Dharmasthala Case: ಧರ್ಮಸ್ಥಳದ ಕುರಿತು ಅಪಪ್ರಚಾರ; ಇಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ ಅಭಿಯಾನ ಆರಂಭ
ಬೆಂಗಳೂರು, ಆಗಸ್ಟ್ 16: ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ಖಂಡಿಸಿ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ನೇತೃತ್ವದಲ್ಲಿ ಇಂದಿನಿಂದ ಧರ್ಮಸ್ಥಳ ಚಲೋ ಅಭಿಯಾನ ಆರಂಭವಾಗಿದೆ. ಬೆಂಗಳೂರಿನ ನೆಲಮಂಗಲ ಟೋಲ್ ಮೂಲಕ ಸುಮಾರು 400ಕ್ಕೂ ಹೆಚ್ಚು ವಾಹನಗಳಲ್ಲಿ ಯಲಹಂಕ ಕ್ಷೇತ್ರದ ಭಕ್ತರೊಂದಿಗೆ ವಿಶ್ವನಾಥ್ ಅವರು ಶ್ರೀಕ್ಷೇತ್ರಕ್ಕೆ ಪ್ರಯಾಣ ಆರಂಭಿಸಲಿದ್ದಾರೆ.
"ಧರ್ಮಸ್ಥಳ ಚಲೋ" ಅಭಿಯಾನಕ್ಕೆ ಇಂದು ಬೆಳಿಗ್ಗೆ ಚಾಲನೆ ನೀಡಲಾಯಿತು. ಪೂಜಾ ವಿಧಿವಿಧಾನ ನೆರವೇರಿಸಿ ನೂರಾರು ವಾಹನಗಳ ಅಭಿಯಾನವನ್ನು ಆರಂಭಿಸಲಾಯಿತು. ಅಪಪ್ರಚಾರ ಖಂಡಿಸಿ ಯಾತ್ರೆ ನಡೆಯುತ್ತಿದ್ದು, ಸಂಜೆ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲಿದ್ದಾರೆ. ಶಾಸಕ ಎಸ್.ಆರ್. ವಿಶ್ವನಾಥ್, ಹಾಲು ಪ್ರಕೋಷ್ಠದ ರಾಜ್ಯ ಸಂಚಾಲಕ ಬೇಲೂರು ರಾಘವೇಂದ್ರ ಶೆಟ್ಟಿ, ಪ್ರಮುಖರು, ಕಾರ್ಯಕರ್ತರು, ಅಭಿಮಾನಿಗಳು ಇದ್ದರು.

ಧರ್ಮಸ್ಥಳ ವಿಚಾರವಾಗಿ ಮಾಜಿ ಉಪಮುಖ್ಯಮಂತ್ರಿ ಮತ್ತು ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ಮಾತನಾಡಿ, ಉಪ ಮುಖ್ಯಮಂತ್ರಿಯವರು ನಿಜಕ್ಕೂ ಮಂಜುನಾಥೇಶ್ವರನನ್ನು ನಂಬಿದ್ದರೆ, ಶ್ರೀಕ್ಷೇತ್ರ ಧರ್ಮಸ್ಥಳದ ವಿಷಯದಲ್ಲಿ ಹಿನ್ನೆಲೆಯಲ್ಲಿರುವ ವ್ಯಕ್ತಿಗಳ ತನಿಖೆ ಮಾಡಿ ಬಯಲಿಗೆಳೆಯಬೇಕು ಎಂದು ಒತ್ತಾಯಿಸಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳದ ವಿಷಯದಲ್ಲಿ ಜನರ ತಾಳ್ಮೆ, ಸಹನೆಯನ್ನು ಪರೀಕ್ಷೆ ಮಾಡುತ್ತಿದ್ದೀರಾ? ಸರಕಾರ ಬದುಕಿದೆಯೇ ಇಲ್ಲವೇ ಎಂದು ಗೊತ್ತಾಗಬೇಕಲ್ಲವೇ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಸರಕಾರ ಬದುಕಿದ್ದರೆ ತೋರಿಸಲಿ. ಯಾರಾದರೂ ತನಿಖೆಗೆ ಅಡಚಣೆ ಮಾಡಿದ್ದಾರಾ? ತನಿಖೆಯನ್ನು ಎಲ್ಲರೂ ಸ್ವಾಗತಿಸಿದ್ದಾರೆ. ಅನಾಮಿಕ ವ್ಯಕ್ತಿಯ ಕುರಿತಂತೆಯೂ ತನಿಖೆ ಆಗಬೇಕು ಎಂದು ಕೋರಿದರು. ಕೆಜಿ ಹಳ್ಳಿ, ಡಿಜೆ ಹಳ್ಳಿ ಘಟನೆ ಸಂದರ್ಭದಲ್ಲಿ ನೀವು ಅದನ್ನು ಸಮರ್ಥನೆ ಮಾಡಿದ್ದೀರಿ. ಪೊಲೀಸ್ ಠಾಣೆಗೆ ಬೆಂಕಿ, ಪೊಲೀಸರ ಮೇಲೆ ಹಲ್ಲೆ, ಪೊಲೀಸ್ ಜೀಪಿಗೆ ಬೆಂಕಿ, ಶಾಸಕರ ಮನೆಗೆ ಬೆಂಕಿ ಇಟ್ಟದ್ದನ್ನು ಸಮರ್ಥಿಸಿದ್ದೀರಿ ತಾನೇ ಎಂದು ಅವರು ಪ್ರಶ್ನಿಸಿದರು.
ಧರ್ಮಸ್ಥಳದಲ್ಲಿ ಇಂಥ ಘಟನೆ ನಡೆದಿದೆಯೇ? ಯೂ ಟ್ಯೂಬರ್‍ಗಳು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು. ಸಾಮಾಜಿಕ ಜಾಲತಾಣದಲ್ಲಿ ಇವರೇ ತನಿಖೆ ನಡೆಸಿ ಇವರೇ ತೀರ್ಪು ಕೊಡುತ್ತಾರೆ. ಇದರಿಂದ ಹಿಂದೂ ಸಮಾಜ- ಶ್ರೀ ಮಂಜುನಾಥೇಶ್ವರನನ್ನು ನಂಬುವ ಭಕ್ತರಿಗೆ ಬಹಳಷ್ಟು ನೋವಾಗಿದೆ ಎಂದು ತಿಳಿಸಿದರು. ಧರ್ಮಾಧಿಕಾರಿಗಳ ಮೇಲೂ ಆಪಾದನೆ ಮಾಡಿದ್ದನ್ನು ಆಕ್ಷೇಪಿಸಿದರು.
ಕೆಜಿ ಹಳ್ಳಿ, ಡಿಜೆ ಹಳ್ಳಿಯಲ್ಲಿ ಯಾರೋ ಒಬ್ಬ ವ್ಯಕ್ತಿ ಒಂದು ಪೋಸ್ಟ್ ಹಾಕಿದ್ದಕ್ಕೆ ಪೊಲೀಸ್ ಠಾಣೆಗೇ ಬೆಂಕಿ ಹಾಕಿದ್ದರು. ಶಾಸಕನ ಮನೆಯನ್ನೇ ಸುಟ್ಟು ಹಾಕಿದ್ದರು. ಪೊಲೀಸರ ವಾಹನ ಸುಟ್ಟು, ಪೊಲೀಸರ ಮೇಲೆ ಹಲ್ಲೆ ಮಾಡಲಾಗಿತ್ತು. ಆಗ ಇದೇ ಕಾಂಗ್ರೆಸ್ ಪಕ್ಷ ಅದನ್ನು ಸಮರ್ಥಿಸಿಕೊಂಡಿತ್ತು ಎಂದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದರೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸುತ್ತಾರೆ. ಧರ್ಮಸ್ಥಳ, ಧರ್ಮಾಧಿಕಾರಿಗಳ ವಿಷಯದಲ್ಲಿ ಬೇರೆ ಬೇರೆ ಪೋಸ್ಟ್ ಹಾಕಿದಾಗ ಇದೇ ಗೃಹ ಇಲಾಖೆ ಯಾಕೆ ಕಾನೂನು ಕ್ರಮ, ಸ್ವಯಂಪ್ರೇರಿತ ಮೊಕದ್ದಮೆ ದಾಖಲಿಸುತ್ತಿಲ್ಲ ಎಂದು ಪ್ರಶ್ನೆ ಮಾಡಿದರು.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications