ರಾಜೀನಾಮೆ ವಾಪಸ್ ಪಡೆಯಲಿದ್ದಾರೆ ಯಡಿಯೂರಪ್ಪ ಆಪ್ತ!
ಬೆಂಗಳೂರು, ಆಗಸ್ಟ್ 20 : ಬಿಜೆಪಿ ನಾಯಕ, ಮಾಜಿ ವಿಧಾನಪರಿಷತ್ ಸದಸ್ಯ ಬಿ.ಜೆ.ಪುಟ್ಟಸ್ವಾಮಿ ಅವರು ರಾಜೀನಾಮೆ ವಾಪಸ್ ಪಡೆಯಲಿದ್ದಾರೆ. ಯಡಿಯೂರಪ್ಪ ವಿರುದ್ಧ ಅಸಮಾಧಾನಗೊಂಡಿದ್ದ ಅವರು ಜೂನ್‌ನಲ್ಲಿ ರಾಜೀನಾಮೆ ನೀಡಿದ್ದರು.
ಬಿ.ಜೆ.ಪುಟ್ಟಸ್ವಾಮಿ ಅವರು ರಾಜೀನಾಮೆ ವಾಪಸ್ ಪಡೆಯುವುದಾಗಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದ್ದಾರೆ. ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಅವರು ರಾಜೀನಾಮೆ ಕೊಟ್ಟಿದ್ದರು.

ವಿಧಾನಪರಿಷತ್ ಚುನಾವಣೆಯಲ್ಲಿ ಯಡಿಯೂರಪ್ಪ ಅವರು ತಮ್ಮನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿ ಬಿ.ಜೆ.ಪುಟ್ಟಸ್ವಾಮಿ ರಾಜೀನಾಮೆ ನೀಡಿದ್ದರು. ಬಿ.ಎಸ್.ಯಡಿಯೂರಪ್ಪ ಅವರಿಗೆ 2 ಪುಟಗಳ ಪತ್ರವನ್ನು ಬರೆದಿದ್ದರು.
ಬಿಜೆಪಿ ಬಿಟ್ಟಿದ್ದು ಏಕೆ? : ವಿಧಾನಸಭೆಯಿಂದ ಪರಿಷತ್ತಿಗೆ 11 ಸದಸ್ಯರನ್ನು ಆಯ್ಕೆ ಮಾಡಲು ಜೂನ್ 11ರಂದು ಚುನಾವಣೆ ನಡೆದಿತ್ತು. 5 ಸದಸ್ಯರನ್ನು ಬಿಜೆಪಿ ಆಯ್ಕೆ ಮಾಡಿ ಕಳಿಸಬಹುದಿತ್ತು.
ರಘುನಾಥ ಮಲ್ಕಾಪುರೆ, ಎನ್.ರವಿಕುಮಾರ್, ತೇಜಸ್ವಿನಿ ಗೌಡ, ಕೆ.ಪಿ.ನಂಜುಂಡಿ, ಎಸ್.ರುದ್ರೇಗೌಡ ಅವರನ್ನು ಪರಿಷತ್‌ಗೆ ಆಯ್ಕೆ ಮಾಡಿ ಕಳಸಲಾಗಿತ್ತು. ಪರಿಷತ್ ಸ್ಥಾನದ ಆಕಾಂಕ್ಷಿಯಾಗಿದ್ದ ಬಿ.ಜೆ.ಪುಟ್ಟಸ್ವಾಮಿ ಅವರು ತಮ್ಮನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದರು.
ಈಗ ಅವರು ರಾಜೀನಾಮೆ ವಾಪಸ್ ಪಡೆಯುವುದಾಗಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ರಾಜೀನಾಮೆ ವಾಪಸ್ ಪಡೆಯಲಿದ್ದಾರೆಯೇ? ಎಂದು ಕಾದು ನೋಡಬೇಕು.












Click it and Unblock the Notifications