BS Yediyurappa: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ- ಯಡಿಯೂರಪ್ಪ ವಿರುದ್ಧ 'ಪೋಕ್ಸೊ' ಕೇಸ್
ಬೆಂಗಳೂರು, ಮಾರ್ಚ್ 15: ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಲಿಂಗಾಯತ ಸಮುದಾಯದ ಅಗ್ರನಾಯಕ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ 'ಪೋಕ್ಸೊ' ಪ್ರಕರಣ ದಾಖಲಾಗಿದೆ ಎಂದು 'ದಿ ಹಿಂದು' ವರದಿ ಮಾಡಿದೆ.
ಬೆಂಗಳೂರಿನ ಸದಾಶಿವನಗರ ಪೊಲೀಸ ಠಾಣೆಯಲ್ಲಿ ಗುರುವಾರ (ಮಾರ್ಚ್ 14) ತಡರಾತ್ರಿ 7 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಮಾಡಲಾಗಿದೆ ಎಂದು ಸಂತ್ರಸ್ತೆ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣದ ದಾಖಲಾಗಿದೆ. ಈ ದೂರಿನ ಆಧಾರದಲ್ಲಿ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಿಎಂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (81) ಅವರ ವಿರುದ್ಧ 2012 ರ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಸೆಕ್ಷನ್ ಅಡಿಯಲ್ಲಿ ಕೇಸು ದಾಖಲಾಗಿದೆ.

ಪೊಲೀಸರು 'ಪೋಕ್ಸೊ' ಕಾಯ್ದೆಯ ಸೆಕ್ಷನ್ 8 ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಎ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ ಎಂದು ಪೊಲೀಸ್ ಮೂಲಗಳು ದೃಢಪಡಿಸಿವೆ ಎಂದು ವರದಿ ಆಗಿದೆ.
ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯ ಜೊತೆಗಿದ್ದ ತಾಯಿ ಗುರುವಾರ ಸಂಜೆ ಪೊಲೀಸರಿಗೆ ದೂರು ಕೊಟ್ಟಿದ್ದಾರೆ. ಮಧ್ಯರಾತ್ರಿ ಪ್ರಕರಣ ದಾಖಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಖಚಿತವಾಗಿದೆ.

ದೌರ್ಜನ್ಯ ಪ್ರಕರಣವು ಕಳೆದ ತಿಂಗಳ ಫೆಬ್ರವರಿ 02 ರಂದು ನಡೆದಿದೆ ಎನ್ನಲಾಗಿದೆ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿಯ ಸಹಾಯವನ್ನು ಪಡೆಯಲು ಸಂತ್ರಸ್ತ ಮಗಳ ಜೊತೆ ತಾಯಿ ತೆರಳಿದ್ದ ವೇಳೆ ಲೈಂಗಿಕ ದೌರ್ಜನ್ಯದ ಘಟನೆ ಸಂಭವಿಸಿದೆ ಎಂದು ವರದಿ ಆಗಿದೆ.
ಕೆಲ ರಾಜಕಾರಣಿಗಳು, ಪೊಲೀಸರ ವಿರುದ್ಧ ಮಹಿಳೆ ದೂರು
ಯಡಿಯೂರಪ್ಪ ಅವರ ವಿರುದ್ಧ ಪ್ರಕರಣ ದಾಖಲಿಸಿರುವ ಶಿವಮೊಗ್ಗ ಜಿಲ್ಲೆ ಮೂಲಕ ಈ ಮಹಿಳೆಯ ಅನೇಕ ಅಧಿಕಾರಿಗಳು, ರಾಜಕೀಯ ನಾಯಕರ ವಿರುದ್ಧವು ಸೇರಿ ಸುಮಾರು 53 ಪ್ರಕರಣ ದಾಖಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿಂದೆ ಕೆಲವು ಬಾರಿ ತಮ್ಮ ಸಮಸ್ಯೆಗಳನ್ನು ಯಡಿಯೂರಪ್ಪ ಬಳಿ ಹೇಳಿಕೊಂಡಿದ್ದರು ಎನ್ನಲಾಗಿದೆ.
ಯಡಿಯೂರಪ್ಪ ಬೆಂಬಲಿಗರಿಗೆ ಶಾಕ್
ಲೋಕಸಭಾ ಚುನಾವಣೆ ಹೊತ್ತಿನಲ್ಲಿ ರಾಜ್ಯದ ಹಿರಿಯ ನಾಯಕರ ವಿರುದ್ಧ ಇಂಥದ್ದೊಂದು ಪ್ರಕರಣ ದಾಖಲಾಗಿದ್ದನ್ನು ನಂಬಬೇಕೋ, ಬೇಡವೋ ಎಂದು ಜನರು ಗೊಂದಲ್ಲಿದ್ದಾರೆ. ಇದು ನಿಜವೇ? ಚುನಾವಣೆಯ ದುರುದ್ದೇಶಕ್ಕೆ ಯಡಿಯೂರಪ್ಪ ಒಳಗಾದರೆ ಎಂದು ಕೆಲವು ಮಾತನಾಡಿಕೊಳ್ಳುತ್ತಿದ್ದಾರೆ.
ಆದರೆ ಬಿಜೆಪಿ ನಾಯಕರಿಗೆ ಅದರಲ್ಲೂ ಬಿಎಸ್ ಯಡಿಯೂರಪ್ಪ ಅವರ ಬೆಂಬಲಿಗರು, ಕಾರ್ಯಕರ್ತರಲ್ಲಿ ಈ ಪೋಕ್ಸೊ ದೂರು ದಾಖಲು ಘಟನೆ ಆಘಾತ ನೀಡಿದೆ. ಚುನಾವಣೆ ಹೊತ್ತಿನಲ್ಲಿ ಎಲ್ಲರೂ ಪ್ರಚಾರ, ಟಿಕೆಟ್ ಹಂಚಿಕೆ ಗೆಲುವು, ಸೋಲಿನ ಲೆಕ್ಕಾಚಾರದಲ್ಲಿದ್ದರು. ಈ ಮಧ್ಯೆ ಶುಕ್ರವಾರ ಬೆಳ್ಳಂಬೆಳಗ್ಗೆ ಪೋಕ್ಸೋ ಕೇಸ್ ದಾಖಲಾಗಿದ್ದು ಬಹಿರಂಗವಾಯಿತು.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ ಸಂಬಂಧ ಬಿಜೆಪಿ ಪಕ್ಷದ ನಾಯಕರು, ರಾಜ್ಯ ಸರ್ಕಾರದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯೆಗೆ ಜನ ಕಾಯುತ್ತಿದ್ದಾರೆ ಎನ್ನಲಾಗಿದೆ.
ಫೆಬ್ರವರಿಯಲ್ಲಿ ಸಂತ್ರಸ್ತೆಯ ತಾಯಿಯಡಿಯೂರಪ್ಪ ಬಳಿ ದೂರು ನೀಡಲು ಹೋದಾಗ ಸಂತ್ರಸ್ತೆ ಮೇಲೆ ದೌರ್ಜನ್ಯ ನಡೆದಿದೆ ಎಂಬ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೇ ಮಹಿಳೆ ಯಡಿಯೂರಪ್ಪ ಅವರ ಜೊತೆಗೆ ವಿವಿಧ ಪ್ರಕರಣಗಳ ಕುರಿತು ಮಾತನಾಡಿದ್ದಾರೆ. ಹಳೆ ಪ್ರಕರಣ ತನಿಖೆಗೆ ಸಂತ್ರಸ್ತೆಯ ತಾಯಿ ಎಸ್‌ಐಟಿ ರಚನೆ ಮಾಜಿ ಸಿಎಂ ಬಳಿ ಆಗ್ರಹಿಸಿದ್ದಾರೆ.
ಪೋಕ್ಸೋ ಕೇಸ್ ಬಗ್ಗೆ ಯಡಿಯೂರಪ್ಪ ಸ್ಪಷ್ಟನೆ
ತಾಯಿ ಮತ್ತು ಮಗಳು ಇಬ್ಬರು ಕೆಲವು ಭಾರಿ ಸಹಾಯಕ್ಕೆ ನನ್ನ ಬಳಿ ಹಲವು ಬಾರಿ ಬಂದು ಹೋಗಿದ್ದರು. ನಾನು ಕರೆಸಿ ಸಹಾಯ ಮಾಡಲು ಹೋದರೆ ನನ್ನ ಮೇಲೆಯೇ ಈ ರೀತಿ ಆರೋಪ ಮಾಡಿದ್ದಾರೆ. ಅವರ ಆರೋಪಗಳು ನಿರಾಧಾರವಾಗಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಅವರು ತಮ್ಮ ಮೇಲಿನ ಪೋಕ್ಸೋ ಪ್ರಕರಣ ಕುರಿತು ಸ್ಪಷ್ಟನೆ ನೀಡಿದರು.
ಮನೆ ಬಾಗಿಲಿಗೆ ಬಂದವರನ್ನು ಒಳಗೆ ಕರೆಸಿ ಅವರ ಸಮಸ್ಯೆ ಕೇಳಿದ್ದೇನೆ. ಸಹಾಯ ಮಾಡಲು ಮುಂದಾಗಿ ಪೊಲೀಸ್ ಅಧಿಕಾರಿಗಳ ಬಳಿ ನಾನೇ ಅವರನ್ನು ಕಳುಹಿಸಿದ್ದೇನೆ. ಈಗ ನೋಡಿದರೆ ನನ್ನ ಮೇಲೆ ಅಪವಾದ ಮಾಡಿದ್ದಾರೆ. ಎಲ್ಲವನ್ನು ಎದುರಿಸಲು ಸಿದ್ಧನಿದ್ದೇನೆ. ದೂರಿದರು ಎಂದಾಕ್ಷಣ ಇದನ್ನು ರಾಜಕೀಯಪ್ರೇರಿತ ಎನ್ನುವುದಿಲ್ಲ ಎಂದು ತಮ್ಮ ನಿಲುವನ್ನು ಅವರು ಸ್ಪಷ್ಟಪಡಿಸಿದರು.
-
Dawood Ibrahim: "ರಿಯಲ್ ಡಾನ್ ದಾವೂದ್ ಇಬ್ರಾಹಿಂ" ಸ್ಟಿಕ್ಕರ್ ಹಾಕಿಸಿದ್ದ ಬಸ್ ಚಿಕ್ಕಮಗಳೂರಿನಲ್ಲಿ ಪೊಲೀಸ್ ವಶಕ್ಕೆ -
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications