ಕಿಚ್ಚ ಸುದೀಪ್‍ಗೆ ಅವಮಾನ ಮಾಡಿದ ಕಾಂಗ್ರೆಸ್, ಜೆಡಿಎಸ್‍ಗೆ ಈ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸುತ್ತಾರೆ: ಗೌರವ್ ಭಾಟಿಯ

ಬೆಂಗಳೂರು,ಏಪ್ರಿಲ್8:‌ ರಾಜ್ಯ ವಿಧಾನಸಭಾ ಚುನಾವಣೆಯ ಬಳಿಕ ಮತ್ತೆ ಅಧಿಕಾರಕ್ಕೆ ಬರಲು ತಯಾರಿ ನಡೆಸಿರುವ ರಾಜ್ಯ ಬಿಜೆಪಿ ಹೈಕಮಾಂಡ್‌ ನಾಯಕರ ಜೊತೆಗೆ ಸ್ಟಾರ್‌ ನಟರನ್ನ ಚುನಾವಣಾ ಪ್ರಚಾರಕ್ಕೆ ಕರೆತರುವ ಪ್ರಯತ್ನಗಳು ನಡೆಯುತ್ತಿವೆ. ಈಗಾಗಾಲೇ ದೊಡ್ಡ ಅಭಿಮಾನಿ ಬಳಗವನ್ನ ಹೊಂದಿರುವ ಕಿಚ್ಚ ಸುದೀಪ್ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಬೆಂಬಲ ಘೋಷಣೆ ಮಾಡಿದ್ದು, ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆ ಕಾರಣವಾಗಿದೆ.

ನಟ ಸುದೀಪ್‌ ಅವರ ನಡೆಗೆ ನಮ್ಮ ತಕರಾರಿಲ್ಲ, ಆದರೆ 40% ಕಮಿಷನ್ ಆರೋಪ ಹೊತ್ತಿರುವ ಸರ್ಕಾರವನ್ನು ಬೆಂಬಲಿಸುವುದು ಸೂಕ್ತವೇ? ಎಂದು ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರು ವಾಗ್ದಾಳಿ ನಡೆಸುತ್ತಿದ್ದು, ಇದಕ್ಕೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.

BJP Leader Gaurav Bhatia Fierce Attack Against Congress And JDS

ಈ ಕುರಿತು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯ ಮಾತನಾಡಿ, ಕನ್ನಡಿಗರ ನೆಚ್ಚಿನ ನಟ ಕಿಚ್ಚ ಸುದೀಪ್ ಅವರ ನಿಲುವನ್ನು ಪ್ರಶ್ನಿಸುವ ಮತ್ತು ಅವರನ್ನು ಅವಮಾನಿಸುವ ಮೂಲಕ ಕನ್ನಡಿಗರಿಗೆ ಅವಮಾನ ಮಾಡಿದ ಕಾಂಗ್ರೆಸ್- ಜೆಡಿಎಸ್ ಪಕ್ಷಕ್ಕೆ ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್, ಜೆಡಿಎಸ್ ಪಕ್ಷದ ಮುಖಂಡರು ತಮ್ಮ ಮೂಗಿನ ನೇರಕ್ಕೆ ಮಾತನಾಡುತ್ತಾರೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ತಮಗೆ ಬೇಕಾದಂತೆ ವಿಶ್ಲೇಷಿಸಿ ಬಳಸುತ್ತಾರೆ ಎಂದು ಟೀಕಿಸಿದ ಅವರು, ಕಿಚ್ಚ ಸುದೀಪ್ ಅವರು ಪ್ರಜಾಸತ್ತೆಯ ಸ್ವಾತಂತ್ರ್ಯದ ಆಧಾರದಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಮತ್ತು ಬಿಜೆಪಿ ಬೆಂಬಲಿಸುವ ನಿರ್ಣಯ ತೆಗೆದುಕೊಂಡಿದ್ದಾರೆ. ಆದರೆ, ಇವೆರಡು ಪಕ್ಷಗಳು ಕಿಚ್ಚ ಸುದೀಪ್ ವಿರುದ್ಧ ಟೀಕೆ ಮಾಡುತ್ತಿವೆ ಎಂದರು.

