ಸರ್ವಪಕ್ಷ ಸಭೆ; ಡಿ ಕೆ ಶಿವಕುಮಾರ್ ನಡೆಗೆ ಬಿಜೆಪಿಗರು ಆಕ್ರೋಶ: ಅಶ್ವಥ್ ನಾರಾಯಣ ಹೇಳಿದ್ದೇನು?
ಬೆಂಗಳೂರು, ಜೂನ್ 05: ಬೆಂಗಳೂರು ಅಭಿವೃದ್ದಿ ಹಾಗೂ ಮಳೆಯಿಂದ ಆಗುವ ಅನಾಹುತಗಳನ್ನ ಕತಪ್ಪಿಸುವತ್ತ ರಾಜ್ಯ ಸರ್ಕಾರ ಮುಂದಾಗಿದ್ದು, ಡಿಸಿಎಂ ಹಾಗೂ ಬೆಂಗಳೂರು ಅಭಿವೃದ್ದಿ ಸಚಿವ ಡಿ ಕೆ ಶಿವಕುಮಾರ್ ಸೋಮವಾರ ವಿಧಾನಸೌಧದಲ್ಲಿ ಸರ್ವಪಕ್ಷ ಸಭೆಯನ್ನ ಕರೆದಿದ್ದು, ರಿಯಾದ ಸಮಯಕ್ಕೆ ಸಭೆ ನಡೆಯದೇ ಹಿನ್ನಲೆ ಬಿಜೆಪಿ ನಾಯಕರು ಕಾದು ಕಾದು ಸಭೆಯಿಂದ ದೂರ ಉಳಿದಿದ್ದಾರೆ.
ಹೌದು, ಸೋಮವಾರ ಬೆಳಗ್ಗೆ 11ಕ್ಕೆ ಕರೆದಿದ್ದರು. ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ರೀತಿಯ ಸರ್ವ ಪಕ್ಷ ಸಭೆ ಆಯೋಜಿಸಲಾಗಿತ್ತು.ಆದರೆ, ಸಭೆ ಕರೆದಿರುವ ಡಿ ಕೆ ಶಿವಕುಮಾರ್ ಅವರೇ ಸರಿಯಾದ ಸಮಯಕ್ಕೆ ಸಭೆ ನಡೆಸಿಲ್ಲ, ಸಭೆಗೂ ಇನ್ನೂ ಬಂದಿಲ್ಲ ಎಂದು ಬಿಜೆಪಿ ನಾಯಕರು ಬೇಸರಗೊಂಡು ಸಭೆಗೆ ಬಂದಿದ್ದ ಬಿಜೆಪಿ ಶಾಸಕರು ವಾಪಸ್ ಹೋಗಿದ್ದಾರೆ.

ಇನ್ನೂ ಈ ವಿಚಾರವಾಗಿ ಮಾಧ್ಯಮಗಳ ಜೊತೆಗೆ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಮಾತನಾಡಿ, ಬೆಂಗಳೂರಲ್ಲಿ ಮಳೆ ಹಾಗೂ ಪ್ರವಾಹ ನಿರ್ವಹಣೆ ಸಲುವಾಗಿ ಸಭೆ ಕರೆಯಲಾಗಿತ್ತು. ನಿನ್ನೆ ಸಂಜೆ ವಾಟ್ಸಪ್ ಮೂಲಕ ಸಭೆಗೆ ಆಹ್ವಾನ ನೀಡಿದ್ದರು. ನಮಗೆ ಸಭೆಗೆ ಕರೆದು ಒಂದು ಗಂಟೆಯಿಂದ ಡಿ.ಕೆ ಶಿವಕುಮಾರ್ ಕಾಯಿಸಿದ್ದಾರೆ. ತಡವಾಗಿ ಆಗಮಿಸುವ ಬಗ್ಗೆ ಮಾಹಿತಿ ನೀಡಿರಲಿಲ್ಲ. ಈ ಮೂಲಕ ಉದ್ದೇಶಪೂರ್ವಕವಾಗಿ ಅವರ ನಡುವಳಿಕೆ ಪ್ರದರ್ಶಿಸಿದ್ದಾರೆ. ಹೀಗಾಗಿ ಸಭೆಯಿಂದ ನಿರ್ಗಮಿಸುತ್ತಿದ್ದೇವೆ ಎಂದು ಮಾಧ್ಯಮಗಳ ಮೂಲಕ ತಿಳಿಸಿದ್ದಾರೆ.
ಸಮಯಕ್ಕೆ ಸರಿಯಾಗಿ ಸಭೆ ಆರಂಭಿಸಿಲ್ಲವೆಂದು ಬಿಜೆಪಿ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದು, ಶಾಸಕಾರದ ಶಾಸಕ ಸೋಮಶೇಖರ್, ಭೈರತಿ ಬಸವರಾಜ್, ಅಶ್ವತ್ಥ್ ನಾರಾಯಣ, ಎಸ್.ಆರ್.ವಿಶ್ವನಾಥ್ , ಮುನಿರತ್ನ ಬೇಸರದಲ್ಲೇ ವಿಧಾನಸೌಧದಿಂದ ಹೊರಟು ಹೋಗಿದ್ದಾರೆ. ಅಲ್ಲದೇ ಒಂದು ಘಂಟೆಯ ಬಳಿಕ ಆರಂಭವಾದ ಡಿಕೆ ಶಿವಕುಮಾರ್ ನೇತೃತ್ವದ ಸಭೆಗೆ ಬಿಜೆಪಿ ನಾಯಕರಾದ ರವಿಸುಬ್ರಹ್ಮಣ್ಯ, ಎಂ.ಕೃಷ್ಣಪ್ಪ, ಸಿ.ಕೆ.ರಾಮಮೂರ್ತಿ, ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ ಭಾಗಿಯಾಗಿದ್ದಾರೆ.

ಬೆಂಗಳೂರು ಅಭಿವೃದ್ಧಿಗೆ ನಿಮ್ಮ ಸಂಪೂರ್ಣ ಸಹಕಾರ, ಸಲಹೆ ಅಗತ್ಯ: ಡಿಕೆಶಿ
ಚುನಾವಣೆ ರಾಜಕೀಯ ಮುಗೀತು. ಈಗ ರಾಜಕೀಯ ಗೊಡವೆ ಬೇಡ. ರಾಜಕೀಯವಾಗಿ ಸೈದ್ಧಾಂತಿಕ ಭಿನ್ನಾಭಿಪ್ರಾಯ, ವ್ಯತ್ಯಾಸ ಏನೇ ಇರಬಹುದು. ಅದನ್ನು ಪಕ್ಕಕ್ಕಿಡೋಣ. ಬೆಂಗಳೂರು ಅಭಿವೃದ್ಧಿಗೆ ಸಲಹೆ ಕೊಡಿ ಎಂದು ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.
ಮಾಜಿ ಪ್ರಧಾನಿ ವಾಜಪೇಯಿ ಅವರು ಬಹಳ ಹಿಂದೆಯೇ ವಿಶ್ವಮಟ್ಟದಲ್ಲಿ ಬೆಂಗಳೂರು ನಗರದ ಘನತೆ, ಪ್ರಾಮುಖ್ಯತೆ ಬಗ್ಗೆ ಒತ್ತಿ ಹೇಳಿದ್ದರು. ಈಗಿನ ಪ್ರಧಾನಿಯವರೂ ಅದನ್ನು ಬಹಳ ಸಾರಿ ಹೇಳಿದ್ದಾರೆ. ಹೀಗಾಗಿ ನಾವು-ನೀವೆಲ್ಲಾ ಸೇರಿ ಬೆಂಗಳೂರಿನ ಘನತೆ, ಗೌರವ, ಹೆಚ್ಚಿಸೋಣ. ನೀವು ಯಾವುದೇ ರಾಜಕೀಯ ಪಕ್ಷದವರು ಆಗಿರಬಹುದು. ಒಟ್ಟಿಗೆ ಕೆಲಸ ಮಾಡೋಣ. ರಾಜಕೀಯ ಬಿಟ್ಟು ಅಭಿವೃದ್ಧಿ ಮಾಡೋಣ. ರಾಜಕೀಯನೇ ಮಾಡ್ತೀನಿ ಅಂದ್ರೆ ನಾನು ಅದಕ್ಕೂ ರೆಡಿ. ಪ್ರೀತಿಗೂ ಸರಿ, ಸಂಘರ್ಷಕ್ಕೂ ರೆಡಿ. ಆದರೆ ನನಗೆ ದ್ವೇಷದ ರಾಜಕೀಯ ಬೇಕಿಲ್ಲ. ಅದರಲ್ಲಿ ನಂಬಿಕೆ ಇಲ್ಲ.
ಬೆಂಗಳೂರು ನಾಗರಿಕರು ಮೂಲಸೌಕರ್ಯ ಸಮಸ್ಯೆಯಿಂದ ಬಹಳ ತೊಂದರೆ ಅನುಭವಿಸಿದ್ದಾರೆ. ಭ್ರಷ್ಟಾಚಾರದಿಂದ ನಲುಗಿ ಹೋಗಿದ್ದಾರೆ. ಸಮರ್ಪಕ ನಾಗರಿಕ ಸೌಕರ್ಯ ಪೂರೈಕೆ ನಮ್ಮೆಲ್ಲರ ಕರ್ತವ್ಯ. ನೀವು ನನಗೆ ಸಲಹೆ ಕೊಡಿ. ನಿರ್ಮಲ ಮನಸ್ಸಿಂದ ತೆಗೆದುಕೊಳ್ಳುತ್ತೇನೆ. ಅನುಷ್ಠಾನಕ್ಕೆ ತರೋಣ. ಬೆಂಗಳೂರು ಗೌರವ ಹೆಚ್ಚಿಸೋಣ. ಬೆಂಗಳೂರಿನ ಯಾವ ಕ್ಷೇತ್ರಕ್ಕೆ ಎಷ್ಟೆಷ್ಟು ಪ್ರಮಾಣದ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ, ಜನಸಂಖ್ಯೆಗೆ ಅನುಗುಣವಾಗಿ ನೀರು ಪೂರೈಕೆ ಆಗುತ್ತಿದೆಯೇ ಎಂಬುದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ವರದಿ ಕೊಡಬೇಕು ಎಂದು ಹೇಳಿದ್ದಾರೆ.












Click it and Unblock the Notifications