'ನಾ ನಾಯಕಿ' ಕಾರ್ಯಕ್ರಮಕ್ಕೂ 2 ಸಾವಿರ ರೂ. ಕೊಟ್ಟು ಕರೆತರಲಾಗಿತ್ತು!
ಬೆಂಗಳೂರು, ಜನವರಿ 16; ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿ ಕುಟುಂಬದ ಯಜಮಾನಿಗೆ ತಿಂಗಳಿಗೆ ರೂ. 2,000ವನ್ನು ನೀಡಲಿದೆ ಎಂದು ಕರ್ನಾಟಕ ಕಾಂಗ್ರೆಸ್ ಭರವಸೆ ನೀಡಿದೆ.
ಸೋಮವಾರ ಬೆಂಗಳೂರಿನಲ್ಲಿ 'ನಾ ನಾಯಕಿ' ಸಮಾವೇಶ ನಡೆಯಿತು. ಸಮಾವೇಶದಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ ಈ ಘೋಷಣೆ ಮಾಡಿದರು. ಈ ಮೂಲಕ ಕರ್ನಾಟಕ ಕಾಂಗ್ರೆಸ್ ಮುಂದಿನ ಚುನಾವಣೆಗೆ ಎರಡು ಘೋಷಣೆ ಮಾಡಿದೆ.
ಈ ಸಮಾವೇಶದ ಬಗ್ಗೆ ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿದೆ. ವಿಡಿಯೋವೊಂದನ್ನು ಟ್ವೀಟ್ ಮಾಡಲಾಗಿದ್ದು, 'ಅಲ್ಲೇ ಡ್ರಾ ಅಲ್ಲೇ ಬಹುಮಾನ ಅಂದ್ರೆ ಇದೇನಾ?' ಎಂದು ಕಾಂಗ್ರೆಸ್ ಪಕ್ಷವನ್ನು ಪ್ರಶ್ನಿಸಿದೆ.
'ನಾಯಕಿ ಕಾರ್ಯಕ್ರಮಕ್ಕೂ 2000 ರೂ. ಕೊಟ್ಟೇ ಕರೆತರಲಾಗಿತ್ತು! ಶ್ರೀಮತಿ
@priyankagandhi ನೇತೃತ್ವದ ಸಮಾವೇಶದಲ್ಲಿ ಹರಿದ ಕಾಂಚಾಣವೇ ಬಹುಶಃ ಕಾಂಗ್ರೆಸ್ಸಿಗರ ಗೃಹಲಕ್ಷ್ಮಿ ಯೋಜನೆ ಇರಬೇಕು' ಎಂದು ಬಿಜೆಪಿ ಲೇವಡಿ ಮಾಡಿದೆ.
ಅಲ್ಲೇ ಡ್ರಾ ಅಲ್ಲೇ ಬಹುಮಾನ ಅಂದ್ರೆ ಇದೇನಾ?
— BJP Karnataka (@BJP4Karnataka) January 16, 2023
‘ನಾಯಕಿ’ ಕಾರ್ಯಕ್ರಮಕ್ಕೂ 2000 ರೂ. ಕೊಟ್ಟೇ ಕರೆತರಲಾಗಿತ್ತು! ಶ್ರೀಮತಿ @priyankagandhi ನೇತೃತ್ವದ ಸಮಾವೇಶದಲ್ಲಿ ಹರಿದ ಕಾಂಚಾಣವೇ ಬಹುಶಃ ಕಾಂಗ್ರೆಸ್ಸಿಗರ ಗೃಹಲಕ್ಷ್ಮಿ ಯೋಜನೆ ಇರಬೇಕು. #PriyankaKeFakePromises pic.twitter.com/MCleOTpeKn
ಪ್ರಿಯಾಂಕ ಗಾಂಧಿ ಆಗಮಿಸಿದ್ದ 'ನಾ ನಾಯಕಿ' ಸಮಾವೇಶಕ್ಕೆ ಆಗಮಿಸಿದ್ದ ಮಹಿಳೆಯರಿಗೆ ಹಣ ಹಂಚುತ್ತಿರುವ ವಿಡಿಯೋ ಇದು. ಇದನ್ನು ಟ್ವೀಟ್ ಮಾಡಿರುವ ಪಕ್ಷ ಕಾಂಗ್ರೆಸ್ ವಿರುದ್ಧ ಟೀಕಿಸಿದೆ.

ಕರ್ನಾಟಕ ಬಿಜೆಪಿ ಸರಣಿ ಟ್ವೀಟ್
ಇನ್ನು ಬೆಂಗಳೂರಿನಲ್ಲಿ ನಡೆದ 'ನಾ ನಾಯಕಿ' ಸಮಾವೇಶದ ಬಗ್ಗೆ ಸರಣಿ ಟ್ವೀಟ್ ಅನ್ನು ಬಿಜೆಪಿ ಮಾಡಿದೆ. #PriyankaKeFakePromises ಎಂಬ ಹ್ಯಾಷ್ ಟ್ಯಾಗ್‌ನೊಂದಿಗೆ ಟ್ವೀಟ್ ಮಾಡಲಾಗಿದೆ.
'ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಸಬಲೀಕರಣ ಬಿಡಿ, ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯಗಳನ್ನೇ ಎಂದೂ ಪ್ರಶ್ನಿಸದ ಪ್ರಿಯಾಂಕ ಗಾಂಧಿ ಇದೀಗ ಗೃಹಲಕ್ಷ್ಮಿ ಎಂಬ ಯೋಜನೆ ಜಾರಿಗೊಳಿಸುತ್ತೇವೆ ಎಂದಿರುವುದು ಕಾಂಗ್ರೆಸ್‌ನ ಗ್ಯಾರಂಟಿ ಸುಳ್ಳಿನ ಸರಣಿಯ ಮುಂದುವರಿದ ಭಾಗ. ಈ ಡೋಂಗಿತನದ ಅರಿವು ರಾಜ್ಯದ ಜನರಿಗಿದೆ' ಎಂದು ಬಿಜೆಪಿ ಹೇಳಿದೆ.

PriyankaKeFakePromises
ಈ ಹ್ಯಾಷ್ ಟ್ಯಾಗ್ ಬಳಕೆ ಮಾಡಿ ಬಿಜೆಪಿ ಟ್ವೀಟ್ ಮಾಡಿದೆ. ಮಹಿಳಾ ಸಬಲೀಕರಣ ವಿಚಾರದಲ್ಲಿ ಬಿಜೆಪಿ ಸರ್ಕಾರ ಮಾಡಿರುವಂಥ ಸಾಧನೆಗಳನ್ನು ಕರ್ನಾಟಕದಲ್ಲಿ ಇನ್ಯಾವುದೇ ಸರ್ಕಾರ ಮಾಡಿಲ್ಲ. ಮಹಿಳಾ ಸಬಲೀಕರಣ ಮತ್ತು ಕ್ಷೇಮಾಭಿವೃದ್ಧಿಗಾಗಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಎಸ್. ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ 43,188 ಕೋಟಿ ರೂ. ಅನುದಾನ ಒದಗಿಸಿದೆ.
ವಿಶೇಷವಾಗಿ ಗ್ರಾಮೀಣ ಮಹಿಳೆಯರನ್ನು ಮತ್ತಷ್ಟು ಸಬಲರನ್ನಾಗಿ ಮಾಡಲು ಬೊಮ್ಮಾಯಿ ಸರ್ಕಾರ ಸ್ತ್ರೀ ಸಾಮರ್ಥ್ಯ ಯೋಜನೆ ಅನುಷ್ಠಾನಕ್ಕೆ ತಂದಿದೆ. ಈ ಮೂಲಕ ಸ್ವ ಸಹಾಯ ಗುಂಪುಗಳಲ್ಲಿ ಸಕ್ರಿಯವಾಗಿರುವ ಮಹಿಳೆಯರಿಗೆ ಕಿರು ಉದ್ದಿಮೆ ಸ್ಥಾಪಿಸಲು ಅಗತ್ಯ ಆರಂಭಿಕ ಉತ್ತೇಜನ ನೀಡಲಾಗುತ್ತದೆ ಎಂದು ಪಕ್ಷ ಹೇಳಿದೆ.

ಘೋಷಣೆಗೆ ಮಾತ್ರ ಸೀಮಿತ
ಮತ್ತೊಂದು ಟ್ವೀಟ್‌ನಲ್ಲಿ ಬಿಜೆಪಿ, 'ನಿರುದ್ಯೋಗಿ ಯುವಕ ಯುವತಿಯರಿಗೆ 2,500 ರೂ. ಮಾಸಾಶನ ಕೊಡುತ್ತೇವೆ ಎಂದು ಛತ್ತೀಸ್‌ಘಡದಲ್ಲಿಯೂ ಇದೇ ಕಾಂಗ್ರೆಸ್ ಪಕ್ಷ ಹೇಳಿತ್ತು. ಆದರೆ ಚುನಾವಣೆ ಮುಗಿದ ಮೇಲೆ ಕಾಂಗ್ರೆಸ್ಸಿಗರಿಗೆ ಅದರ ನೆನಪೇ ಇರಲಿಲ್ಲ. ವಿಧವೆಯರಿಗೆ ತಿಂಗಳಿಗೆ 1,000 ಮಾಸಿಕ ಪಿಂಚಣಿ ಕತೆಯೂ ಅಷ್ಟೇ, ಚುನಾವಣಾ ಘೋಷಣೆಗೆ ಮಾತ್ರ ಸೀಮಿತ' ಎಂದು ಹೇಳಿದೆ.
ಆದರೆ @INCKarnataka ರಾಜ್ಯದಲ್ಲಿ ಇನ್ನಷ್ಟು ಯೋಜನೆ ಘೋಷಿಸಲಿ. ಪ್ರತಿಯೊಂದು ಯೋಜನೆಯೂ ಆ ಪಕ್ಷ ಅಸ್ತಿತ್ವಕ್ಕೆ ನಡೆಸುತ್ತಿರುವ ಹೆಣಗಾಟವನ್ನು ಜಗಜ್ಜಾಹೀರು ಮಾಡುತ್ತದೆ. ಜತೆಗೆ @priyankagandhi ಅವರಿಗೆ ಈ ಕ್ಷಣಕ್ಕೆ ಹೇಳಿದ್ದು ಮರುಕ್ಷಣಕ್ಕೆ ನೆನಪಿರುವುದಿಲ್ಲ ಎಂಬುದು ಕರ್ನಾಟಕದ ಜನತೆಗೆ ಗೊತ್ತಿದೆ ಎಂದು ಲೇವಡಿ ಮಾಡಿದೆ.

ಸ್ವ-ಸಹಾಯ ಗುಂಪುಗಳು
ಮತ್ತೊಂದು ಟ್ವೀಟ್‌ನಲ್ಲಿ ಬಿಜೆಪಿ, 'ಮಹಿಳೆಯರಿಂದ ಸ್ಥಾಪಿತವಾದ ಉದ್ದಿಮೆಗಳಿಗೆ ಸಾಮರ್ಥ್ಯಾಭಿವೃದ್ಧಿ, ಬ್ರ್ಯಾಂಡಿಂಗ್, ಮಾರ್ಕೆಟಿಂಗ್ ಹಾಗೂ ಕೌಶಲ್ಯ ತರಬೇತಿ ನೀಡಲು ರಾಜ್ಯದ 50,000 ಸ್ವಸಹಾಯ ಕೇಂದ್ರಗಳನ್ನು ಗುರುತಿಸಲಾಗಿದೆ. ಸ್ವ ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಒದಗಿಸಲು ಅಸ್ಮಿತೆ ಎಂಬ ಹೆಸರಿನಲ್ಲಿ ಮಾರಾಟ ಮೇಳಗಳನ್ನು ನಮ್ಮ ಸರ್ಕಾರ ನಡೆಸುತ್ತಾ ಬಂದಿದೆ. ಬಾಲ್ಯ ವಿವಾಹ ತಡೆಗೆ ಇರುವ ಸ್ಫೂರ್ತಿ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಮಹಿಳೆಯರ ಭದ್ರತೆ, ಬಿಜೆಪಿಯ ಬದ್ಧತೆ' ಎಂದು ಹೇಳಿದೆ.












Click it and Unblock the Notifications