BJP Leader Gaurav Bhatia Fierce Attack Against Congress And JDS

ಕಾಂಗ್ರೆಸ್ ಸಮರ್ಥನೆ ಮಾಡುವವರಾದರೆ ಅದು ಪ್ರಜಾಸತ್ತೆಗೆ ಪೂರಕ ಎನ್ನುವ ನಿಲುವು ಆ ಪಕ್ಷದ ಮುಖಂಡರದು. ಬಿಜೆಪಿಯಲ್ಲಿ ಪ್ರಚಾರಕ್ಕೆ ಹೊರಗಿನ ಅಗತ್ಯವಿದೆ ಎಂದು ಆಕ್ಷೇಪಿಸಿದ್ದಾರೆ. ಇದು ಸರಿಯಲ್ಲ. ಭಾರತ್ ಜೋಡೋ ಹೆಸರಿನ ಭಾರತ್ ತೋಡೋ ಯಾತ್ರೆ ಮಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಜೊತೆ ದೇಶದ್ರೋಹಿಗಳು, ತುಕ್ಡೇ ತುಕ್ಡೇ ಗ್ಯಾಂಗಿನವರು ಹೆಜ್ಜೆ ಹಾಕಿದ್ದರು. ರಾಹುಲ್ ಗಾಂಧಿಯವರಿಗೆ ಜನಪ್ರಿಯತೆ ಇಲ್ಲದ ಕಾರಣ ಸ್ವರಾ ಭಾಸ್ಕರ್ ಅವರಂಥವರು ಬೇಕಾಯಿತೇ ಎಂದು ಪ್ರಶ್ನಸಿದರು. ದೇಶದ ವಿರುದ್ಧ ಘೋಷಣೆ ಕೂಗುವವರು ಅವರಿಗೆ ಬೇಕಾಯಿತು ಎಂದು ಆರೋಪಿಸಿದರು.

ಕಾಂಗ್ರೆಸ್- ಜೆಡಿಎಸ್‍ನದು ಅನಾರೋಗ್ಯದ ಮನಸ್ಥಿತಿ, ಬೂಟಾಟಿಕೆ ಎಂದು ಟೀಕಿಸಿದ ಅವರು, ಕಿಚ್ಚ ಸುದೀಪ್ ಅವರು ಪರಿಶ್ರಮದಿಂದ ಸ್ವತಃ ಜನರ ನಡುವೆ ಬೆಳೆದು ಅಪಾರ ಜನಪ್ರಿಯತೆ ಗಳಿಸಿದವರು. ರಾಹುಲ್ ಗಾಂಧಿಯಂತೆ ಕುಟುಂಬದ ಆಧಾರದಲ್ಲಿ ಬಂದವರಲ್ಲ. ಈ ಬುಡಕಟ್ಟು ಸಮಾಜದವರನ್ನು ಟೀಕಿಸುತ್ತಿದ್ದಾರೆ. ಇದು ಕನ್ನಡಿಗರಿಗೆ ಮಾಡಿದ ಅವಮಾನವಲ್ಲವೇ? ಎಂದು ಪ್ರಶ್ನಿಸಿದರು.

