೇ?ಜಾರಕಿಹೊಳಿ ದೌರ್ಬಲ್ಯತೆಯ ಲಾಭ ಕಾಂಗ್ರೆಸ್ಸಿಗೆ ಅನಿವಾರ್ಯವೇ?

ಉದ್ಯೋಗ ಕೇಳಿದ ಯುವತಿಯನ್ನು ದುರುಪಯೋಗ

"ವಿಧಾನಸೌಧದ ಸನಿಹದಲ್ಲಿಯೇ ಒಬ್ಬ ಶಾಸಕರಿಗೇ ರಕ್ಷಣೆ ನೀಡಲಾಗದ್ದು ನಿಮ್ಮ ಸರ್ಕಾರದ ವೈಫಲ್ಯವಲ್ಲವೇ? ಉದ್ಯೋಗ ಕೇಳಿದ ಯುವತಿಯನ್ನು ದುರುಪಯೋಗಪಡಿಸಿಕೊಂಡ ನಿಮ್ಮಿಂದ ಇಡೀ ರಾಜ್ಯಕ್ಕೆ ಕೆಟ್ಟ ಹೆಸರು. ರಕ್ಷಣೆ ಕೇಳಿದ ಆ ಯುವತಿಗಾದರೂ ರಕ್ಷಣೆ ಒದಗಿಸುವಿರಾ ಅಥವಾ ನಿಮ್ಮ ಮಹಿಳಾ ವಿರೋಧಿ ನಡೆ ಮುಂದುವರೆಸುವಿರಾ?" ಇದು ಕೆಪಿಸಿಸಿ ಮೊದಲು ಮಾಡಿರುವ ಟ್ವೀಟ್.

 ಜೈಲಿನಿಂದ ಜಾಮೀನಿನ ಮೇಲೆ ಹೊರಗಡೆ ಬಂದಿರುವ ಭ್ರಷ್ಟಾಚಾರಿ ಆರೋಪಿ

ಜೈಲಿನಿಂದ ಜಾಮೀನಿನ ಮೇಲೆ ಹೊರಗಡೆ ಬಂದಿರುವ ಭ್ರಷ್ಟಾಚಾರಿ ಆರೋಪಿ

ಕೆಪಿಸಿಸಿಗೆ ಬಿಜೆಪಿ ಟ್ವೀಟ್ ಮೂಲಕ ತಿರುಗೇಟು ನೀಡಿದ್ದು ಹೀಗೆ, "ಆ ಘಟನೆಯ ಹಿಂದೆ ಒಬ್ಬ ಜೈಲಿನಿಂದ ಜಾಮೀನಿನ ಮೇಲೆ ಹೊರಗಡೆ ಬಂದಿರುವ ಭ್ರಷ್ಟಾಚಾರಿ ಆರೋಪಿ ಮಹಾ ನಾಯಕನ ಕೈವಾಡ ಇದೆ ಎಂಬ ಸುದ್ದಿ ಇದೆ. ಆ ಮಹಾನಾಯಕ ಕೂಡಾ ತನ್ನನ್ನು ಸಿಲುಕಿಸುವ ಕುತಂತ್ರ ನಡೆಯುತ್ತಿದೆ ಎಂದು ಹೇಳುವ ಮೂಲಕ ಹೆಗಲು ಮುಟ್ಟಿ ನೋಡಿಕೊಂಡಿದ್ದಾರೆ. ರಾಹುಲ್‌ ಗಾಂಧಿ ಏಕೆ ಸುಕನ್ಯಾ ದೇವಿಯ ಪರವಾಗಿ ಒಮ್ಮೆಯೂ ಧ್ವನಿ ಎತ್ತಿಲ್ಲ?"ಎಂದು ಪರೋಕ್ಷವಾಗಿ ಡಿಕೆಶಿ ಹೆಸರನ್ನು ಬಿಜೆಪಿ ಇಲ್ಲಿ ಪ್ರಸ್ತಾವಿಸಿದೆ.

 ಬಿಎಸ್ವೈ ಅವರತ್ತ ಏಕೆ ಪರೋಕ್ಷವಾಗಿ ಗುರಿ ಇಡುತ್ತಿದ್ದೀರಿ

ಬಿಎಸ್ವೈ ಅವರತ್ತ ಏಕೆ ಪರೋಕ್ಷವಾಗಿ ಗುರಿ ಇಡುತ್ತಿದ್ದೀರಿ

ಬಿಜೆಪಿ ಪ್ರತಿಕ್ರಿಯೆಗೆ ಮತ್ತೆ ಉತ್ತರಿಸಿರುವ ಕೆಪಿಸಿಸಿ, "ಜೈಲಿನಿಂದ ಜಾಮೀನಿನ ಮೇಲೆ ಹೊರಬಂದಿರುವ ಭ್ರಷ್ಟಾಚಾರ ಆರೋಪಿ ಮಹಾ ನಾಯಕ" ಎನ್ನುತ್ತ @BSYBJP ಅವರತ್ತ ಏಕೆ ಪರೋಕ್ಷವಾಗಿ ಗುರಿ ಇಡುತ್ತಿದ್ದೀರಿ?! @BasanagoudaBJP ವಿಜಯೇಂದ್ರ ಸಿಡಿ ಫ್ಯಾಕ್ಟರಿ ಮೂಲಕ ಬ್ಲಾಕ್ಮೇಲ್ ಮಾಡಲಾಗುತ್ತದೆ ಎಂಬ ಮಾತನ್ನ ನೀವೂ ಪರೋಕ್ಷವಾಗಿ ಹೇಳುತ್ತಾ #BSYmuktaBJP ಅಭಿಯಾನ ಮುಂದುವರಿಸುತ್ತಿರುವಿರಾ!" ಎಂದು ಕೆಪಿಸಿಸಿ, ಸಿಎಂ ಬಿಎಸ್ವೈ ಅವರನ್ನು ಈ ವಿಚಾರದಲ್ಲಿ ಎಳೆದು ತಂದಿದೆ.

Recommended Video

ಜಾರಕಿಹೊಳಿ ಸಿಡಿ ಕೇಸ್ ನಾಲ್ವರು ಅರೆಸ್ಟ್ !! | Oneindia Kannada
 ನನ್ನನ್ನು ಸಿಲುಕಿಸುವ ಕುತಂತ್ರ ನಡೆಯುತ್ತಿದೆ

ನನ್ನನ್ನು ಸಿಲುಕಿಸುವ ಕುತಂತ್ರ ನಡೆಯುತ್ತಿದೆ

"ನನ್ನನ್ನು ಸಿಲುಕಿಸುವ ಕುತಂತ್ರ ನಡೆಯುತ್ತಿದೆ ಎಂದು ಮಹಾನಾಯಕರೊಬ್ಬರು ಹೇಳಿದ್ದಾರೆ. ಈ ಪ್ರಕರಣದಲ್ಲಿ ನನ್ನ ಹೆಸರು ಯಾಕೆ ಬರುತ್ತಿದೆ, ಗೊತ್ತಾಗುತ್ತಿಲ್ಲ ಎಂದು ಮಹಾನಾಯಕಿಯೊಬ್ಬರು ಹೇಳಿದ್ದಾರೆ. ಏನಿದೆಲ್ಲಾ!? ಬೆಂಕಿಯಿಲ್ಲದೆ ಹೊಗೆಯಾಡುವುದೇ? ಪಕ್ಷ ತೊರೆದವರ ವಿರುದ್ಧ ಕಾಂಗ್ರೆಸ್‌ ಹಗೆತನ ಸಾಧಿಸುತ್ತಿದೆ" ಎಂದು ಬಿಜೆಪಿ ಮತ್ತೆ ಟ್ವೀಟ್ ಮಾಡಿದೆ.

English summary
BJP Karnataka And KPCC Tweet War Over Ramesh Jarkiholi CD Row
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X