ತುಮಕೂರು ಬಿಜೆಪಿ ಟಿಕೆಟ್‌ಗೆ ಮಾಧುಸ್ವಾಮಿ ಪೈಪೋಟಿ: ವಿ ಸೋಮಣ್ಣ ಕೈ ತಪ್ಪುತ್ತಾ ಟಿಕೆಟ್?
ಬೆಂಗಳೂರು, ಜನವರಿ 17: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹಲವು ಹಿರಿಯ ನಾಯಕರು ಹೀನಾಯವಾಗಿ ಸೋಲು ಅನುಭವಿಸಿದ್ದ ಹಿನ್ನೆಲೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಸೋತ ಹಲವು ನಾಯಕರು ರೆಡಿಯಾಗುತ್ತಿದ್ದಾರೆ.
ಹೌದು, ಬಿಜೆಪಿ ನಾಯಕರ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಸೋಮಣ್ಣ ಅವರು, ಮುಂದಿನ ಲೋಕಸಭಾ ಚುನಾವಣೆಗೆ ತುಮಕೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದು, ಇದೀಗ ಬಿಜೆಪಿಯಲ್ಲಿಯೇ ತುಮಕೂರು ಕ್ಷೇತ್ರದ ಟಿಕೆಟ್ ಗಾಗಿ ತೀವ್ರ ಪೈಪೋಟಿ ಶುರುವಾಗಿದೆ.

ತುಮಕೂರು ಹಾಲಿ ಸಂಸದರಾದ ಜಿ ಎಸ್ ಬಸವರಾಜು ಅವರಿಗೆ ಈ ಬಾರಿ ಟಿಕೆಟ್ ಸಿಗುವುದು ಅನುಮಾನವಾಗಿದೆ. ಏಕೆಂದರೆ, ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿ ಸೋಲು ಕಂಡ ವಿ ಸೋಮಣ್ಣ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಹೈಕಮಾಂಡ್ ನಾಯಕರ ಜೊತೆಗೆ ಚರ್ಚಿಸಿದ್ದಾರೆ ಎನ್ನಲಾಗಿತ್ತು. ಆದರೆ, ಮಾಜಿ ಸಚಿವ, ಬಿಜೆಪಿ ಮುಖಂಡ ಜೆಸಿ ಮಾಧುಸ್ವಾಮಿ ಅವರು ತುಮಕೂರಿನಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಕೋರಿದ್ದಾರೆ ಎಂಬ ಸುಳಿವು ದೊರೆತಿದೆ.
ಈ ಹಿಂದೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ದ ವಿ ಸೋಮಣ್ಣ, ಇಷ್ಟು ದಿನಗಳ ಕಾಲ ತುಮಕೂರು ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿತ್ತು. ಇತ್ತ ಅಸಮಾಧಾನಗೊಂಡ ಹಲವು ಬಿಜೆಪಿಯ ಹಿರಿಯ ನಾಯಕರನ್ನ ವಿಜಯೇಂದ್ರ ಭೇಟಿ ಮಾಡಿ ಅಸಮಾಧಾನವನ್ನ ಶಮನಗೊಳಿಸಿದ್ದಾರೆ. ಆದರೆ, ವಿ ಸೋಮಣ್ಣ ಅವರನ್ನ ಭೇಟಿಯಾಗದೇ ಇರುವುದು ಇನ್ನಷ್ಟು ಅನುಮಾನಗಳಿಗೆ ಕಾರಣವಾಗಿದೆ. ಇತ್ತ ಬದಲಾದ ರಾಜಕೀಯ ವಿದ್ಯಮಾನದಿಂದಾಗಿ ರಾಜ್ಯಸಭೆಯಿಂದ ಟಿಕೆಟ್ ಕೋರಿದ್ದರೆ ಎಂಬ ಮಾತುಗಳು ಕೇಳಿ ಬಂದಿದೆ.

ವಿಧಾನಸಭೆ ಚುನಾವಣೆಯ ಸೋಲಿನ ಬಳಿಕ ಪಕ್ಷದ ಚಟುವಟಿಕೆಯಿಂದ ದೂರ ಉಳಿದಿದ್ದ ಸೋಮಣ್ಣ ಕಳೆದ ವಾರ ದೆಹಲಿಯಲ್ಲಿ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಅವರು ಹೈಕಮಾಂಡ್‌ನಿಂದ ಲೋಕಸಭೆ ಟಿಕೆಟ್‌ಗೆ ಬೇಡಿಕೆ ಇಡಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಅವರು ರಾಜ್ಯಸಭಾ ಟಿಕೆಟ್ ಕೇಳಿರುವುದಾಗಿ ಹೇಳಿದ್ದರು. ಆದರೆ, ಕಠಿಣವಾದ ಮೂರು ಲೋಸಕಭೆ ಕ್ಷೇತ್ರಗಳನ್ನು ಕೊಡಿ ಗೆಲ್ಲಿಸಿಕೊಂಡು ಬರುವೆ ಎಂದು ಬಿಜೆಪಿ ಹೈಕಮಾಂಡ್ ನಾಯಕರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
ಸೋಮಣ್ಣ ಘೋಷಣೆ ಬಳಿಕ ಮಾಧುಸ್ವಾಮಿ ಬಿಜೆಪಿಯಿಂದ ಲೋಕಸಭೆ ಪಡೆಯುವ ಆಕಾಂಕ್ಷಿಯಾಗಿದ್ದಾರೆ. ಕೆಲವು ವರದಿಗಳ ಪ್ರಕಾರ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೂಡ ಮಾಧುಸ್ವಾಮಿಗೆ ಬೆಂಬಲ ನೀಡಿದ್ದಾರೆ. ಆದರೆ, ತುಮಕೂರು ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಜಿ.ಎಸ್. ಬಸವರಾಜ್ ಸೇರಿದಂತೆ ಹಲವು ಶಾಸಕರು ಸೋಮಣ್ಣ ಅವರ ಬೆಂಬಲಕ್ಕೆ ನಿಂತಿದ್ದಾರೆ. ಆದರೆ, ಇದೀಗ ಮಾಜಿ ಸಚಿವ ಜಿಸಿ ಮಾಧುಸ್ವಾಮಿ ವಿರುದ್ಧ ಹರಿಹಾಯ್ದಿದ್ದಾರೆ ಎನ್ನಲಾಗಿದೆ












Click it and Unblock the Notifications