ರಾಹುಲ್ ಗಾಂಧಿ ವಿದೇಶದಲ್ಲಿ ಭಾರತದ ಪ್ರಜಾಪ್ರಭುತ್ವದ ವಿರುದ್ಧ ಮಾತನಾಡಿದರೆ ಅದು ಅಭಿವ್ಯಕ್ತಿ ಸ್ವಾತಂತ್ರ್ಯ ಎಂದು ಕಾಂಗ್ರೆಸ್ ಹೇಳುತ್ತದೆ. ಆದರೆ, ಕಿಚ್ಚ ಸುದೀಪ್ ಅವರಂಥ ಸಿನಿತಾರೆ ತಮ್ಮ ಬೆಂಬಲವನ್ನು ಯಾರಿಗೆ ಕೊಡಬೇಕೆಂದು ಆಯ್ಕೆ ಮಾಡುವುದು ಅಭಿವ್ಯಕ್ತಿ ಸ್ವಾತಂತ್ರ್ಯ ಅಲ್ಲವೇ? ಎಂದು ಕೇಳಿದರು. ಬಿಜೆಪಿ ರಾಷ್ಟ್ರಪತಿ ಸ್ಥಾನವನ್ನು ಬುಡುಕಟ್ಟು ಸಮುದಾಯಕ್ಕೆ ಕೊಟ್ಟಿದೆ ಎಂದು ನೆನಪಿಸಿದರು.

ಡಿ.ಕೆ.ಶಿವಕುಮಾರ್, ಕಿಚ್ಚ ಸುದೀಪ್ ಅವರನ್ನು ಭೇಟಿ ಮಾಡಿ ತಮಗೆ ಬೆಂಬಲ ಕೊಡಲು ಕೋರಿದ್ದರು ಎಂಬ ಮಾಹಿತಿ ಇದೆ ಎಂದ ಅವರು, ಕಾಂಗ್ರೆಸ್ ಎಂದರೆ ಭ್ರಷ್ಟಾಚಾರಕ್ಕೆ ಮತ್ತು ಕುಟುಂಬ ರಾಜಕೀಯಕ್ಕೆ ಸ್ಪಷ್ಟ ಉದಾಹರಣೆ ಎಂದು ತಿಳಿಸಿದರು.

ಕರ್ನಾಟಕದ ಜನತೆ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಕಡೆ ಆದ್ಯತೆ ಕೊಟ್ಟ ಬಿಜೆಪಿಯ ಕಡೆ ಒಲವು ತೋರುತ್ತಿದ್ದಾರೆ. ದುರ್ಬಲ ಸಮುದಾಯಕ್ಕೆ ಒಳ ಮೀಸಲಾತಿ ಕೊಟ್ಟ ಸರಕಾರ ನಮ್ಮ ಬಿಜೆಪಿಯದು. ಕಿಚ್ಚ ಸುದೀಪ್ ಅವರ ಬೆಂಬಲದಿಂದ ಕಾಂಗ್ರೆಸ್ -ಜೆಡಿಎಸ್ ಇನ್ನಷ್ಟು ದುರ್ಬಲವಾಗುವ ಆತಂಕ ಅವೆರಡು ಪಕ್ಷದವರಲ್ಲಿದೆ. ಅವರ ವಿರುದ್ಧ ಮಾಡಿದ ಟೀಕೆ ಕನ್ನಡಿಗರಿಗೆ ಮಾಡಿದ ಅವಮಾನ ಎಂದು ತಿಳಿಸಿದರು.

ದೇಶವಿರೋಧಿಗಳು, ಟುಕ್ಡೇ ಟುಕ್ಡೇ ಗ್ಯಾಂಗ್ ಜೊತೆ ಇರುವ ವ್ಯಕ್ತಿಗಳು ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕುತ್ತಾರೆ ಎಂದು ಟೀಕಿಸಿದ ಅವರು, ಕರ್ನಾಟಕದ ಕುವರ ಬಿಜೆಪಿ ಬೆಂಬಲಿಸಿದರೆ ಕಾಂಗ್ರೆಸ್ ಮತ್ತು ಜೆಡಿಎಸ್‍ಗೆ ಆತಂಕ ಯಾಕೆ? ಕಾಂಗ್ರೆಸ್ ಜೆಡಿಎಸ್ ವಿನಾಶ ಸನ್ನಿಹಿತ.ವಾಗಿದೆ. ಇವೆರಡು ಪಕ್ಷಗಳಿಗೆ ಪ್ರಜ್ಞಾವಂತ ಜನತೆ ಸಮರ್ಥ ಉತ್ತರವನ್ನು ನೀಡಲಿದ್ದಾರೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+